Shivaji Maharaj statue: ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಶಾಕ್ ಕೊಟ್ಟ ರಮೇಶ್ ಜಾರಕಿಹೊಳಿ!
ಶಿವಾಜಿ ಪ್ರತಿಮೆ ವಿಚಾರವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮಾಜಿ ಸಚಿವ ರಮೇಶ ಜಾರಕಿಹೊಳಿ ಮಧ್ಯೆ ರಾಜಕೀಯ ಸಂಘರ್ಷ ಶುರುವಾಗಿತ್ತು. ಸಿಎಂ ಬಸವರಾಜ ಬೊಮ್ಮಾಯವರಿಂದಲೇ ಶಿವಾಜಿ ಪ್ರತಿಮೆ ಲೋಕಾರ್ಪಣೆಗೊಳಿಸಲು ನಿರ್ಧಾರ ಮಾಡುವ ಮೂಲಕ ರಮೇಶ್ ಜಾರಕಿಹೊಳಿ ಭರ್ಜರಿ ಶಾಕ್ ಕೊಟ್ಟಿದ್ದಾರೆ.
ಬೆಳಗಾವಿ (ಫೆ.24) : ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಪ್ರತಿಷ್ಠೆಯ ಕಣವಾಗಿ ರಾಜ್ಯದ ಗಮನ ಸೆಳೆದಿದೆ.
ಶಿವಾಜಿ ಪ್ರತಿಮೆ(Shivaji statue) ವಿಚಾರವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(MLA Lakshmi Hebbalkar) ಮತ್ತು ಮಾಜಿ ಸಚಿವ ರಮೇಶ ಜಾರಕಿಹೊಳಿ(Ramesh jarkiholi) ಮಧ್ಯೆ ರಾಜಕೀಯ ಸಂಘರ್ಷ ಶುರುವಾಗಿತ್ತು. ಸಿಎಂ ಬಸವರಾಜ ಬೊಮ್ಮಾಯವರಿಂದಲೇ ಶಿವಾಜಿ ಪ್ರತಿಮೆ ಲೋಕಾರ್ಪಣೆಗೊಳಿಸಲು ನಿರ್ಧಾರ ಮಾಡುವ ಮೂಲಕ ರಮೇಶ್ ಜಾರಕಿಹೊಳಿ ಭರ್ಜರಿ ಶಾಕ್ ಕೊಟ್ಟಿದ್ದಾರೆ.
ರಾಜಹಂಸಗಡ ಶಿವಾಜಿ ಮಹಾರಾಜರ ಪ್ರತಿಮೆ: ಪಾಟೀಲ್ - ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ 'ದಾಖಲೆ' ದಂಗಲ್!
ಬೆಳಗಾವಿ ಗ್ರಾಮೀಣ ಕ್ಷೇತ್ರ(Belgaum Rural Constituency)ದ ಐತಿಹಾಸಿಕ ರಾಜಹಂಸಗಡ ಕೋಟೆ(Rajahamsgadh fort)ಯಲ್ಲಿ ನಿರ್ಮಾಣವಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 50 ಲಕ್ಷರೂ. ಅನುದಾನದಲ್ಲಿ ನಿರ್ಮಾಣಗೊಂಡಿರುವ ಪ್ರತಿಮೆ.
ಈಗಾಗಲೇ ಲೋಕಾರ್ಪಣೆಗೆ ಸಿದ್ಧಗೊಂಡಿರುವ ಶಿವಾಜಿ ಪ್ರತಿಮೆ. ಜಿಲ್ಲಾಡಳಿತ ಈಗಾಗಲೇ ಸಿದ್ಧತೆ ಕಾರ್ಯ ನಡೆಸಿದೆ. ಮಾರ್ಚ್ 2ರಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆಗೆ ದಿನಾಂಕ ನಿಗದಿಯಾಗಿದೆ.
ಇಂದು ಸಭೆ ನಡೆಸಲಿರುವ ಜಾರಕಿಹೊಳಿ:
ಶಿವಾಜಿ ಮಹಾರಾಜರ ಪ್ರತಿಮೆ ಉದ್ಘಾಟನೆ ಹಿನ್ನೆಲೆ ಇಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಗ್ರಾಮೀಣ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ. ಈ ಸಭೆಯಲ್ಲಿ ಕಾರ್ಯಕ್ರಮದ ಕುರಿತಂತೆ ಹಲವು ವಿಷಯಗಳನ್ನ ಚರ್ಚೆ ನಡೆಸಲಿದೆ.
ಶಿವಾಜಿ ಪ್ರತಿಮೆ ವಿಚಾರವಾಗಿ ಕ್ರೆಡಿಟ್ ವಾರ್:
ಸರ್ಕಾರಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಕಾಂಗ್ರೆಸ್ ಮುಖಂಡರ(Congress Leaders) ಸಮ್ಮುಖದಲ್ಲಿ ಮಾರ್ಚ್ 5ರಂದು ಲೋಕಾರ್ಪಣೆಗೊಳಿಸಲು(Inauguration) ಸಿದ್ಧತೆ ನಡೆಸಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(AICC President mallikarjun kharge), ಕೆಪಿಸಿಸಿ ಅಧ್ಯಕ್ಷ ಡಿಕೆಶಿ(DK Shivakumar), ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರನ್ನು ಶಿವಾಜಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಿದ್ದ ಲಕ್ಷ್ಮೀ ಹೆಬ್ಬಾಳ್ಕರ್. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು. ಆದರೆ ಮಾಧ್ಯಮ ಪ್ರಕಟಣೆ ನೋಡಿ ಸಿಡಿದಿದ್ದೆ ರಮೇಶ್ ಜಾರಕಿಹೊಳಿ ಮತ್ತು ಬೆಂಬಲಿಗರು. ಶಿಷ್ಟಾಚಾರ ಪ್ರಕಾರ ಸರ್ಕಾರದ ವತಿಯಿಂದ ಪ್ರತಿಮೆ ಲೋಕಾರ್ಪಣೆಗೆ ಪಟ್ಟು ಹಿಡಿದಿದ್ದ ರಮೇಶ್ ಜಾರಕಿಹೊಳಿ.
ರಮೇಶ ಜಾರಕಿಹೊಳಿ ಕೋಟೆಯಲ್ಲಿ ಲಕ್ಷ್ಮೀ ಸ್ಪರ್ಧಿಸ್ತಾರಾ?: ಮಾಜಿ ಸಚಿವರನ್ನು ಸೋಲಿಸಲು ಕಾಂಗ್ರೆಸ್ ರಣತಂತ್ರ
ಒಂದೇ ಕಾಣಿಸಿಕೊಳ್ತಾರಾ ಹೆಬ್ಬಾಳ್ಕರ್-ಜಾರಕಿಹೊಳಿ?
ಶಿವಾಜಿ ಪ್ರತಿಮೆ ಲೋಕಾರ್ಪಣೆಗೆ ಮಾ.2 ರಂದು ದಿನಾಂಕ ನಿಗದಿಯಾಗಿದ್ದು. ಅಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ. ಸರ್ಕಾರಿ ಅನುದಾನದಲ್ಲಿ ನಿರ್ಮಾಣಗೊಂಡಿದ್ದ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಲು ತಯಾರಿ ನಡೆಸಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ರಮೇಶ್ ಜಾರಕಿಹೊಳಿ. ಇದೀಗ ಮಾರ್ಚ್ 2ರಂದು ನಿಗದಿಯಾಗಿರುವ ಶಿವಾಜಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ತಾರಾ? ಎಂದು ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.