Asianet Suvarna News Asianet Suvarna News

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್‌ಗೆ ಎಚ್ಷರಿಕೆ ಗಂಟೆ: ಬಸವರಾಜ ಬೊಮ್ಮಾಯಿ

ದೇಶದ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಕರ್ನಾಟಕ ಕಾಂಗ್ರೆಸ್‌ಗೂ ಎಚ್ಚರಿಕೆಯ ಗಂಟೆಯಾಗಿದೆ. 

India 4 states election results is warning call for Karnataka Congress said Basavaraja Bommai sat
Author
First Published Dec 3, 2023, 7:43 PM IST

ಬೆಂಗಳೂರು (ಡಿ.03): ದೇಶದ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕ ಕಾಂಗ್ರೆಸ್‌ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಬಹ್ಹೆ ಮಾಧ್ಯಮಗಳಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ  ಚುನಾವಣೆ ಲೋಕಸಭೆ ಚುನಾವಣೆ ಗಿಂತ ಮೊದಲು ಬಂದಿರುವುದರಿಂದ ಇದನ್ನು ಸೆಮಿ ಫೈನಲ್ ಅಂತ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಂತೂ ಮೇಲಿಂದ‌ಮೇಲೆ ಹೇಳಿದ್ದಾರೆ. ಈ ಫಲಿತಾಂಶ  ಲೋಕಸಭೆ ಚುನಾವಣೆಗೆ ಸ್ಪಷ್ಟ ಸಂದೇಶ ನೀಡಿದೆ. ಮಧ್ಯಪ್ರದೇಶ ಮೂರನೇ ಎರಡರಷ್ಟು ಬಹುಮತ ಪಡೆದಿದ್ದೇವೆ. ಛತ್ತಿಸ್ ಘಡ, ರಾಜಸ್ತಾನದಲ್ಲೂ ಸ್ಪಷ್ಟ ಬಹುಮತ ಪಡೆದಿದ್ದೇವೆ. ತೆಲಂಗಾಣದಲ್ಲಿ ನಮ್ಮ ಸಂಖ್ಯೆ 1 ರಿಂದ 11 ಕ್ಕೆ ಏರಿದ್ದೇವೆ. ಈ‌ ಫಲಿತಾಂಶಕ್ಕೆ ಕಾರಣವಾಗಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಮಿತ್ ಶಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ ಸೇರಿದಂತೆ ಎಲ್ಲ ನಾಯಕರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ದೇಶದಲ್ಲಿ ಮತ್ತೊಂದು ರಾಜ್ಯಕ್ಕೆ ಯೋಗಿ ಮುಖ್ಯಮಂತ್ರಿ: ಯುಪಿಗೆ ಆದಿತ್ಯನಾಥ- ರಾಜಸ್ಥಾನಕ್ಕೆ ಬಾಲಕನಾಥ?

ಈ ಚುನವಣೆಯಲ್ಲಿ ಕಾಂಗ್ರೆಸ್ ಪ್ರಧಾನಿ ಮೋದಿ ಅವರನ್ನು ಟಾರ್ಗೆಟ್ ಮಾಡಿದರು. ಜಾತಿ ರಾಜಕಾರಣ, ಸನಾತನ ಧರ್ಮದ ವಿರುದ್ದ ಅಪ ಪ್ರಚಾರ ಮಾಡಿದ್ದಾರೆ. ಗ್ಯಾರೆಂಟಿ ಗಳನ್ನು ಆಪ್  ಆರಂಭ ಮಾಡಿತ್ತು. ಅದನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಮುಂದುವರೆಸಿತು. ಸುಳ್ಳು ಹೇಳಿ ಜನರ ವಿಶ್ವಾಸ ಗಳಿಸುವ ಪ್ರಯತ್ನ ಮಾಡಿದರು. ಗ್ಯಾರೆಂಟಿ ಗಳನ್ನು ಜನ ತಿರಸ್ಕರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲೂ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುತ್ತದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಗಳು  ಕೇವಲ 25% ರಷ್ಟು ಜನರಿಗೆ ಮಾತ್ರ ತಲುಪಿದೆ. ಅಧಿವೇಶನ ಮುಗಿದ ಮೇಲೆ ಬಿಜೆಪಿಯಿಂದ ಗ್ಯಾರೆಂಟಿಗಾಗಿ ಸರಿಯಾದ ಅನುಷ್ಠಾನಕ್ಕಾಗಿ ಬೃಹತ್ ಚಳುವಳಿ ನಡೆಸಲು ತೀರ್ಮಾನ ಮಾಡಿದ್ದೆವೆ. ಗ್ಯಾರೆಂಟಿ ದೊರೆಯದ ಫಲಾನುಭವಿಗಳ ಮುಂದಾಳತ್ವದಲ್ಲಿ ಹೋರಾಟ ರೂಪಿಸಲಾಗುವುದು ಎಂದರು.

ಅತಂತ್ರ ಸ್ಥಿತಿಗೆ ತಲುಪಿದ ಇಂಡಿ ಒಕ್ಕೂಟ: ಇಂಡಿ ಒಕ್ಕೂಟದ ಪರಿಸ್ಥಿತಿ ಈಗ ನಡೆದ ಚುನಾವಣೆಗಳನಲ್ಲಿ ಛಿದ್ರ ವಾಗಿದೆ. ಕಾಂಗ್ರೆಸ್ ಅದರಿಂದ ದೂರವಾಗುತ್ತಿದೆ. ಲೊಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಸಂಪೂರ್ಣ ನೆಲ ಕಚ್ಚಲಿದೆ. ಇನ್ನು ಈ ಫಲಿತಾಂಶ ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ. ಕರ್ನಾಟಕದಲ್ಲಿ ಇಷ್ಟೊಂದು ಬರ ಇದೆ. ಜಿಲ್ಲಾಧಿಕಾರಿಗಳ ಅಕೌಂಟ್ ನಲ್ಲಿ 400 ಕೋಟಿಗೂ ಅಧಿಕ ರೂ. ಹಣ ಇದ್ದರೂ, ಅದನ್ನು ಬಿಡುಗಡೆ ಮಾಡದೇ ಕೇಂದ್ರದ ಕಡೆಗೆ ಬೆರಳು ಮಾಡುತ್ತಿದ್ದಾರೆ‌. ಹಿಂದಿನ ಯಾವುದೇ ಸರ್ಕಾರ ಈ ರೀತಿ ಮಾಡಿಲ್ಲ. ಮೊದಲು ತನ್ನ ಬಳಿ ಇರುವ ಹಣವನ್ನು ರೈತರಿಗೆ ಪರಿಹಾರ ನೀಡಬೇಕು. ನಾವು ಪ್ರವಾಹ ಬಂದಾಗ ಮೊದಲು ಪರಹಾರ ನೀಡಿದ್ದೇವು. ಅತಿ ಹೆಚ್ಷು ಭ್ರಷ್ಟಾಚಾರ ಇರುವ ರಾಜ್ಯ ಕರ್ನಾಟಕ, ಪಿಎಸ್ಬೈ ಹಗರಣದ ಕುರಿತು ನಾವು ಚಾರ್ಜ್ ಸೀಟ್ ಸಲ್ಲಿಸಿದ್ದರೂ ಮತ್ತೆ ಆಯೋಗ ಮಾಡಿದ್ದಾರೆ ಎಂದರು.

ಪಿಎಸ್‌ಐ ಪರೀಕ್ಷೆ ಮುಂದೂಡಿಕೆಗೆ ರಕ್ತದಲ್ಲಿ ಪತ್ರ ಬರೆದ ಅಭ್ಯರ್ಥಿಗಳು: ಮಸ್ಕಿ ಶಾಸಕರಿಂದಲೂ ಸಿಎಂಗೆ ಮನವಿ

ಪ್ರಧಾನಿ ಮೋದಿ ವರ್ಚಸ್ಸು ಹೆಚ್ಚಾಗಿದೆ: ದೇಶದಲ್ಲಿ ಈಗಿನ ವಾತಾವರಣ ನೋಡಿದರೆ, ಮತ್ತೆ ಕೇಂದ್ರದಲ್ಲಿ ನರೇಂದ್ರ ಮೋದಿಯವರು ಪ್ರಧಾನಿ ಯಾಗುತ್ತಾರೆ. ರಾಜ್ಯದಲ್ಲಿ 25 ಎಂಪಿ ಸ್ಥಾನ ಗೆಲ್ಲುತ್ತೇವೆ. ಜೆಡಿಎಸ್ ಜೊತೆಗಿನ ಹೊಂದಾಣಿಕೆ ನಮಗೆ ಹೆಚ್ಚು ಅನುಕೂಲವಾಗಲಿದೆ. ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು  ಕರ್ನಾಟಕ ಗೆದ್ದರೆ ಇಡಿ ದೇಶ ಗೆದ್ದಂತೆ ಅಂತ ಹೇಳುತ್ತಾರೆ. ಪ್ರಧಾನಿ ಮೊದಿಯವರ ವರ್ಚಸ್ಸು ಈಗ ಮತ್ತೆ ಹೆಚ್ಚಾಗಿದೆ. ಕಾಂಗ್ರೆಸ್ ನ ಯಾವ ನಾಯಕರಿಗೂ ಮೋದಿಯವರ ಶೇ 1% ರಷ್ಟೂ ವರ್ಚಸ್ಸಿಲ್ಲ. ಮೋದಿಯವರು ಪ್ರಧಾನಿ ಎನ್ನುವ ಅಹಂ ಬಿಟ್ಟು ಹೊರಾಟ ಮಾಡುತ್ತಾರೆ ಈ ಸ್ವಭಾವ ಯಾವ ನಾಯಕರಿಗೂ‌ ಇರಲಿಲ್ಲ. ಈ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಹೇಳಿದರು.

Follow Us:
Download App:
  • android
  • ios