ಸನಾತನ ಧರ್ಮ ಅಂತ್ಯಗೊಳಿಸುವುದೇ ಇಂಡಿಯಾ ಮೈತ್ರಿ ಒಕ್ಕೂಟದ ಉದ್ದೇಶ, ಬಿಜೆಪಿ ವಾಗ್ದಾಳಿ!
ಡಿಎಂಕೆ ಸಚಿವ ನೀಡಿದ ಸನಾತನ ಧರ್ಮ ನಾಶದ ಹೇಳಿಕೆ ಇಂಡಿಯಾ ಮೈತ್ರಿ ಒಕ್ಕೂಟಕ್ಕೆ ತೀವ್ರ ಹಿನ್ನಡೆ ತಂದಿದೆ. ಕಾಂಗ್ರೆಸ್ ಸೇರಿದಂತೆ ಹಲವು ನಾಯಕರು ಉದನಿಧಿನಿ ಸ್ಟಾಲಿನ್ ಹೇಳಿಕೆ ಬೆಂಬಲಿಸಿದ್ದಾರೆ. ಇದರ ಪರಿಣಾಮ ಇಂಡಿಯಾ ಮೈತ್ರಿ ಒಕ್ಕೂಟ ಸನಾತನ ಧರ್ಮದ ಅಂತ್ಯಕ್ಕೆ ಹುಟ್ಟಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ನವದೆಹಲಿ(ಸೆ.12) ತಮಿಳುನಾಡು ಸಚಿವ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ನಾಶಕ್ಕೆ ಕರೆಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಸೇರಿದಂತೆ ಹಲವು ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷಗಳು ಸ್ಟಾಲಿನ್ ಹೇಳಿಕೆಯನ್ನು ಬೆಂಬಲಿಸಿದೆ. ಇನ್ನು ಕೆಲ ಪಕ್ಷಗಳು ತಟಸ್ಥ ನಿಲುವ ತಾಳಿದೆ. ಆದರೆ ವಿರೋಧಿಸಿಲ್ಲ. ಇದರಿಂದ ಇಂಡಿಯಾ ಒಕ್ಕೂಟಕ್ಕೆ ತೀವ್ರ ಹಿನ್ನಡೆ ತಂದಿದೆ. ಇದರ ಬೆನ್ನಲ್ಲೇ ಬಿಜೆಪಿ ಸತತ ವಾಗ್ದಾಳಿ ನಡೆಸಿದೆ. ಇಂಡಿಯಾ ಮೈತ್ರಿ ಒಕ್ಕೂಟದ ಪ್ರಮುಖ ಉದ್ದೇಶ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಇಂಡಿಯಾ ಮೈತ್ರಿ ಒಕ್ಕೂಟ ರಚನೆಯಾಗಿರುವುದೇ ಸನಾತನ ಧರ್ಮವನ್ನು ಅಂತ್ಯಗೊಳಿಸುವುದು ಹಾಗೂ ಹೆಜ್ಜೆ ಹೆಜ್ಜೆಯಲ್ಲಿ ಸನತಾನ ಧರ್ಮವನ್ನು ವಿರೋಧಿಸುವುದೇ ಆಗಿದೆ ಎಂದು ಬಿಜೆಪಿ ನಾಯಕ ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ. ಇಂಡಿಯಾ ಮೈತ್ರಿ ಒಕ್ಕೂಟದ ಪಕ್ಷ ಡಿಎಂಕೆ ನಾಯಕರು ಸನಾತನ ಧರ್ಮ ಅಂತ್ಯಗೊಳಿಸಲು ಕರೆ ಕೊಟ್ಟಿದ್ದಾರೆ. ಯೂರೋಪ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಮತ್ತೆ ಹಿಂದುತ್ವ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಇನ್ನು ಇಂಡಿಯಾ ಒಕ್ಕೂಟದ ಹಲವು ನಾಯಕರು ಸನಾತನ ಧರ್ಮ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಇವರ ಉದ್ದೇಶ ಸ್ಪಷ್ಟವಾಗಿದೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸನಾತನ ಧರ್ಮ ನಿರ್ಮೂಲನೆಗೆಂದೇ I.N.D.I.A ಬಣ ರಚಿಸಲಾಗಿದೆ: ಮತ್ತೊಬ್ಬ ಡಿಎಂಕೆ ಸಚಿವನ ವಿಡಿಯೋ ವೈರಲ್
ಸೋನಿಯಾ ಗಾಂಧಿ ಈ ಕುರಿತು ಮೌನವಹಿಸಿದ್ದಾರೆ. ಹಲವು ನಾಯಕರು ಸನಾತನ ವಿರುದ್ಧವೇ ಮಾತನಾಡುತ್ತಿದ್ದಾರೆ ಎಂದು ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ. ಸನಾತನ ಧರ್ಮ ವಿರುದ್ಧ ಹೇಳಿಕೆ ನೀಡುವ ಮೂಲಕ ಮತಬ್ಯಾಂಕ್ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಇಂತಹ ಹೇಳಿಕೆಗಳನ್ನು ಯಾರೂ ಸಹಿಸುವುದಿಲ್ಲ ಎಂದು ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ.
ಸನಾತನ ಧರ್ಮ ನಿರ್ಮೂಲನೆ ಕುರಿತು ಹೇಳಿಕೆ ನೀಡಿ ದೇಶವ್ಯಾಪಿ ಟೀಕೆಗೆ ಗುರಿಯಾಗಿದ್ದ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಇತ್ತೀಚೆಗೆ ಬಿಜೆಪಿಯನ್ನು ವಿಷಸರ್ಪಕ್ಕೂ ಮತ್ತು ಅದರ ಮಿತ್ರ ಪಕ್ಷ ಎಐಎಡಿಎಂಕೆಯನ್ನು ಕಸಕ್ಕೂ ಹೋಲಿಸುವ ಮೂಲಕ ಮತ್ತೊಂದು ವಿವಾದ ಸೃಷ್ಟಿಸಿದ್ದರು. ಡಿಎಂಕೆ ಶಾಸಕ ಸಭಾ ರಾಜೇಂದ್ರನ್ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಉದಯನಿಧಿ, ‘ಸರ್ಪವೊಂದು ಕಸದತೊಟ್ಟಿಯಿಂದ ನಮ್ಮ ಮನೆಗೆ ಪ್ರವೇಶಿಸಿದೆ. ನಾವು ಸರ್ಪವನ್ನು ನಿರ್ಮೂಲನೆ ಮಾಡಬೇಕಿದ್ದರೆ, ಮೊದಲಿಗೆ ಕಸ ಇರದಂತೆ ನೋಡಿಕೊಳ್ಳಬೇಕು. ಹೀಗಾಗಿ 2024ರ ಚುನಾವಣೆಯಲ್ಲಿ ತಮಿಳುನಾಡಿನಿಂದ ಬಿಜೆಪಿ ಮತ್ತು ಎಐಎಡಿಎಂಕೆ ಎರಡನ್ನೂ ನಿರ್ಮೂಲನೆ ಮಾಡಲು ಜನ ಅಣಿಯಾಗಬೇಕು. 2021ರಲ್ಲಿ ನಾವು ಗುಲಾಮರನ್ನು ವಿಧಾನಸಭೆಯಿಂದ ಗಂಟುಮೂಟೆ ಕಟ್ಟಿಕಳುಹಿಸಿದೆವು. ಇದೀಗ 2024ರಲ್ಲಿ ಅವರ ನಾಯಕರನ್ನೂ ಮನೆಗೆ ಕಳುಹಿಸುವ ಕೆಲಸ ಆಗಬೇಕು’ ಎಂದು ಹೇಳಿದರು.
ಸನಾತನ ಧರ್ಮದವರನ್ನು ಕಾಗೆಗಳಿಗೆ ಹೋಲಿಸಿದ ಪ್ರಕಾಶ್ ರಾಜ್!