Asianet Suvarna News Asianet Suvarna News

ದೇಶ ನಡಿತಿರೋದು ಭಗವದ್ಗೀತೆ ಮೇಲೆ ಅಲ್ಲ, ಸಂವಿಧಾನದ ಮೇಲೆ: ಸಚಿವ ಪ್ರಿಯಾಂಕ್‌ ಖರ್ಗೆ

ಸರ್ಕಾರಗಳು ನಡೆಯೋದು ಸಂವಿಧಾನ ಮೇಲೆ. ಬಸವ ತತ್ವ, ಅಂಬೇಡ್ಕರ್ ತತ್ವ ಮೇಲೆ ಸರ್ಕಾರ ನಡೀತಿದೆ. ಹಿಂದಿನ ಸರ್ಕಾರ ಹಿಂದುತ್ವದ ಮೇಲೆ ನಡೀತಿತ್ತು: ಸಚಿವ ಪ್ರಿಯಾಂಕ್‌ ಖರ್ಗೆ 

India Runs not on Bhagavad Gita but on the Constitution Says Minister Priyank Kharge grg
Author
First Published Dec 27, 2023, 10:16 AM IST

ಹುಬ್ಬಳ್ಳಿ(ಡಿ.27):  ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಇವಾಗ ಸಂವಿಧಾನದ ಸರ್ಕಾರ ಇದೆ. ದೇಶ ನಡಿತಿರೋದು ಭಗವದ್ಗೀತೆ ಮೇಲೆ ಅಲ್ಲ, ಕುರಾನ್ ಮೇಲೆ ಅಲ್ಲ, ಬೈಬಲ್ ಮೇಲೆ ಅಲ್ಲ. ದೇಶ ನಡಿತಿರೋದು ಸಂವಿಧಾನದ ಮೇಲೆ. ಯಾರು ಏನೆ ಅಂದ್ರು ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರವೇ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. 

ಇಂದು(ಬುಧವಾರ) ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು,  ಸರ್ಕಾರಗಳು ನಡೆಯೋದು ಸಂವಿಧಾನ ಮೇಲೆ. ಬಸವ ತತ್ವ, ಅಂಬೇಡ್ಕರ್ ತತ್ವ ಮೇಲೆ ಸರ್ಕಾರ ನಡೀತಿದೆ. ಹಿಂದಿನ ಸರ್ಕಾರ ಹಿಂದುತ್ವದ ಮೇಲೆ ನಡೀತಿತ್ತು ಎಂದು ಹೇಳಿದ್ದಾರೆ. 

ಕನ್ನಡಿಗರು ಪ್ರಧಾನಿ ಆಗ್ತಾರೆ ಅಂದ್ರೆ ಬೇಡ ಅಂತೀರಾ?: ಸಚಿವ ಪ್ರಿಯಾಂಕ ಖರ್ಗೆ

ಪೀಠದ ಮೇಲೆ ಕುಳಿತು ಕಾಗೇರಿ ನಾನು ಆರ್‌ಎಸ್‌ಎಸ್‌ನವರು ಎಂದಿದ್ರು. ಕೋವಿಡ್ ಕಾಲದಲ್ಲಿ ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದಾರೆ. ಯತ್ನಾಳ್‌ ಆರೋಪಕ್ಕೆ ವಿಜಯೇಂದ್ರ ಉತ್ತರ ಕೊಡಬೇಕು. ವಿಜಯೇಂದ್ರ, ಯತೀಂದ್ರ ಮೇಲೆ ಶ್ಯಾಡೋ ಸಿಎಂ ಅಂತಾ ಆರೋಪ ಮಾಡಿದ್ರು. ಕಳೆದ ಸರ್ಕಾರದಲ್ಲಿ ಶ್ಯಾಡೋ ಸಿಎಂ ಯಾರಿದ್ರು? ಅಂತ ಖರ್ಗೆ ಪ್ರಶ್ನಿಸಿದ್ದಾರೆ. 

ಯತ್ನಾಳ್‌ ದಾಖಲೆ ಬಿಡುಗಡೆ ಮಾಡ್ತೀವಿ ಅಂತಾರೆ. ಯತ್ನಾಳ್‌ ಅವರಲ್ಲಿ ನಾನು ಕರ್ನಾಟಕದ ಜನರ ಪರ ಮನವಿ ಮಾಡ್ತೀನಿ. ನೀವು ದಾಖಲೆ ಕೊಡಿ. ನೀವು ಪ್ರಾಮಾಣಿಕರು ಅಂತ ಗೊತ್ತಿದೆ. ಯವುದೇ ದಾಖಲೆ ಇದ್ರೆ ನಾವು ಜಸ್ಟೀಸ್ ಮೈಕಲ್ ಕುನ್ನಾ ಅವರ ಸಮಿತಿ ಇದೆ. ಅವರಿಗೆ ದಾಖಲೆ ಕೊಡಿ ಅಂತ ತಿಳಿಸಿದ್ದಾರೆ. 

40 ಸಾವಿರ ಕೋಟಿ ಹಗರಣ ಇದೆ, ಹೆಣದ ಮೇಲೆ ಹಣ ಮಾಡಿದ್ದಾರೆ ಅಂದ್ರೆ ಮನುಷ್ಯತ್ವ ಇಲ್ಲ. ಇದು ಕಾಂಗ್ರೆಸ್ ನಾಯಕರ ಆರೋಪ ಅಲ್ಲ. ಮಾಜಿ ಕೇಂದ್ರ ಸಚಿವ, ಹಾಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ  ಆರೋಪವಾಗಿದೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದಾರೆ. 

ಅಮಿತ್ ಶಾ ಅಸಮರ್ಥ ಹೋಂ ಮಿನಿಸ್ಟರ್: ಸಚಿವ ಪ್ರಿಯಾಂಕ್ ಖರ್ಗೆ

ಕೋವಿಡ್ ಭ್ರಷ್ಟಾಚಾರದಲ್ಲಿ ಕೇಂದ್ರಕ್ಕೂ ಪಾಲ ಹೋಗಿರಬಹುದು. 40 ಪರ್ಸೆಂಟ್ ಸರ್ಕಾರ ಬಿರುದು ಬಂದಿರೋದು ಬಿಜೆಪಿಯವರಿಂದ. ಕೇಂದ್ರ ನಾಯಕರು, ರಾಜ್ಯ ನಾಯಕರಿಗೂ ಪಾಲು ಹೋಗಿದೆ ಎಂದು ಆರೋಪಿಸಿದ್ದಾರೆ. 
ಬ್ರಿಟಿಷರ ಬೂಟು ನೆಕ್ಕೋರು ಅನ್ನೋ ಹರಿಪ್ರಸಾದ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಅದರಲ್ಲಿ ತಪ್ಪೇನಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹರಿಪ್ರಸಾದ್‌ ಮಾತಿಗೆ ಧ್ವನಿಗೂಡಿಸಿದ್ದಾರೆ. 

ಕ್ಷಮಾ ಪತ್ರ ಬರೆದಿದ್ದು ಯಾರು? ಬ್ರಿಟಿಷರ ಬಳಿ ಪೆನ್ಶನ್ ತಗೊಂಡಿದ್ದು ಯಾರೂ?. ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸ್ವಂತ ಇತಿಹಾಸ ಇಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆ ಏನು ಇಲ್ಲ. ಅವರು ಸೃಷ್ಟಿಸಬೇಕಾಗಿದೆ, ಹಾಗಾಗಿ ವಾಟ್ಸಪ್ ಯುನಿವರ್ಸಿಟಿಯಲ್ಲಿ ಸುಳ್ಳು ಹಬ್ಬಿಸ್ತಾರೆ. ಅದನ್ನೆ ಯುವಕರು ನಂಬತಾರೆ. ಬಿಜೆಪಿಯವರು ಇತ್ತೀಚೆಗೆ ಹುಟ್ಟಿರೋದು. ಈಗ ಯಾರ ಯಾರ ಬಿಜೆಪಿ ಶಾಸಕರು, ಸಂಸದರು ಇದಾರೆ ಅವರ ಪೂರ್ವಜರು ಕಾಂಗ್ರೆಸ್ ಗೆ ವೋಟ್ ಹಾಕೀರ್ತಾರಲ್ಲ. ಸಾವರಕರ್ ಗೆ ಹೇಗೆ ವೀರ ಅನ್ನೋ ಬಿರುದು ಬಂತು?. ಇದಕ್ಕೆಲ್ಲ ಉತ್ತರ ಕೊಡಲ್ಲ ಅಂತ ಹೇಳಿದ್ದಾರೆ. 

Follow Us:
Download App:
  • android
  • ios