ಕಾಂಗ್ರೆಸ್ ಬಹುದೊಡ್ಡ ಸುಳ್ಳಿನ ಪಕ್ಷ; ಇಂದಿರಾ ಗಾಂಧಿ ಗರೀಬಿ ಹಠಾವೋ ಘೋಷಣೆಯೇ ಉತ್ತಮ ಉದಾಹರಣೆ: ಬೊಮ್ಮಾಯಿ ಟೀಕೆ
ದೇಶದಲ್ಲಿ ಕಾಂಗ್ರೆಸ್ ಬಹುದೊಡ್ಡ ಸುಳ್ಳಿನ ಪಕ್ಷವಾಗಿದೆ. ಇಂದಿರಾಗಾಂಧಿ ಗರೀಬಿ ಹಠಾವೋ ಎಂದು ಘೋಷಣೆ ಮಾಡಿದ್ದರು. ಆದರೆ, ಈಗಲೂ ಬಡತನ ಜೀವಂತವಿರುವುದೇ ಕಾಂಗ್ರೆಸ್ ಸುಳ್ಳಿಗೆ ಅತ್ಯುತ್ತಮ ಸಾಕ್ಷಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ (ಏ.07): ನಮ್ಮ ದೇಶದಲ್ಲಿ ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ನಿರಂತರವಾಗಿ ಸುಳ್ಳು ಹೇಳುತ್ತಲೇ ಬಂದಿದೆ. ಇಂದಿರಾಗಾಂಧಿ ಪ್ರಧಾನಿಯಾದಾಗ ಗರೀಬಿ ಹಠಾವೊ ಎಂದು ಘೋಷಣೆ ಮೊಳಗಿಸಿದ್ದರು. ಆದರೆ, ದೇಶದಲ್ಲಿ ಈಗಲೂ ಬಡತನ ಜೀವಂತವಾಗಿದೆ. ಅವರು ಸುಳ್ಳು ಹೇಳುತ್ತಾರೆ ಎನ್ನುವುದಕ್ಕೆ ಇಂದೊಂದೆ ಅತ್ಯುತ್ತಮ ಸಾಕ್ಷಿ ಸಾಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ನದಿ ಹರಳಹಳ್ಳಿಯಲ್ಲಿ ಚುನಾವಣಾ ಪ್ರಚಾರಕ್ಕೂ ಮುಂಚೆ ಮಾಧ್ಯಮಗಳಿಗೆ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ನಾಯಕರು ಒಬ್ಬೊಬ್ಬರು ಒಂದೊಂದು ಸುಳ್ಳು ಹೇಳುತ್ತಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದರು. ಕಾಂಗ್ರೆಸ್ ಪಕ್ಷ ಹುಟ್ಟಿದ್ದೇ ಸುಳ್ಳಿನಿಂದ. ಮಹಾತ್ಮಾ ಗಾಂಧಿಯವರು ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸುವಂತೆ ಹೇಳಿದ್ದರು. ಇವರು ಕಾಂಗ್ರೆಸ್ ನ್ನು ವಿಸರ್ಜಿಸದೆ ಸುಳ್ಳು ಹೇಳಿಕೊಂಡೆ ಬರುತ್ತಿದ್ದಾರೆ ಎಂದು ಹೇಳಿದರು.
ಕಚ್ಚತೀವು ಬಳಿಕ ಮತ್ತೊಂದು ವಿವಾದ, ನೆಹರೂ ತಿರಸ್ಕಾರದಿಂದ 1950ರಲ್ಲಿ ಪಾಕ್ ಪಾಲಾಯ್ತಾ ಗ್ವಾದರ್?
ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಈಗಾಗಲೇ ರಾಜ್ಯದಲ್ಲಿ ಲೋಕಸಭಾ ಕಣ ಸಿದ್ದವಾಗಿದೆ. ನಮಗೆ ಗೆಲ್ಲುವ ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ. ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೋದಿಗೆ ಹ್ಯಾಟ್ರಿಕ್ ಗೆಲುವು ಕೊಟ್ಟ ಚುನಾವಣಾ ಸಮೀಕ್ಷೆ, ಎನ್‌ಡಿಎ-ಇಂಡಿಯಾ ಕೂಟದ ಬಲಾಬಲ ಬಹಿರಂಗ!
ಹಾವೇರಿಯ ರಾಕ್ ಸ್ಟಾರ್ ಹೋರಿ ನಿಧನಕ್ಕೆ ಬೊಮ್ಮಾಯಿ ಬೇಸರ: ರಾಜ್ಯದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದ ನಮ್ಮ ಹಾವೇರಿಯ ಹೆಮ್ಮೆಯ ರಾಕ್ ಸ್ಟಾರ್ ಹೋರಿ ಇನ್ನಿಲ್ಲ ಎಂಬ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೋರಿ ಬೆದರಿಸುವ ಸ್ಪರ್ಧೆ ಎಲ್ಲಿಯೇ ಇದ್ದರೂ ಅಲ್ಲಿ ರಾಕ್ ಸ್ಟಾರ್ ಇದ್ದಾನೆಂದರೆ ಉಳಿದವರೆಲ್ಲರಿಗೂ ಸೋಲು ಖಚಿತ ಎನ್ನುವಷ್ಟರ ಮಟ್ಟಿಗೆ ರಾಕ್ ಸ್ಟಾರ್ ಹೋರಿ ಜನಪ್ರಿಯವಾಗಿತ್ತು. ಅಗಲಿದ ಅಭಿಮಾನಿಗಳ ನೆಚ್ಚಿನ ರಾಕ್ ಸ್ಟಾರ್ ಗೆ ಅಂತಿಮ ನಮನಗಳು. ಮುಂದಿನ ಜನ್ಮದಲ್ಲಿ ಹೋರಿ ಹಬ್ಬದ ತವರೂರಾಗಿರುವ ಹಾವೇರಿಯಲ್ಲಿಯೇ ಮತ್ತೊಮ್ಮೆ ಹುಟ್ಟಿ ಬಾ ಎಂದು ಪ್ರಾರ್ಥಿಸಿದ್ದಾರೆ.