ಕೈಗಾರಿಕೋದ್ಯಮಿಗಳ ಪ್ರತಿಭಟನೆ, ವಿದ್ಯುತ್ ನೀತಿ ಹಳಿ ತಪ್ಪಿರುವುದಕ್ಕೆ ಸಾಕ್ಷಿ: ಮಾಜಿ ಸಿಎಂ ಬೊಮ್ಮಾಯಿ
ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು ರಾಜ್ಯದ ವಿದ್ಯುಚ್ಛಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರು (ಜೂ.23): ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು ರಾಜ್ಯದ ವಿದ್ಯುಚ್ಛಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ಬೃಹತ್ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ನೀತಿ ಗ್ರಾಹಕರು ಮತ್ತು ಕೈಗಾರಿಕೋದ್ಯಮಿಗಳಿಗೆ ಮಾರಕವಾಗಿರುವುದು ದುರ್ದೈವ ಮತ್ತು ಖಂಡನೀಯ ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಂದಿನ ದಿನದಲ್ಲಿ ಸಾಮಾನ್ಯ ಜನರಿಂದ ಹಿಡಿದು ಕೈಗಾರಿಕೆಗಳಿಗೂ ವಿದ್ಯುತ್ ಕ್ಷಾಮ ತಲೆದೋರುವ ಸಾಧ್ಯತೆ ಇದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಬೇಕಾಗಿರುವ ಹಣಕಾಸನ್ನು ಬಿಡುಗಡೆ ಮಾಡಬೇಕು. ವಿದ್ಯುತ್ ಬಳಕೆದಾರರ ಮೇಲಿನ ಹೊರೆ ಕಡಿಮೆ ಮಾಡಬೇಕು. ಪೂರ್ವ ತಯಾರಿ ಇಲ್ಲದೆ ಗ್ಯಾರೆಂಟಿ ಜಾರಿ ಮಾಡಿದರೆ, ಅದರ ಎಲ್ಲ ಭಾರವೂ ಜನ ಸಾಮಾನ್ಯರ ಮೇಲೆ ಮೇಲೆ ಬೀಳುತ್ತದೆ. ಇದನ್ನು ತಪ್ಪಿಸಬೇಕು. ಈಗಿರುವ ಲೋಪವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಧಮ್ ಇದ್ರೆ 15 ಕೆ.ಜಿ. ಅಕ್ಕಿ ಕೊಡಿ: ಸಿದ್ದುಗೆ ಸವಾಲ್ ಹಾಕಿದ ಮಾಜಿ ಸಿಎಂ ಬೊಮ್ಮಾಯಿ
ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ಅಧಿಕಾರಿಗಳನ್ನು ಕರೆದು ‘ಮಂತ್ಲಿ ಫಿಕ್ಸ್’ ಮಾಡುತ್ತಿದ್ದಾರೆ. ಐಎಎಸ್-ಐಪಿಎಸ್ ಅಧಿಕಾರಿಗಳಿಗೆ ಸ್ಥಳಗಳನ್ನು ಮಾರಾಟಕ್ಕೆ ಇರಿಸಲಾಗಿದೆ ಎಂದರು. ಕಳೆದ ಒಂದೂವರೆ ತಿಂಗಳಿಂದ ರಾಜ್ಯದ ಪ್ರಗತಿ ಹಳಿ ತಪ್ಪಿದೆ. ಎಲ್ಲಾ ಕಾಮಗಾರಿಗಳು ಸ್ಥಗಿತವಾಗಿವೆ. ಏಕೆ ನಿಲ್ಲಿಸಿದ್ದೀರಿ? ಕಾಮಗಾರಿಗಳಲ್ಲಿ ಏನಾದರೂ ತಪ್ಪು ಇದ್ದರೆ ವಿಚಾರಣೆ ಮಾಡಿ ತಪ್ಪಿತಸ್ಥರನ್ನು ನೇಣಿಗೇರಿಸಬೇಕು. ಆದರೆ, ಕಮಿಷನ್ ಫಿಕ್ಸ್ ಮಾಡಲು ಕಾಮಗಾರಿ ಸ್ಥಗಿತಗೊಳಿಸಿ ಪ್ರಗತಿ ಅಡ್ಡಿಪಡಿಸಲಾಗಿದೆ. ಇದೊಂದು ಸ್ಪಷ್ಟಜನ, ಬಡವರ, ರೈತರ ವಿರೋಧಿ ಸರ್ಕಾರ ಎಂದು ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.
ಕೆಂಪಣ್ಣ ಎಲ್ಲಿದ್ದೀರಿ?: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈಗ ಎಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಜೊತೆ ಸೇರಿಕೊಂಡು ಆರೋಪ ಮಾಡುತ್ತಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈಗ ಎಲ್ಲಿದ್ದಾರೆ. ಸಚಿವರು ದರ ನಿಗದಿ ಮಾಡಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರದ ಮೇಲೆ ಆರೋಪ ಮಾಡಿದವರು ಈಗ ಎಲ್ಲಿದ್ದಾರೆ ಎಂದು ಲೇವಡಿ ಮಾಡಿದರು. ಹಲವಾರು ಸಚಿವರು ಹಿಂದಿನ ಅವಧಿಯ ಕಾಮಗಾರಿ, ಮನೆ ನಿರ್ಮಾಣ ಎಲ್ಲವನ್ನೂ ನಿಲ್ಲಿಸಿದ್ದಾರೆ. ಸರ್ಕಾರ ಅಸ್ತಿತ್ವಕ್ಕೆ ಬಂದು ತಿಂಗಳು ಕಳೆದರೂ ಸಚಿವರು ತಮ್ಮ ಇಲಾಖೆಗಳ ಬಗ್ಗೆ ಮಾತನಾಡುತ್ತಿಲ್ಲ. ಇನ್ನು ಮಳೆಗಾಲ ಆರಂಭವಾಗುತ್ತದೆ. ಯಾವುದೇ ಕಾಮಗಾರಿ ನಡೆಯುವುದಿಲ್ಲ. ಇಡೀ ಒಂದು ವರ್ಷದ ಕಾರ್ಯಕ್ರಮಗಳನ್ನ ಅಲ್ಲಕಲ್ಲೋಲ ಮಾಡುತ್ತಿದ್ದಾರೆ ಎಂದರು.
ಪೂರಕ ಪರಿಸರವಿಲ್ಲದೇ ಕಲಿಕೆ ಸರಿ ದಿಕ್ಕಿನಲ್ಲಿ ಸಾಗಲ್ಲ: ಬೊಮ್ಮಾಯಿ
ಕಾಂಗ್ರೆಸ್ ಸರ್ಕಾರ ಅಕ್ಕಿ ನೀಡಲು ಪೂರ್ವ ಸಿದ್ದತೆ ಮಾಡಿಕೊಳ್ಳದೇ ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಪ್ರೇರಿತ ಪ್ರತಿಭಟನೆ ಮಾಡಲು ಮುಂದಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಗೊಂದಲದ ಗೂಡಾಗಿದೆ. ಉಚಿತ ಬಸ್ ಪ್ರಯಾಣ ಗ್ಯಾರಂಟಿ ಯೋಜನೆ ಅಧ್ವಾನ ಆಗಿದೆ. ಸರಿಯಾಗಿ ಬಸ್ಸುಗಳ ವ್ಯವಸ್ಥೆ ಮಾಡದೇ ಉಚಿತ ಪ್ರಯಾಣ ಯೋಜನೆ ಎಂದರೆ ಹೇಗೆ? ಸರಿಯಾದ ಬಸ್ ಸೇವೆ ಒದಗಿಸದೇ ಇರುವುದರಿಂದ ಸಾರ್ವಜನಿಕರು ಬಾಯಿಗೆ ಬಂದ ಹಾಗೆ ಬೈತಾರಂತೆ. ಕೆಲಸ ಮಾಡಲು ಆಗುತ್ತಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.