Asianet Suvarna News Asianet Suvarna News

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಲಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. 

Injustice from central government to state Says Home Minister Dr G Parameshwar gvd
Author
First Published Apr 27, 2024, 10:46 AM IST

ತುಮಕೂರು (ಏ.27): ದೇಶದ ಭವಿಷ್ಯನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಲಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದ ಹೊರವಲಯದ ಗೊಲ್ಲಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ತಮ್ಮ ಪತ್ನಿ ಕನ್ನಿಕಾ ಪರಮೇಶ್ವರ್ ಅವರೊಂದಿಗೆ ತೆರಳಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಈ ಮೂಲಕ ಕೇಂದ್ರದಲ್ಲೂ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ಅಚಲ ವಿಶ್ವಾಸ ಇದೆ ಎಂದರು.

ತುಮಕೂರು ಲೋಕಸಭಾ ಕ್ಷೇತ್ರದಲ್ಲೂ ಕೈ ಅಭ್ಯರ್ಥಿ ಮುದ್ದಹನುಮೇಗೌಡರು ಆಯ್ಕೆಯಾಗುವ ವಿಶ್ವಾಸವಿದೆ. ಇಡೀ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ. ಮುದ್ದಹನುಮೇಗೌಡರ ಪರ ಜನರು ಒಲವು ತೋರಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಕೊಟ್ಟ ಭರವಸೆಗಳನ್ನು ಅನುಷ್ಠಾನಗೊಳಿಸಿದ್ದೇವೆ. ಆದ್ದರಿಂದ ಬಡವರಿಗೆ ಅನುಕೂಲವಾಗಿದೆ ಎಂದು ಹೇಳಿದರು. ಕೇಂದ್ರದಲ್ಲಿ ಒಳ್ಳೆಯ ಸರ್ಕಾರ ಅಧಿಕಾರಕ್ಕೆ ಬರಬೇಕು. ಯಾವುದೇ ಧರ್ಮ, ಪ್ರಾಂತ್ಯ ಆಧಾರಿತ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿರಬಾರದು. ತಾರತಮ್ಯ ಮಾಡುವುದನ್ನು ಇತ್ತೀಚಿನ ದಿನಗಳಲ್ಲಿ ಹೆಚ್ಚು ನೋಡಿದ್ದೇನೆ. ಕೇಂದ್ರದಿಂದ ಪ್ರಕೃತಿ ವಿಕೋಪವಾದಾಗ ಪರಿಹಾರ ಬರಲಿಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಇದನ್ನು ನಾವು ಜನರಿಗೆ ತೋರಿಸುವ ಕೆಲಸ ಮಾಡಿದ್ದೇವೆ. ಮಾಧ್ಯಮಗಳು ಕೂಡ ಅದನ್ನೇ ತೋರಿಸಿವೆ ಎಂದರು.

ಗ್ಯಾರಂಟಿ, ಮಹಿಳೆಯರ ಬಗ್ಗೆ ಎಚ್‌ಡಿಕೆ ಲಘು ಮಾತು: ಸಚಿವ ಚಲುವರಾಯಸ್ವಾಮಿ

ಇವಿಎಂ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಗೃಹ ಸಚಿವ: ಇವಿಎಂ ಯಂತ್ರಗಳ ಬಗ್ಗೆ ಅನುಮಾನ ಇರುವ ಬಗ್ಗೆ ಬಗ್ಗೆ ಉತ್ತರಿಸಿದ ಅವರು, ಆ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ. ನಾವು ವೋಟ್ ಹಾಕಿದಾಗ ಎಲ್ಲ ಸರಿಯಾಗಿ ತೋರಿಸಿದೆ. ಆದರೆ ಒಳಗೆ ಏನಾಗುತ್ತದೆ ಎನ್ನುವುದು ಗೊತ್ತಿಲ್ಲ. ಕಾಸರಗೋಡಿನಲ್ಲಿ ಯಾವುದೇ ಬಟನ್ ಒತ್ತದೆ ಒಂದೇ ಪಕ್ಷಕ್ಕೆ ಮತ ಹೋಗುತ್ತದೆ ಎನ್ನುವುದನ್ನು ತೋರಿಸಿಕೊಡಲಾಗಿದೆ. ಇದನ್ನು ನೋಡಿದ ಮೇಲೆ ಹಾಗೆಯೇ ಆಗುತ್ತದೆ ಅಂತ ಆಯ್ತಲ್ಲ ಎಂದು ಇವಿಎಂ ವಿರುದ್ಧ ಅಸಮಾಧಾನ ಹೊರ ಹಾಕಿದರು. ಕುಣಿಗಲ್ ತಾಲೂಕು ಹುಲಿಯೂರುದುರ್ಗ ಹೋಬಳಿ ಕಿಚ್ಚಾವಾಡಿ ಗ್ರಾಮದಲ್ಲಿ ವಾಟರ್ ಮನ್ ಸಾವನ್ನಪ್ಪಿರುವ ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸಿ ನ್ಯಾಯ ಒದಗಿಸುವ ಕೆಲಸ ಮಾಡುತ್ತಾರೆ. ಮೊದಲು ಪೊಲೀಸರ ಮೇಲೆ ನಂಬಿಕೆ ಇಡಬೇಕು ಎಂದರು.

Follow Us:
Download App:
  • android
  • ios