Asianet Suvarna News Asianet Suvarna News

ರಾಜ್ಯದ ಪಟಾಕಿ ಗೋದಾಮುಗಳ ಸುರಕ್ಷತೆ ಬಗ್ಗೆ ಪರಿಶೀಲನೆ: ಡಿಕೆಶಿ

ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸಮೀಕ್ಷೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಭವಿಷ್ಯದಲ್ಲಿ ಇಂತಹ ದುರಂತಗಳು ನಡೆಯದಂತೆ ಸೂಕ್ತ ನೀತಿ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 

Inspection on safety of firecracker warehouses in state Says DK Shivakumar gvd
Author
First Published Oct 9, 2023, 6:23 AM IST

ಬೆಂಗಳೂರು (ಅ.09): ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸಮೀಕ್ಷೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಭವಿಷ್ಯದಲ್ಲಿ ಇಂತಹ ದುರಂತಗಳು ನಡೆಯದಂತೆ ಸೂಕ್ತ ನೀತಿ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಹಾವೇರಿ ಪಟಾಕಿ ಗೋದಾಮು ಸ್ಫೋಟ ಸೇರಿ 2 ತಿಂಗಳ ಅಂತರದಲ್ಲಿ ರಾಜ್ಯದಲ್ಲಿ 2 ಪಟಾಕಿ ದುರಂತ ಸಂಭವಿಸಿದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್‌ ಅವರು, ‘ಇನ್ನು ಮುಂದೆ ಇಂತಹ ಘಟನೆ ಸಂಭವಿಸದಂತೆ ಎಚ್ಚರ ವಹಿಸಲಾಗುವುದು. ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳು ನೋಟಿಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಲಾಗಿದೆ. ಜತೆಗೆ ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸಮೀಕ್ಷೆ ನಡೆಸಲಾಗುತ್ತದೆ’ ಎಂದು ಹೇಳಿದರು.

ಬಿಜೆಪಿಗೆ ಕಾಂಗ್ರೆಸ್‌ ಬಗ್ಗೆ ಭಯ ಹುಟ್ಟಿರುವುದು ಪೋಸ್ಟರ್‌ನಿಂದ ಸ್ಪಷ್ಟ: ಡಿಕೆಶಿ

ಅತ್ತಿಬೆಲೆಯಲ್ಲಿ ದುರಂತ ಸಂಭವಿಸಿದ ಗೋದಾಮಿನಲ್ಲಿ 30,000 ಸಾವಿರ ಕೆ.ಜಿ.ಯಷ್ಟು ಪಟಾಕಿ ಸಂಗ್ರಹವಿತ್ತೇ ಎನ್ನುವ ಪ್ರಶ್ನೆಗೆ ‘ಗೋದಾಮಿನಲ್ಲಿ ಎಷ್ಟು ಪ್ರಮಾಣದಲ್ಲಿ ಸಂಗ್ರಹ ಇತ್ತು ಎಂಬುದು ಇನ್ನೂ ಅಂದಾಜಿಗೆ ಸಿಕ್ಕಿಲ್ಲ. ದೀಪಾವಳಿ ಹಬ್ಬ ಹತ್ತಿರದಲ್ಲಿ ಇರುವ ಕಾರಣ ಪಟಾಕಿಗಳನ್ನು ಸಂಗ್ರಹ ಮಾಡಲಾಗುತ್ತಿತ್ತು. ಈ ವೇಳೆ ಸಂಭವಿಸಿದ ಅವಘಡದಿಂದ ಘೋರ ದುರಂತ ಸಂಭವಿಸಿದೆ. ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ ಮಾಡಲಾಗುವುದು’ ಎಂದು ಹೇಳಿದರು.

ಜನರ ಸಮಯ ರಸ್ತೆಗಳಲ್ಲಿ ವ್ಯರ್ಥವಾಗಲು ಬಿಡುವುದಿಲ್ಲ: ಟ್ರಾಫಿಕ್‌ ತಡೆಗೆ ಡಿಕೆಶಿ ಪ್ಲಾನ್‌!

ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳು ಒಟ್ಟಿಗೆ ಕೆಲಸ ಮಾಡುತ್ತಿದ್ದು, ಈಗಾಗಲೇ ರಾಜ್ಯ ಸರ್ಕಾರದಿಂದ 5 ಲಕ್ಷ ರು. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳ ಆಸ್ಪತ್ರೆ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ ಎಂದು ತಿಳಿಸಿದರು. ಇನ್ನುಮುಂದೆ ಅಮಾಯಕರ ಸಾವು ಸಂಭವಿಸದಂತೆ ಮುನ್ನೆಚರಿಕೆ ವಹಿಸುತ್ತೇವೆ. ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯುವಕರ ಸಾವು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

Follow Us:
Download App:
  • android
  • ios