ಮೋದಿ ಗೆಲ್ಲಿಸಿ -ಭಾರತ ಉಳಿಸಿ ಅಭಿಯಾನಕ್ಕೆ ಮಾಜಿ ಸಿಎಂ ಎಚ್‌ಡಿಕೆಗೆ ಆಹ್ವಾನ
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಎಂ.ಕೆ.ಕವಟಗಿಮಠ ಕನ್ವೆನ್ಷನ್ ಹಾಲ್ ನಲ್ಲಿ ಡಿ.31ರಂದು ಆಯೋಜಿಸಿರುವ "ಮೋದಿ ಗೆಲ್ಲಿಸಿ - ಭಾರತ ಉಳಿಸಿ" ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ಶ್ರೀ ರಾಮ ಸೇನಾ ಪದಾಧಿಕಾರಿಗಳು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಹ್ವಾನ ನೀಡಿದರು.
ರಾಮನಗರ (ಡಿ.28): ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಎಂ.ಕೆ.ಕವಟಗಿಮಠ ಕನ್ವೆನ್ಷನ್ ಹಾಲ್ ನಲ್ಲಿ ಡಿ.31ರಂದು ಆಯೋಜಿಸಿರುವ "ಮೋದಿ ಗೆಲ್ಲಿಸಿ - ಭಾರತ ಉಳಿಸಿ" ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ಶ್ರೀ ರಾಮ ಸೇನಾ ಪದಾಧಿಕಾರಿಗಳು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಹ್ವಾನ ನೀಡಿದರು. ಬಿಡದಿ ಸಮೀಪದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾದ ಶ್ರೀರಾಮ ಸೇನಾ ರಾಮನಗರ ಜಿಲ್ಲಾಧ್ಯಕ್ಷ ನಾಗಾರ್ಜುನ ಗೌಡ ಸಮಾರಂಭದ ಆಹ್ವಾನ ಪತ್ರಿಕೆ ನೀಡುವ ಮೂಲಕ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎ ಮಂಜು, ಮಾಜಿ ಸಚಿವ ಬಂಡಪ್ಪ ಕಾಶಪ್ಪನವರ್ , ಶ್ರೀರಾಮ ಸೇನಾ ವಿಭಾಗಿಯ ಅಧ್ಯಕ್ಷರಾದ ಅಮರನಾಥ್ ವೈ ಡಿ, ಬೆಂಗಳೂರು ಮಹಾನಗರದ ಪ್ರಧಾನ ಕಾರ್ಯದರ್ಶಿ ಸುಂದ್ರೇಶ್ ನರ್ಗಲ್, ಸಂಘಟನೆ ಕಾರ್ಯಕರ್ತರಾದ ಕೋಟ ಪ್ರಸನ್ನ, ಪ್ರಸನ್ನ ಕುಮಾರ್, ವಕೀಲ ವಿನೋದ್ ಕುಮಾರ್ ಹಾಜರಿದ್ದರು.
ಸಿಎಂ ಸಿದ್ದರಾಮಯ್ಯರಿಂದ ಮುಸ್ಲಿಂ ತುಷ್ಟೀಕರಣ: ಎಂ.ಪಿ.ರೇಣುಕಾಚಾರ್ಯ ಆರೋಪ
ಶ್ರೀರಾಮ ಸೇನಾ ಕರ್ನಾಟಕ ವತಿಯಿಂದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಆಂದೋಲ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ .ಈಶ್ವರಪ್ಪ, ಮಾಜಿ ಸಚಿವ ಸಿ.ಟಿ.ರವಿ, ಮಾಜಿ ಸಂಸದ ರಮೇಶ್ ಕತ್ತಿ, ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ , ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಹೆಸರನ್ನು ಮುದ್ರಿಸಲಾಗಿದೆ. ಈಗ ಸಂಘಟನೆಯ ಪ್ರಮುಖರು ಕುಮಾರಸ್ವಾಮಿ ಅವರನ್ನು ಖುದ್ಧಾಗಿ ಭೇಟಿಯಾಗಿ ಆಹ್ವಾನ ಪತ್ರಿಕೆಯನ್ನು ನೀಡಿ ಆಹ್ವಾನಿಸಿದ್ದಾರೆ.
ಸಚಿವ ಶಿವಾನಂದ್ ಪಾಟೀಲ ವಜಾಕ್ಕಾಗಿ ಪ್ರತಿಭಟನೆ: ‘ಮೇಲಿಂದ ಮೇಲೆ ಬರ ಬರಲಿ, ಬರಗಾಲ ಬಂದರೆ ಸಾಲ ಮನ್ನಾ ಆಗುತ್ತದೆ ಎಂದು ರೈತರು ನಿರೀಕ್ಷೆ ಮಾಡುತ್ತಾರೆ’ ಎಂಬ ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿಕೆ ವಿರೋಧಿಸಿ ಮಂಗಳವಾರವೂ ರಾಜ್ಯದ ಹಲವೆಡೆ ರೈತರು ಪ್ರತಿಭಟನೆ ನಡೆಸಿದರು. ಸಚಿವರ ಪ್ರತಿಕೃತಿ ದಹಿಸಿ, ಅವರ ವಿರುದ್ಧ ಘೋಷಣೆ ಕೂಗಿ, ಸಚಿವರನ್ನು ಸಂಪುಟದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.
ಬೆಳಗಾವಿಯಲ್ಲಿ ಗಣೇಶಪುರದಲ್ಲಿರುವ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ರೈತರು, ಕಚೇರಿಗೆ ಭಂಡಾರ ತೂರಿದರು. ರೈತರ ಕೈಯಲ್ಲಿರುವ ಭಂಡಾರದ ಚೀಲಗಳನ್ನು ಕಸಿದುಕೊಳ್ಳಲು ಪೊಲೀಸರು ಮುಂದಾದಾಗ ಪೊಲೀಸರು ಮತ್ತು ಪ್ರತಿಭಟನಾನಿರತ ರೈತರ ನಡುವೆ ವಾಗ್ವಾದ, ತಳ್ಳಾಟ, ನೂಕಾಟ ನಡೆಯಿತು. ರೈತರು ಸಕ್ಕರೆ ಸಂಸ್ಥೆಗೆ ಬೀಗ ಜಡಿಯಲು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಬಳಿಕ, ಸಚಿವರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ವಜಾಗೊಳಿಸುವಂತೆ ಮುಖ್ಯಮಂತ್ರಿಯನ್ನು ಆಗ್ರಹಿಸಿದರು.
ಲೋಕಸಭೆ ಚುನಾವಣೆ ಫಲಿತಾಂಶ ಇತಿಹಾಸದ ಪುಟದಲ್ಲಿ ಬರೆಯುವಂತಿರಲಿ: ಬಿ.ವೈ.ವಿಜಯೇಂದ್ರ
ಚಿಕ್ಕಬಳ್ಳಾಪುರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಮಂಡ್ಯದ ಸಂಜಯ್ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು, ಹಳೆ ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸಚಿವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ನಂತರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಧಿಕ್ಕಾರ ಕೂಗಿದರು. ಸಚಿವರೇ, ನೀವೇ ಆತ್ಮಹತ್ಯೆ ಮಾಡಿಕೊಳ್ಳಿ, ಭಿಕ್ಷೆ ಬೇಡಿ ನಿಮ್ಮ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ ಎಂದು ಟವೆಲ್ ಒಡ್ಡಿ ಅಣಕು ಪ್ರದರ್ಶನ ನಡೆಸಿದರು.