ತುಮಕೂರಲ್ಲಿ ವಿ.ಸೋಮಣ್ಣ ಸ್ಪರ್ಧೆಗೆ ವಿರೋಧ ಇಲ್ವೇನ್ರಿ?: ಸಚಿವ ರಾಮಲಿಂಗಾರೆಡ್ಡಿ

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಮುದ್ದಹನುಮೇಗೌಡರಿಗೆ ಟಿಕೆಟ್ ಘೋಷಣೆಯಾಗಿದ್ದಕ್ಕೆ ಯಾರ ವಿರೋಧವೂ ಇಲ್ಲ, ಯಾವುದೇ ಭಿನ್ನಮತವೂ ಇಲ್ಲ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. 

Is there no opposition to V Somanna contest in Tumakuru Says Minister Ramalinga Reddy gvd

ದಾವಣಗೆರೆ (ಮಾ.10): ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಮುದ್ದಹನುಮೇಗೌಡರಿಗೆ ಟಿಕೆಟ್ ಘೋಷಣೆಯಾಗಿದ್ದಕ್ಕೆ ಯಾರ ವಿರೋಧವೂ ಇಲ್ಲ, ಯಾವುದೇ ಭಿನ್ನಮತವೂ ಇಲ್ಲ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ನಗರದ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಮಾಜಿ ಸಚಿವ ವಿ.ಸೋಮಣ್ಣಗೆ ವಿರೋಧ ಇಲ್ಲವೇ? ಮುದ್ದ ಹನುಮೇಗೌಡ ವಿರೋಧ ಎಂಬುದಾಗಿ ಮಾಧ್ಯಮಗಳು ಹೇಳುತ್ತಿವೆ. ಅಲ್ಲಿ ಸೋಮಣ್ಣಗೆ ಮಾಜಿ ಸಚಿವ ಮಾಧುಸ್ವಾಮಿ ವಿರೋಧ ವ್ಯಕ್ತಪಡಿಸುತ್ತಿಲ್ಲವೇ ಎಂದರು.

ಶಾಮನೂರು ಹೇಳ್ದೋರಿಗೆ ಟಿಕೆಟ್‌: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೂ ಕಾಂಗ್ರೆಸ್ ಪಕ್ಷ ಸೂಕ್ತ, ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಯಜಮಾನರಾದ ನಮ್ಮ ಪಕ್ಷದ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರು ಯಾರಿಗೆ ಹೇಳುತ್ತಾರೋ, ಅವರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗುವುದು. 2ನೇ ಪಟ್ಟಿಯಲ್ಲಿ ದಾವಣಗೆರೆ ಅಭ್ಯರ್ಥಿ ಘೋಷಣೆ ಆಗಲಿದೆ ಎಂದು ಅವರು ತಿಳಿಸಿದರು.

ಸದ್ಯಕ್ಕೆ ಯಾವುದೇ ಗೊಂದಲ ಇಲ್ಲ, ಆಕಾಂಕ್ಷಿಗಳು ಹೆಚ್ಚಾಗಿ ಇರದಂತಹ ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ರಾಜ್ಯದ 7 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ತಮ್ಮ ಪುತ್ರಿ ಸ್ಪರ್ಧೆ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಪಕ್ಷದ ಯಾರಿಗೆ ಟಿಕೆಟ್ ನೀಡುತ್ತದೋ, ಅಂತಹವರನ್ನು ಗೆಲ್ಲಿಸುವುದಷ್ಟೇ ನಮ್ಮ ಕೆಲಸ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ತಾತ್ಕಾಲಿಕವಷ್ಟೇ: ಸಂಸದ ರಾಘವೇಂದ್ರ

ನೀರಿನ ಮಿತ ಬಳಕೆಗೆರ ಕರೆ: ಬೆಂಗಳೂರು ಮಹಾ ನಗರದಲ್ಲಿ ನೀರಿನ ಸಮಸ್ಯೆ ಉಲ್ಭಣಿಸುತ್ತಿರುವುದು ನಿಜ. ಕಾರು ಇತರೆ ವಾಹನಗಳನ್ನು ತೊಳೆಯದಂತೆ ಸೂಚನೆ ಸಹ ನೀಡಲಾಗಿದೆ. ನೀರು ಬಳಕೆ ಮಿತವಾಗಿರಲೆಂದು ಮನವಿ ಸಹ ಮಾಡಲಾಗಿದೆ. ಒಂದೋ ಎರಡೋ ದೊಡ್ಡ ಮಳೆಗಳಾದರೆ ಅಂತರ್ಜಲ ವೃದ್ಧಿಯಾಗಿ, ನೀರಿನ ಸಮಸ್ಯೆ ನಿವಾರಣೆ ಯಾಗುತ್ತದೆ. ಸದ್ಯಕ್ಕೆ ಜನರೂ ಸಹ ನೀರಿನ ಮಿತ ಬಳಕೆಗೆ ಗಮನ ಹರಿಸಬೇಕು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

Latest Videos
Follow Us:
Download App:
  • android
  • ios