Asianet Suvarna News Asianet Suvarna News

ಮೋದಿ ತವರಿನಲ್ಲಿ ಬಿಜೆಪಿ ಸೋಲಿಸಲು ಒಗ್ಗಟ್ಟಾದ ಕಾಂಗ್ರೆಸ್-ಆಪ್, ಚುನಾವಣಾ ಮೈತ್ರಿ ಘೋಷಣೆ!

ಗುಜರಾತ್‌ನಲ್ಲಿ ಬಿಜೆಪಿ ಮಣಿಸಲು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸುವುದಾಗಿ ಘೋಷಿಸಿದೆ. ಸೀಟು ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸಲಿದೆ. ಈ ಕುರಿತು ಆಪ್ ಮಹತ್ವದ ಘೋಷಣ ಮಾಡಿದೆ.

Isudan Gadhvi announces AAP and Congress contest Lok sabha poll in Gujarat jointly ckm
Author
First Published Aug 7, 2023, 7:06 PM IST

ಅಹಮ್ಮಾದಾಬಾದ್(ಆ.07) ಗುಜರಾತ್‌ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ ಒಗ್ಗಟ್ಟಾಗಿ ಚುನಾವಣೆ ಎದುರಿಸಲಿದೆ ಅನ್ನೋ ಘೋಷಣೆ ಹೊರಬಿದ್ದಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು I-N-D-I-A ಮೈತ್ರಿ ಮೂಲಕ ಈಗಾಗಲೇ ಒಗ್ಗಟ್ಟಾಗಿರುವ ಕಾಂಗ್ರೆಸ್, ಆಪ್ ಸೇರಿದಂತೆ 26ಕ್ಕೂ ಹೆಚ್ಚು ಪಾರ್ಟಿಗಳು ಮೈತ್ರಿ ಮಾಡಿಕೊಂಡಿದೆ. ಇದೀಗ ಗುಜರಾತ್‌ನಲ್ಲಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ ಮೈತ್ರಿ ಮೂಲಕ ಚುನಾವಣೆ ಎದುರಿಸಲಿದೆ. ಸೀಟುಗಳ ಹಂಚಿಕೆ ಮಾಡಿಕೊಂಡು ಬಿಜೆಪಿಯನ್ನು ಮಣಿಸುತ್ತೇವೆ ಎಂದು ಗುಜರಾತ್ ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಇಸುದಾನ್ ಗಧ್ವಿ ಘೋಷಿಸಿದ್ದಾರೆ.

ದೆಹಲಿಯಲ್ಲಿ ಉನ್ನತ ಅಧಿಕಾರಿಗಳ ನೇಮಕ ಹಾಗೂ ವರ್ಗಾವಣೆ ಮತ್ತು ಕೆಲವು ಸೇವೆಗಳ ನಿಯಂತ್ರಣವನ್ನು ತನ್ನ ಬಳಿಯೇ ಉಳಿಸಿಕೊಳ್ಳುವ ಕೇಂದ್ರ ಸರ್ಕಾರದ ಪ್ರಯತ್ನದ ಬಿಲ್‌ ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಹೋರಾಟ ನಡೆಸುತ್ತಿದೆ. ಇದಕ್ಕೆ ಕಾಂಗ್ರೆಸ್ ಕೂಡ ಬೆಂಬಲ ಸೂಚಿಸಿದೆ. ಕಾಂಗ್ರೆಸ್ ಬೆಂಬಲ ಸಿಕ್ಕ ಖುಷಿಯಲ್ಲಿ ಆಮ್ ಆದ್ಮಿ ಪಾರ್ಟಿ, ಮೈತ್ರಿ ಘೋಷಣೆ ಮಾಡಿದೆ. ಗುಜರಾತ್‌ನಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ ಮೈತ್ರಿ ಮೂಲಕ ಸಾಗಲಿದೆ ಎಂದು ಇಸುಧಾನ್ ಹೇಳಿದ್ದಾರೆ.

I.N.D.I.A ಮೈತ್ರಿಯಲ್ಲಿ ಆಮ್‌ ಆದ್ಮಿ ನರಿ ಇದ್ದಂತೆ, ಕಾಂಗ್ರೆಸ್‌ ನಾಯಕ ಸಂದೀಪ್‌ ದೀಕ್ಷಿತ್‌ ವಾಗ್ದಾಳಿ!

ಸೀಟು ಹಂಚಿಕೆ ವಿಚಾರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಕಾಂಗ್ರೆಸ್ ಗೆಲ್ಲುವ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ಸ್ಪರ್ದಿಸಿದರೆ, ಆಪ್ ಗೆಲ್ಲುವ ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ ಎಂದು ಇಸುಧಾನ್ ಹೇಳಿದ್ದಾರೆ. 

ಆಮ್ ಆದ್ಮಿ ಪಾರ್ಟಿ ಅಧ್ಯಕ್ಷರ ಹೇಳಿಕೆಗೆ ಗುಜರಾತ್ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ. ಕಾಂಗ್ರೆಸ್ ಹಾಗೂ ಆಪ್ ಮೈತ್ರಿ ಕುರಿತು ಗುಜರಾತ್ ಕಾಂಗ್ರೆಸ್ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮೈತ್ರಿ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ ಎಂದು ಗುಜರಾತ್ ಕಾಂಗ್ರೆಸ್ ನಾಯಕ ಹೇಳಿದ್ದಾರೆ. I-N-D-I-A ಮೈತ್ರಿಕೂಟದಲ್ಲಿ ಕಾಂಗ್ರೆಸ್ ಹಾಗೂ ಆಪ್ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದೆ. I-N-D-I-A ವಿಪಕ್ಷಗಳ ಒಕ್ಕೂಟ ಲೋಕಸಭಾ ಚುನಾವಣೆ ಸ್ಪರ್ಧೆ ಕುರಿತು ಚರ್ಚೆಗಳು ನಡೆಯುತ್ತಿದೆ. ಹೀಗಾಗಿ ಈಗಲೇ  ಚುನಾವಣೆ ಎದುರಿಸುವ ರೀತಿಯನ್ನು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಹೇಳಿದೆ.

Breaking: ದೆಹಲಿ ಸೇವಾ ವಿಧೇಯಕ ಬಿಲ್‌ ಲೋಕಸಭೆಯಲ್ಲಿ ಅಂಗೀಕಾರ

ದೆಹಲಿಯಲ್ಲಿ ಹಿರಿಯ ಅಧಿಕಾರಿಗಳ ನಿಯೋಜನೆ ಮತ್ತು ವರ್ಗಾವಣೆ ಅಧಿಕಾರ ದೆಹಲಿ ಸರ್ಕಾರದ ಬಳಿಯೇ ಇರಬೇಕು ಎಂದು ಸುಪ್ರೀಂಕೋರ್ಚ್‌ ತೀರ್ಪು ನೀಡಿತ್ತು. ಈ ಮೂಲಕ ದೆಹಲಿಯಲ್ಲಿನ ಸೇವೆಗಳ ಮೇಲೆ ಚುನಾಯಿತ ಆಪ್‌ ಸರ್ಕಾರಕ್ಕೆ ಪೂರ್ಣ ಅಧಿಕಾರ ನೀಡಿತ್ತು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯನ್ನು ಹೊರಡಿಸಿದ್ದ ಕೇಂದ್ರ ಸರ್ಕಾರ, ಈ ಅಧಿಕಾರವನ್ನು ತನ್ನ ಬಳಿಯೇ ಉಳಿಸಿಕೊಂಡಿತ್ತು. ಸುಗ್ರೀವಾಜ್ಞೆ 6 ತಿಂಗಳೊಳಗೆ ಸಂಸತ್ತಿನಲ್ಲಿ ಪಾಸಾದರೆ ಮಾತ್ರ ಶಾಶ್ವತ ಕಾನೂನು ಸ್ವರೂಪ ಪಡೆಯುತ್ತದೆ. ಹೀಗಾಗಿ ಸುಗ್ರೀವಾಜ್ಞೆಯನ್ನೇ ಮಸೂದೆ ರೂಪದಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗಿದೆ.

Follow Us:
Download App:
  • android
  • ios