ಮೋದಿ ಸರ್ಕಾರದಿಂದ ಕಾಂಗ್ರೆಸ್‌ಗೆ ಐಟಿ ದಾಳಿ ಬೆದರಿಕೆ: ಸಂಸದ ಡಿ.ಕೆ.ಸುರೇಶ್ ಆಕ್ರೋಶ
ಐಟಿ ಅಧಿಕಾರಿಗಳಿಂದ ಪದೇ ಪದೇ ದಾಳಿ ನಡೆಸುವ ಮೂಲಕ ಮೋದಿ ಸರ್ಕಾರ ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.
ಆನೇಕಲ್ (ಏ.19): ಐಟಿ ಅಧಿಕಾರಿಗಳಿಂದ ಪದೇ ಪದೇ ದಾಳಿ ನಡೆಸುವ ಮೂಲಕ ಮೋದಿ ಸರ್ಕಾರ ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು. ಅವರು ತಾಲೂಕಿನ ಬಳ್ಳೂರಿನಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಬಿಜೆಪಿ ಹಾಗೂ ಮಾಜಿ ಪ್ರಧಾನಿಯವರ ಕೈಗೊಂಬೆ ಆಗಿರುವ ಐಟಿ ಅಧಿಕಾರಿಗಳು ನಮ್ಮ ಕಾರ್ಯಕರ್ತರ ಮನೆಯಲ್ಲಿ ಮಹಿಳೆಯರನ್ನು ಕೇವಲವಾಗಿ ಕಂಡು, ಯುವಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ.
ಚುನಾವಣೆ ಸೋಲಿನ ಭೀತಿಯಿಂದ ಐಟಿ, ಇ.ಡಿ. ಮೂಲಕ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ ಕನ್ನಡ ನಾಡಿನಲ್ಲಿ ಹೆಚ್ಚು ದಿನ ನಡೆಯುವುದಿಲ್ಲ. ನಾವು ಇಂತಹ ಬೆದರಿಕೆಗೆ ಅಂಜುವುದೂ ಇಲ್ಲ ಎಂದರು.ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಬರೆಯುತ್ತಿದ್ದು, ಐಟಿ ಇಲಾಖೆ ಮುಖ್ಯಸ್ಥರ ಗಮನಕ್ಕೆ ತರುತ್ತೇನೆ. ಅವರ ಕೆಲಸ ಕೇವಲ ಪರಿಶೀಲನೆ ಮಾಡುವು ದಾದರೆ ಮಾಡಲಿ. ಅದನ್ನು ಬಿಟ್ಟು ಬಿಜೆಪಿ ಪರ ಪ್ರಚಾರ ಮಾಡುವುದು ಸರಿಯಲ್ಲ. ಇದು ಅಕ್ಷಮ್ಯ ಅಪರಾಧ. ಹೀಗೆ ಮುಂದುವರಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
CET Exam: ಮೊದಲ ದಿನವೇ ಗೊಂದಲದ ಗೂಡು: ಜೀವಶಾಸ್ತ್ರ, ಗಣಿತದಲ್ಲಿ ಪಠ್ಯಕ್ಕೆ ಸಂಬಂಧಿಸದ 20 ಪ್ರಶ್ನೆ!
ಅಧಿಕಾರ ದುರ್ಬಳಕೆ, ಸಾಮಾಜಿಕ ಜಾಲತಾಣಗಳಿಲ್ಲಿ ಸುಳ್ಳು ಪ್ರಚಾರ ಮಾಡುವುದೂ ಬಿಟ್ಚು ನಿಷ್ಪಕ್ಷಪಾತ ಚುನಾವಣೆ ನಡೆಸಲಿ. ನಾನು ನನ್ನ ಕೆಲಸದ ಆಧಾರದ ಮೇಲೆ ಮತ ಕೇಳುತ್ತಿದ್ದೇನೆಯೇ ಹೊರತು, ಯಾರನ್ನು ಬೆದರಿಸುವ ಅಗತ್ಯವಿಲ್ಲ. ನಾನು ಆಸ್ತಿ, ಕುಟುಂಬ ಉಳಿಸಿಕೊಳ್ಳಲು ಬೇರೆಯವರ ಜತೆ ಸೇರಿ ರಾಜಕಾರಣ ಮಾಡುತ್ತಿಲ್ಲ ಎಂದು ತೀಕ್ಷ್ಣ ವಾಗಿ ನುಡಿದರು.
ಜನತಾದಳ ಹಾಗೂ ಜೆಡಿಎಸ್‌ನವರು ಕ್ಷುಲ್ಲಕ ರಾಜಕಾರಣ ಮಾಡುವುದರಲ್ಲಿ ಹೆಸರುವಾಸಿ. ಅವರು ಹಿರಿಯರಿದ್ದು, ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಮಾಡಿರುವ ಆರೋಪಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ. ಅವರು ಯಾರ ಜಮೀನುಗಳನ್ನು ಯಾರ ಹೆಸರಲ್ಲಿ ಹಾಕಿಕೊಂಡಿದ್ದಾರೆ ಎಂಬುದನ್ನು ತೋರಿಸಬಹುದು. ಆದರೆ ಅದರ ಅಗತ್ಯ ನಮಗಿಲ್ಲ ಎಂದರು.
16 ಜಿಲ್ಲೆಯಲ್ಲಿ ಬೇಸಿಗೆ ಮಳೆ: 2 ಬಲಿ, ಕೆಲವೆಡೆ ಅನಾಹುತ
ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ಕಾಂಗ್ರೆಸ್‌ನವರಾದ ನಾವು ಅಸಲಿ ಹಿಂದೂಗಳು. ರಾಮ ನಮ್ಮ ಆರಾಧ್ಯ ದೈವ. ಬಿಜೆಪಿಯ ವಾಟ್ಸ್ ಆಪ್ ಯೂನಿವರ್ಸಿಟಿ ಸುಳ್ಳುಗಳ ತಯಾರು ಮಾಡಿ ಮಾರುವ ಯಂತ್ರ. ಅವರ ಮಾತುಗಳಿಗೆ ಮಾತು ದಿನ ನಿತ್ಯ ನಿಮ್ಮ ಕಷ್ಟ ಸುಖಕ್ಕೆ ಸ್ಪಂದಿಸುವ ಸಂಸದ ಡಿ.ಕೆ.ಸುರೇಶ್ ಅವರನ್ನು ಮತ್ತೆ ಹೆಚ್ಚಿನ ಬಹುಮತದಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ವೇದಿಕೆಯಲ್ಲಿ ಆನೇಕಲ್ ಶಾಸಕರಾದ ಶಿವಣ್ಣ, ಮೇಲ್ಮನೆ ಮಾಜಿ ಸದಸ್ಯ ನಾರಾಯಣಸ್ವಾಮಿ ಹಾಗೂ ಮುಖಂಡರು ಮಾತನಾಡಿದರು.