ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಭಯ ಹುಟ್ಟಿರುವುದು ಪೋಸ್ಟರ್‌ನಿಂದ ಸ್ಪಷ್ಟ: ಡಿಕೆಶಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಿಗೆ ಹೋಲಿಕೆ ಮಾಡಿ ಬಿಜೆಪಿ ಮಾಡಿದ್ದ ಪೋಸ್ಟರ್‌ಗೆ ರಾಜ್ಯದ ಹಲವು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ‘ರಾಹುಲ್ ಗಾಂಧಿ ನಾಯಕತ್ವದ ಬಗೆಗಿನ ಭಯದಿಂದ ಬಿಜೆಪಿಯು ರಾವಣನ ಹೆಸರು ತಂದಿದೆ.
ಬೆಂಗಳೂರು (ಅ.08): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಿಗೆ ಹೋಲಿಕೆ ಮಾಡಿ ಬಿಜೆಪಿ ಮಾಡಿದ್ದ ಪೋಸ್ಟರ್‌ಗೆ ರಾಜ್ಯದ ಹಲವು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ‘ರಾಹುಲ್ ಗಾಂಧಿ ನಾಯಕತ್ವದ ಬಗೆಗಿನ ಭಯದಿಂದ ಬಿಜೆಪಿಯು ರಾವಣನ ಹೆಸರು ತಂದಿದೆ. ಬಿಜೆಪಿಗೆ ರಾಹುಲ್ ಗಾಂಧಿ ಬಗ್ಗೆ ಎಷ್ಟು ಭಯ ಹುಟ್ಟಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ’ ಎಂದು ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿ ವಿರುದ್ಧದ ಪೋಸ್ಟರ್‌ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸೇರಿದಂತೆ ಹಲವು ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ‘ರಾಹುಲ್ ಗಾಂಧಿ ಅವರ ಜನಪ್ರಿಯತೆ ಹಾಗೂ ನಾಯಕತ್ವಕ್ಕೆ ಹೆದರಿ ಅವರನ್ನು ರಾವಣನಂತೆ ಬಿಜೆಪಿಯವರು ಬಿಂಬಿಸಿದ್ದಾರೆ. ಬಿಜೆಪಿಗೆ ರಾಮ-ರಾವಣನ ಯುದ್ಧದ ಪುರಾಣ ಸಂಪೂರ್ಣವಾಗಿ ತಿಳಿದಿಲ್ಲ. ಅದಕ್ಕೆ ಈ ರೀತಿ ಮಾಡಿದ್ದಾರೆ’ ಎಂದು ಹೇಳಿದರು. ಉತ್ತರ ಭಾರತದಲ್ಲಿ ರಾವಣನನ್ನು ಕೂಡ ಪೂಜಿಸುವ ಪದ್ಧತಿ ಇದೆ. ನಮ್ಮ ಸಂಸ್ಕೃತಿಯನ್ನು ಸರಿಯಾಗಿ ತಿಳಿದುಕೊಂಡಿದ್ದರೆ ಈ ಮಟ್ಟಕ್ಕೆ ಬಿಜೆಪಿಯವರು ಇಳಿಯುತ್ತಿರಲಿಲ್ಲ. ಭಾರತ್ ಜೋಡೋ ಯಾತ್ರೆಯ ನಂತರ ಇಂಡಿಯಾ ಮೈತ್ರಿಕೂಟ ಪ್ರಾರಂಭವಾಯಿತು.
ಶಾಮನೂರು ಸತ್ಯವನ್ನೇ ಹೇಳಿದ್ದಾರೆ, ರಾಜ್ಯ ಸರ್ಕಾರ ಚಿಂತಿಸಲಿ: ಜೋಶಿ
ಇಂಡಿಯಾ ಮೈತ್ರಿಕೂಟ ಬಲಿಷ್ಠವಾಗಿ ರೂಪುಗೊಳ್ಳುತ್ತಿದೆ, ಇಂಡಿಯಾ ಒಂದಾಗುತ್ತಿದೆ. ಇಂಡಿಯಾ ರಕ್ಷಣೆಯಾಗಲಿದೆ. ಹೀಗಾಗಿ ಬಿಜೆಪಿಯವರು ರಾಹುಲ್ ಗಾಂಧಿ ಪಾದಯಾತ್ರೆ ಹಾಗೂ ಮೈತ್ರಿಗೆ ಹೆದರಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು. ರಾಮ- ರಾವಣರ ಯುದ್ಧ ಆಗುವ ಹೊತ್ತಿನಲ್ಲಿ ರಾವಣನು ರಾಮನಿಗೆ ಯುದ್ಧದ ಸಂಕಲ್ಪ ಮಾಡಿಸುತ್ತಾನೆ. ಬಿಜೆಪಿಯವರು ಪುರಾಣ ತಿಳಿದುಕೊಳ್ಳಬೇಕು. ರಾಹುಲ್ ಗಾಂಧಿ ಅವರ ಬಗ್ಗೆ ಎಷ್ಟು ಭಯಭೀತರಾಗಿದ್ದಾರೆ ಎನ್ನುವುದು ‘ರಾವಣ’ ಪೋಸ್ಟರ್ ನೋಡಿದರೆ ತಿಳಿಯುತ್ತದೆ ಎಂದರು.
ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಕಂಪನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಉದ್ಯೋಗಿಗಳು!
ನೀಚ ಸಂಸ್ಕೃತಿ- ಸಲೀಂ ಅಹಮದ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಬಿಜೆಪಿ ಕೀಳುಮಟ್ಟದ ರಾಜಕಾರಣ ಪ್ರದರ್ಶಿಸುತ್ತಿದೆ. ಸಮಾಜ ಕಟ್ಟುವ ಕೆಲಸ ಮಾಡುತ್ತಿರುವ ರಾಹುಲ್ ಗಾಂಧಿ ಅವರನ್ನು ಸಮಾಜ ಒಡೆಯುವ ಕೆಲಸ ಮಾಡುತ್ತಿರುವ ಬಿಜೆಪಿ ಟೀಕಿಸುವುದು ಹಾಸ್ಯಾಸ್ಪದ ಎಂದು ಹೇಳಿದರು. ಈ ಪೋಸ್ಟರ್ ಮೂಲಕ ಬಿಜೆಪಿ ನೀಚ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಇದು ಕೀಳು ಮನಃಸ್ಥಿತಿ ಹಾಗೂ ಹತಾಶ ಮನೋಭಾವವನ್ನು ತೋರಿಸುತ್ತದೆ. ಅವರು ಅಸೂಯೆ ತೋರಿದಷ್ಟೂ ರಾಹುಲ್ ಗಾಂಧಿ ವ್ಯಕ್ತಿತ್ವ ಬೆಳೆಯುತ್ತಲೇ ಇರುತ್ತದೆ ಎಂದು ಅವರು ತಿಳಿಸಿದರು.