ಲೋಕಸಭಾ ಚುನಾವಣೆ 2024: ಬಿಜೆಪಿ 150 ಸೀಟು ಗೆಲ್ಲೋದು ಕಷ್ಟ, ರಾಹುಲ್ ಗಾಂಧಿ
ಎಲ್ಲಾ ರಾಜ್ಯಗಳಿಂದ ನಮಗೆ ಪೂರಕವಾದ ಮಾಹಿತಿ ಬರುತ್ತಿದೆ. ಚುನಾವಣೆಯಲ್ಲಿ ನಮ್ಮ ಪರವಾದ ಒಳ ಅಲೆ ಇದೆ. ಇದು ಬಿಜೆಪಿಯ ಗೆಲುವನ್ನು 150ಕ್ಕಿಂತಲೂ ಕಡಿಮೆ ಸ್ಥಾನಗಳಿಗೆ ಸೀಮಿತ ಮಾಡಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಲಿದೆ’ ಎಂದು ಹೇಳಿದ ರಾಹುಲ್ ಗಾಂಧಿ
ಗಾಜಿಯಾಬಾದ್(ಏ.18): ಕೆಲ ದಿನಗಳ ಹಿಂದಿನವರೆಗೂ ಬಿಜೆಪಿ 180 ಸ್ಥಾನ ಗೆಲ್ಲಬಹುದು ಎಂಬ ಲೆಕ್ಕಾಚಾರ ಹಾಕಿದ್ದೆ. ಆದರೆ ಈಗಿನ ಪರಿಸ್ಥಿತಿ ನೋಡಿದರೆ ಬಿಜೆಪಿ 150 ಸ್ಥಾನ ಗೆಲ್ಲೋದು ಅನುಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ.
ಇಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಯಾದವ್ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್, ‘ಎಲ್ಲಾ ರಾಜ್ಯಗಳಿಂದ ನಮಗೆ ಪೂರಕವಾದ ಮಾಹಿತಿ ಬರುತ್ತಿದೆ. ಚುನಾವಣೆಯಲ್ಲಿ ನಮ್ಮ ಪರವಾದ ಒಳ ಅಲೆ ಇದೆ. ಇದು ಬಿಜೆಪಿಯ ಗೆಲುವನ್ನು 150ಕ್ಕಿಂತಲೂ ಕಡಿಮೆ ಸ್ಥಾನಗಳಿಗೆ ಸೀಮಿತ ಮಾಡಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಲಿದೆ’ ಎಂದು ಹೇಳಿದರು. ಇದೆ ವೇಳೆ ಕೇಂದ್ರ ಸರ್ಕಾರ ಚುನಾವಣಾ ಬಾಂಡ್ ಹೆಸರಿನಲ್ಲಿ ವಿಶ್ವದ ಅತಿದೊಡ್ಡ ಸುಲಿಗೆ ಮಾಡಿದೆ. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಚಾಂಪಿಯನ್ ಎಂದು ಆರೋಪಿಸಿದರು.
ರಾಹುಲ್ ಗಾಂಧಿ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕು: ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ..!
ಪಕ್ಷ ತೀರ್ಮಾನಿಸಿದರೆ ಅಮೇಠಿಯಿಂದ ಸ್ಪರ್ಧೆ: ರಾಹುಲ್
ಗಾಜಿಯಾಬಾದ್: ಉತ್ತರಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡಬೇಕೆಂದು ಪಕ್ಷ ನಿರ್ಧರಿಸುತ್ತದೆ. ಅದರಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈಗಾಗಲೇ ಕೇರಳದ ವಯನಾಡು ಕ್ಷೇತ್ರದಿಂದ ಈಗಾಗಲೇ ನಾಮಪತ್ರ ಸಲ್ಲಿಸಿರುವ ರಾಹುಲ್‌ಗೆ, ಸಾಂಪ್ರದಾಯಿಕವಾಗಿ ಸ್ಪರ್ಧಿಸುತ್ತಾ ಬಂದಿರುವ ಅಮೇಠಿ ಕ್ಷೇತ್ರದಿಂದಲೂ ಕಣಕ್ಕಿಳಿಯುವ ಕುರಿತು ಪ್ರಶ್ನೆ ಕೇಳಿದಾಗ ನೇರವಾಗಿ ಉತ್ತರ ನೀಡದೇ ತಪ್ಪಿಸಿಕೊಂಡರು.
ಕಳೆದ ಬಾರಿ ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋತಿದ್ದರು. ಹೀಗಾಗಿ ಈ ಬಾರಿ ಅಲ್ಲಿ ಅವರ ಸ್ಪರ್ಧೆ ಅನುಮಾನ ಎನ್ನಲಾಗುತ್ತಿದೆ. ಮತ್ತೊಂದೆಡೆ ರಾಹುಲ್‌ರ ಸೋದರಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ, ತಾವು ಪಕ್ಷ ಬಯಸಿದರೆ ಅಮೇಠಿಯಿಂದ ಸ್ಪರ್ಧೆಗೆ ಸಿದ್ಧ ಎಂದು ಹೇಳಿದ್ದಾರೆ.