Asianet Suvarna News Asianet Suvarna News

ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ನೀತಿ ಜಾರಿಗೊಳಿಸಲು ಇದು ಸಕಾಲ: ಸಿ.ಟಿ.ರವಿ

* ಹೊಸ ಜನಸಂಖ್ಯಾ ನೀತಿ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ
* ಕರ್ನಾಟಕದಲ್ಲೂ ಹೊಸ ಜನಸಂಖ್ಯಾ ನೀತಿಯನ್ನು ಜಾರಿಗೊಳಿಸಲು ಸಕಾಲ ಎಂದ ಬಿಜೆಪಿ ನಾಯಕ
 * ಉತ್ತರ ಪ್ರದೇಶ, ಅಸ್ಸಾಂ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲೂ ಆಗಲಿ ಎಂದ ರವಿ

It is high time Karnataka brings in a new population policy Says CT Ravi rbj
Author
Bengaluru, First Published Jul 13, 2021, 3:50 PM IST

ಬೆಂಗಳೂರು, (ಜುಲೈ.13): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರಕಾರ 2021-2030ರ ಸಾಲಿನ ಹೊಸ ಜನಸಂಖ್ಯಾ ನೀತಿಯನ್ನು ಜಾರಿಗೆ ತಂದಿದ್ದಾರೆ.

ಇದೀಗ ಕರ್ನಾಟಕದಲ್ಲೂ ಉತ್ತರ ಪ್ರದೇಶ, ಅಸ್ಸಾಂ ರಾಜ್ಯಗಳ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ಜಾರಿಗೊಳಿಸಲು ಕಾಲ ಪಕ್ವವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಸರ್ಕಾರವು ಹೊಸ ಜನಸಂಖ್ಯಾ ನೀತಿಯನ್ನು ಜಾರಿ ಮಾಡಲು ಇದು ಸೂಕ್ತ ಕಾಲವಾಗಿದೆ ಎಂದಿದ್ದಾರೆ.

ಜನಸಂಖ್ಯಾ ನಿಯಂತ್ರಣಕ್ಕೆ ಯೋಗಿ ಹೊಸ ನೀತಿ, ಶೇ. 1.9ಕ್ಕೆ ಇಳಿಸುವ ಗುರಿ!

ಅಸ್ಸಾಂ ಮತ್ತು ಉತ್ತರ ಪ್ರದೇಶ ರಾಜ್ಯಗಳು ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ನೂತನ ಜನಸಂಖ್ಯಾ ನೀತಿಯನ್ನು ಜಾರಿ ಮಾಡಿವೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಜನಸಂಖ್ಯಾ ನೀತಿ ಜಾರಿಯಾಗಬೇಕಿದೆ. ಜನಸಂಖ್ಯೆಯಲ್ಲಿ ಹೆಚ್ಚಳವಾದರೆ ಲಭ್ಯವಿರುವ ಸೀಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರತಿಯೊಬ್ಬ ನಾಗರಿಕನಿಗೂ ಅವಶ್ಯಕತೆಗಳನ್ನು ಪೂರೈಸುವುದು ಕಷ್ಟವಾಗುತ್ತದೆ. ಹಾಗಾಗಿ ಜನಸಂಖ್ಯಾ ನಿಯಂತ್ರಣಕ್ಕೆ ಹೊಸ ನೀತಿ ಅಗತ್ಯವಿದೆ. ಈ ನೀತಿ ಜಾರಿಗೆ ಸೂಕ್ತ ಕಾಲ ಇದಾಗಿದೆ ಎಂದು ಅವರು ಟ್ವಿಟ್ಟರ್‌ನಲ್ಲಿ ಹೇಳಿದ್ದಾರೆ.

ಈಗಾಗಲೇ ಉತ್ತರ ಪ್ರದೇಶ, ಅಸ್ಸಾಂ ರಾಜ್ಯಗಳಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ಜಾರಿಗೆ ತರಲಾಗಿದ್ದು, ಎರಡಕ್ಕಿಂತ ಹೆಚ್ಚು ಮಕ್ಕಳು ಇರುವವರು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ, ಸರಕಾರಿ ಕೆಲಸಗಳಿಗೆ ಅರ್ಜಿ ಸಲ್ಲಿಸುವಂತಿಲ್ಲ ಹಾಗೂ ಸರಕಾರಿ ಸಬ್ಸಿಡಿಗಳನ್ನು ಪಡೆಯುವಂತಿಲ್ಲ. ಸರಕಾರಿ ಉದ್ಯೋಗಿಗಳು ಬಡ್ತಿ ಪಡೆಯಲೂ ಇದರಿಂದ ಸಾಧ್ಯವಾಗುವುದಿಲ್ಲ.

Follow Us:
Download App:
  • android
  • ios