ನಾನು ವೈಯಕ್ತಿಕ ಹಿತಾಸಕ್ತಿಗೆ ಎಂದೂ ರಾಜಕೀಯ ಮಾಡಿದವನಲ್ಲ. ಸಾಮಾಜಿಕ ಬದಲಾವಣೆಗಾಗಿ ರಾಜಕೀಯಕ್ಕೆ ಬಂದವನು. ಮಂತ್ರಿ, ಮುಖ್ಯಮಂತ್ರಿ ಸೇರಿದಂತೆ ಯಾವ ಅಧಿಕಾರದ ಮೇಲೂ ಲಾಬಿ ನಡೆಸಿದ ಇತಿಹಾಸವಿಲ್ಲ. ಅದರ ಮೇಲೆ ಆಸೆಯೂ ಇಲ್ಲ. ಸಾಮಾಜಿಕ ನ್ಯಾಯದ ಪರ ನನ್ನ ಧ್ವನಿಯನ್ನು ಎಂದೂ ಅಡಗಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್
ಬೆಂಗಳೂರು(ಜು.25): ಸಾಮಾಜಿಕ ನ್ಯಾಯದ ಪರ ನನ್ನ ಧ್ವನಿಯನ್ನು ಎಂದೂ ಅಡಗಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ತಿನ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
‘ಮುಖ್ಯಮಂತ್ರಿ ಮಾಡುವುದೂ ಗೊತ್ತು, ಇಳಿಸುವುದೂ ಗೊತ್ತು’ ಎಂಬ ಕುತೂಹಲಕಾರಿ ಹೇಳಿಕೆ ನೀಡಿದ್ದ ತಾವು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದೀರಾ ಎಂಬ ಡಿಜಿಟಲ್ ಮಾಧ್ಯಮದ ಸಂದರ್ಶನವೊಂದರ ಪ್ರಶ್ನೆಗೆ ಹರಿಪ್ರಸಾದ್ ಈ ರೀತಿ ಉತ್ತರ ನೀಡಿದ್ದಾರೆ.
ಡಿಕೆಶಿ ಆಪರೇಶನ್ ಹೇಳಿಕೆ: ಬಿ.ಕೆ.ಹರಿಪ್ರಸಾದ್ ಹೇಳಿಕೆಯನ್ನ ಡೈವರ್ಟ್ ಮಾಡೋ ಹೇಳಿಕೆನಾ?
‘ನಾನು ವೈಯಕ್ತಿಕ ಹಿತಾಸಕ್ತಿಗೆ ಎಂದೂ ರಾಜಕೀಯ ಮಾಡಿದವನಲ್ಲ. ಸಾಮಾಜಿಕ ಬದಲಾವಣೆಗಾಗಿ ರಾಜಕೀಯಕ್ಕೆ ಬಂದವನು. ಮಂತ್ರಿ, ಮುಖ್ಯಮಂತ್ರಿ ಸೇರಿದಂತೆ ಯಾವ ಅಧಿಕಾರದ ಮೇಲೂ ಲಾಬಿ ನಡೆಸಿದ ಇತಿಹಾಸವಿಲ್ಲ. ಅದರ ಮೇಲೆ ಆಸೆಯೂ ಇಲ್ಲ. ಸಾಮಾಜಿಕ ನ್ಯಾಯದ ಪರ ನನ್ನ ಧ್ವನಿಯನ್ನು ಎಂದೂ ಅಡಗಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಈ ಹೇಳಿಕೆಯ ವಿಡಿಯೋವನ್ನು ಸ್ವತಃ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
