ನನ್ನ ಬಳಿ ಪೆನ್‌ಡ್ರೈವ್‌ ಇರೋದು ನಿಜ, ಸಮಯ ಬಂದಾಗ ಬಿಡುಗಡೆ: ಲಕ್ಷ್ಮಣ ಸವದಿ

ನನ್ನ ಹತ್ತಿರ ಪೆನ್‌ಡ್ರೈವ್‌ ಇರೋದು ಕಟುಸತ್ಯ. ನನ್ನ ಮೇಲೆ ಒತ್ತಡ ಹೆಚ್ಚಾಗಲಿ ಎಂದು ಕಾಯುತ್ತಿದ್ದು, ಸಂದರ್ಭ ಬಂದಾಗ ರಿಲೀಸ್‌ ಮಾಡುವೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಪುನರುಚ್ಚರಿಸಿದರು. 

It is true that I have a pendrive Says Mla Laxman Savadi gvd

ಬೆಳಗಾವಿ (ಆ.12): ನನ್ನ ಹತ್ತಿರ ಪೆನ್‌ಡ್ರೈವ್‌ ಇರೋದು ಕಟುಸತ್ಯ. ನನ್ನ ಮೇಲೆ ಒತ್ತಡ ಹೆಚ್ಚಾಗಲಿ ಎಂದು ಕಾಯುತ್ತಿದ್ದು, ಸಂದರ್ಭ ಬಂದಾಗ ರಿಲೀಸ್‌ ಮಾಡುವೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಪುನರುಚ್ಚರಿಸಿದರು. ಜಿಲ್ಲೆಯ ಅಥಣಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಯ, ಸಂದರ್ಭ ಬಂದಾಗ ಪೆನ್‌ಡ್ರೈವ್‌ ಬಿಡುಗಡೆ ಮಾಡುವೆ. ನನ್ನ ಮೇಲೆ ಒತ್ತಡ ಹೆಚ್ಚಾಗಲಿ ಎಂದು ಕಾಯುತ್ತಿರುವೆ. ಪೆನ್‌ಡ್ರೈವ್‌ ಯಾವ ಪಕ್ಷಕ್ಕೆ ಸೇರಿದ್ದು ಎಂಬುವುದು ಬಹಿರಂಗವಾದ ಬಳಿಕ ಗೊತ್ತಾಗಲಿದೆ ಎಂದರು.

ಅಥಣಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಜಾರಿ ಕುರಿತು ಕ್ರೆಡಿಟ್‌ ವಾರ್‌ ಹಾಗೂ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಹಣ ಬಿಡುಗಡೆ ಮಾಡಿದ್ದು ಬಿಜೆಪಿ ಎಂದಿದ್ದ ಮಹೇಶ ಕುಮಟಳ್ಳಿಗೆ ತಿರುಗೇಟು ನೀಡಿದ ಸವದಿ ಅವರು, ಇತಿಹಾಸ ಗೊತ್ತಿಲ್ಲದವರಿಗೆ ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ. ಅನುಭವ ಕೊರತೆಯಿಂದ ಮಹೇಶ ಕುಮಟಳ್ಳಿ ಹೀಗೆ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಪಶುವೈದ್ಯಕೀಯ ಕಾಲೇಜಿಗೆ ಹಣ ಬಿಡುಗಡೆ ಮಾಡಿದ್ದಾರೆ. ಈ ಸಂಗತಿ ಮಹೇಶ ಕುಮಟಳ್ಳಿಗೆ ಗೊತ್ತಿಲ್ಲ ಎಂದು ತಿಳಿಸಿದರು.

Vijayapura: ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾದ ನಟ ಮಾಸ್ಟರ್ ಕಿಶನ್!

70 ಸಾವಿರ ಎಕರೆ ನೀರಾವರಿ ಸೌಲಭ್ಯಕ್ಕೆ ಮನವಿ: ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋುಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು. 70 ಸಾವಿರ ಎಕರೆ ಜಮೀನು ಇನ್ನೂ ನೀರಾವರಿಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ ರೀತಿ ಒಂಬತ್ತು ಹಳ್ಳಿಗಳು ಮತ್ತು ಜಮೀನು ಸವಳು​ಜವಳು ಸಮಸ್ಯೆಯಿಂದ ಬಾಧಿತಗೊಂಡಿರುತ್ತವೆ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು. 

ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ತಕ್ಷಣಕ್ಕೆ 20 ಕೋಟಿ ಒದಗಿಸಬೇಕು. ಅಥಣಿ ಭಾಗದ ಒಣ ದ್ರಾಕ್ಷಿಯನ್ನು ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೌಷ್ಟಿಕಾಹಾರ ತಯಾರಿಕೆಗೆ ಖರೀದಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ವಿನಂತಿಸಿದರು. ಕಾಗವಾಡ ಶಾಸಕ ಭರಮಗೌಡ ಕಾಗೆ ಮಾತನಾಡಿ, ನೂತನ ಕಾಗವಾಡ ತಾಲ್ಲೂಕಿಗೆ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲ ಮೂಲಸೌಕರ್ಯ ಒದಗಿಸಬೇಕು. ಅಲ್ಲದೆ ಕಾಗವಾಡ ತಾಲ್ಲೂಕಿನ ಎರಡು ಹೋಬಳಿಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕು, 2015 ವರೆಗಿನ ಖಾಸಗಿ ಶಾಲೆಗಳನ್ನು ಅನುದಾನಕ್ಕೊಳಪಡಿಸಬೇಕು. ಸೌಲಭ್ಯಗಳಿಂದ ವಂಚಿತಗೊಂಡಿರುವ ಗಡಿಭಾಗದ ಅಥಣಿ ಹಾಗೂ ಕಾಗವಾಡ ಕ್ಷೇತ್ರಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು ಎಂದು ಜನರ ಪರವಾಗಿ ವಿನಂತಿಸಿದರು.

ಕಾಂಗ್ರೆಸ್​​ ಶಾಸಕನ ವಿರುದ್ಧ ಸಮರಕ್ಕಿಳಿದ ಮಹಿಳಾ ಪೇದೆ ಅಮಾನತು: ವಾಟ್ಸಾಪ್ ​ಸ್ಟೇಟಸ್​​ನಲ್ಲಿ ಆಕ್ರೋಶ!

ಅಥಣಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ: ಇದಕ್ಕೂ ಮುಂಚೆ ಅಥಣಿಯ ಬಸವೇಶ್ವರ ವೃತ್ತದಲ್ಲಿ ಸ್ಥಾಪಿಸಲಾಗಿರುವ ಜಗಜ್ಯೋತಿ ಶ್ರೀ ಬಸವೇಶ್ವರರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾವರಣಗೊಳಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವರಾದ ಸತೀಶ ಜಾರಕಿಹೊಳಿ, ಎನ್‌.ಎಸ್‌.ಭೋಸರಾಜು, ರಾಮಲಿಂಗಾ ರೆಡ್ಡಿ, ಲಕ್ಷ್ಮೇ ಹೆಬ್ಬಾಳಕರ, ಸರ್ಕಾರದ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ, ಶಾಸಕ ಭರಮಗೌಡ ಕಾಗೆ, ವಿಶ್ವಾಸ ವೈದ್ಯ, ಜೆ.ಟಿ.ಪಾಟೀಲ, ಮಹೇಂದ್ರ ತಮ್ಮಣ್ಣವರ, ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್‌ ಸದಸ್ಯರಾದ ಪ್ರಕಾಶ ಹುಕ್ಕೇರಿ, ಚನ್ನರಾಜ ಹಟ್ಟಿಹೊಳಿ, ಕೊಕಟನೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಪೂಜಾರಿ, ಜಿಪಂ ಸಿಇಒ ಹರ್ಷಲ ಭೋಯತ ಸೇರಿದಂತೆ ಅನೇಕ ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಸ್ವಾಗತಿಸಿದರು. ಬೀದರ ನ ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ ವಂದಿಸಿದರು.

Latest Videos
Follow Us:
Download App:
  • android
  • ios