ಸಿದ್ದು ನಾನೇ ಸಿಎಂ ಎಂದು ಹೇಳಿರುವುದು ಸತ್ಯ: ಸಚಿವ ಆರ್.ಬಿ.ತಿಮ್ಮಾಪೂರ
ನಾಯಕತ್ವ ಬದಲಾವಣೆ, ಸಂಪುಟ ಪುನರಚನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಐದು ವರ್ಷ ನಮ್ಮದೇ ಸರ್ಕಾರ, ನಾನೇ ಸಿಎಂ ಎಂದು ಹೇಳಿರುವುದು ಸತ್ಯವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಜಮಖಂಡಿ (ನ.05): ನಾಯಕತ್ವ ಬದಲಾವಣೆ, ಸಂಪುಟ ಪುನರಚನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಐದು ವರ್ಷ ನಮ್ಮದೇ ಸರ್ಕಾರ, ನಾನೇ ಸಿಎಂ ಎಂದು ಹೇಳಿರುವುದು ಸತ್ಯವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ತಾಲ್ಲೂಕಿನ ಕಂಕಣವಾಡಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ರೈತರು ನಿರ್ಮಿಸಿರುವ ಶ್ರೀ ಸಿದ್ದೇಶ್ವರ ತೂಗು ಸೇತುವೆ ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ.
ಅವರನ್ನು ಬದಲಿಸುವ ಚರ್ಚೆ ಇಲ್ಲ. ಅವರು ಹೇಳಿರುವದು ಸರಿಯಾಗಿದೆ. ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕೆಂದರೆ ಅದನ್ನು ಶಾಸಕಾಂಗ ಪಕ್ಷದಲ್ಲಿ ಮಾಡಬೇಕಾಗುತ್ತದೆ. ಅದನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಈ ಕುರಿತು ಯಾರಿಗೂ ಅಸಮಾಧಾನ ಇಲ್ಲ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಆನಂದ ನ್ಯಾಮಗೌಡ, ಅರುಣಕುಮಾರ ಶಹಾ, ಈಶ್ವರ ಕರಬಸನವರ, ಮುತ್ತಣ್ಣ ಹಿಪ್ಪರಗಿ, ಪರಗೌಡ ಬಿರಾದಾರ, ಅಶೋಕ ಕಿವಡಿ, ಅಬೂಬಕರ ಕುಡಚಿ, ಇತರರು ಇದ್ದರು.
ಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ನಿರ್ಧಾರ ಫೈನಲ್: ಮುಂದಿನ ಐದು ವರ್ಷ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುತ್ತದೆ, ನಾನೇ ಮುಖ್ಯಮಂತ್ರಿ, ಮುಂದೆಯೂ ಮುಂದುವರಿಯುತ್ತೇನೆ ಎಂದಿದ್ದ ಸಿದ್ದರಾಮಯ್ಯ ಇದೀಗ, ''ನಮ್ಮದು ಹೈಕಮಾಂಡ್ ಪಕ್ಷ, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಹೈಕಮಾಂಡ್ ಏನು ಹೇಳುತ್ತೋ ನಾನು ಅದನ್ನು ಕೇಳುತ್ತೇನೆ'' ಎಂದು ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುವೆ ಎಂದು ಹಂಪಿಯಲ್ಲಿ ನೀಡಿದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗುತ್ತಿದ್ದಂತೆ, ‘ನೋಡ್ರೀ... ನಾನೊಂದು ಹೇಳ್ತೇನೆ, ನೀವೊಂದು ಬರೆಯುತ್ತೀರಿ.
6 ತಿಂಗಳಲ್ಲಿ ಕ್ಷೇತ್ರಕ್ಕೆ ಎಷ್ಟು ಅನುದಾನ ತಂದಿದ್ದೀರಿ?: ಶಾಸಕ ಶಾಂತನಗೌಡಗೆ ರೇಣುಕಾಚಾರ್ಯ ಸವಾಲು
ನಾನು ನಿನ್ನೆ ಏನು ಹೇಳಿದ್ದೆ, ನೀವು ಬರೆದಿದ್ದು ಏನು? ಹೈಕಮಾಂಡ್ ಏನ್ ತೀರ್ಮಾನ ಮಾಡುತ್ತಾರೆ ಅದಕ್ಕೆ ನಾನು ಬದ್ಧ. ನಮ್ಮದು ಹೈಕಮಾಂಡ್ ಪಕ್ಷ ಎಂದಿದ್ದೆ. ಆದರೆ ನೀವು ಬರೆದಿದ್ದೇ ಬೇರೆ’ ಎಂದು ಮಾಧ್ಯಮಗಳ ವಿರುದ್ಧವೇ ಹರಿಹಾಯ್ದರು. ಇದೇ ವೇಳೆ ಪತ್ರಕರ್ತರು ಮತ್ತೆ ಮುಖ್ಯಮಂತ್ರಿ ಗಾದಿ ಗೊಂದಲ ಕುರಿತು ಪ್ರಶ್ನಿಸಿದಾಗ, ಮುಖ್ಯಮಂತ್ರಿ ಬದಲಾವಣೆ ಕುರಿತಾಗಲಿ, ಡಾ.ಜಿ.ಪರಮೇಶ್ವರ್ ಅವರು ಭವಿಷ್ಯದಲ್ಲಿ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ಬಗೆಗಾಗಲಿ ಪ್ರತಿಕ್ರಿಯಿಸಲ್ಲ ಎಂದರು.