ಭ್ರಷ್ಟಾಚಾರದಲ್ಲಿ ಬಿಜೆಪಿ ಎತ್ತಿದ ಕೈ, ಮುಡಾದಲ್ಲಿ ಹಗರಣ‌ ಮಾಡಿದ್ದೇ ಅವರು: ಸಚಿವ ದರ್ಶನಾಪುರ

ಭ್ರಷ್ಟಾಚಾರದಲ್ಲಿ ಬಿಜೆಪಿ ಎತ್ತಿದ ಕೈ, ಮುಡಾದಲ್ಲಿ ಹಗರಣ‌ ಮಾಡಿದ್ದೇ ಬಿಜೆಪಿಗರು, ತಾವು ತಿಂದು‌ ಬೇರೆಯವರ ಮೂತಿಗೆ ಒರೆಸುತ್ತಿದ್ದಾರೆ ಎಂದು ಸಣ್ಣ ಕೈಗಾರಿಕೆ ಇಲಾಖೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶರಣಬಸಪ್ಪಗೌಡ ಹೇಳಿದರು. 

It was the BJP who created the scam in Muda Says minister Sharanabasappa Darshanapur gvd

ಯಾದಗಿರಿ (ಜು.31): ಭ್ರಷ್ಟಾಚಾರದಲ್ಲಿ ಬಿಜೆಪಿ ಎತ್ತಿದ ಕೈ, ಮುಡಾದಲ್ಲಿ ಹಗರಣ‌ ಮಾಡಿದ್ದೇ ಬಿಜೆಪಿಗರು, ತಾವು ತಿಂದು‌ ಬೇರೆಯವರ ಮೂತಿಗೆ ಒರೆಸುತ್ತಿದ್ದಾರೆ ಎಂದು ಸಣ್ಣ ಕೈಗಾರಿಕೆ ಇಲಾಖೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶರಣಬಸಪ್ಪಗೌಡ ಹೇಳಿದರು. ಯಾದಗಿರಿ ನಗರದ ಜಿಲ್ಲಾ ಉಸ್ತುವಾರಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಡಾ ನಿವೇಶನ ಹಂಚಿಕೆ ಮಾಡಲಾಗಿದೆ. ಎಲ್ಲ ಪಕ್ಷದವರು ಪ್ಲಾಟ್ ಖರೀದಿ ಮಾಡಿದ್ದಾರೆ ಎನ್ನುವ ಸಚಿವ ಭೈರತಿ ಸುರೇಶ ಅವರ ಮಾತನ್ನು ಯಾರೊಬ್ಬ ಬಿಜೆಪಿ ನಾಯಕ‌ ಅಲ್ಲಗೆಳೆಯುತ್ತಿಲ್ಲವಲ್ಲ ಎಂದರು. 

ಬಿಜೆಪಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಜನಪ್ರಿಯತೆ ಸಹಿಸದೇ ಅವರ ಹೆಸರಿಗೆ ಮಸಿ ಬಳಿವ ಹುನ್ನಾರ ನಡೆಸುತ್ತಿದ್ದಾರೆಂದು ದೂರಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ವಿಧಾನಸಭೆಯಲ್ಲಿ ಗೆದ್ದಿದೆ. ಲೋಕಸಭೆ ಫಲಿತಾಂಶದಲ್ಲಿ ಸಹ ಬಿಜೆಪಿ ಅಂದುಕೊಂಡಷ್ಟು ಸ್ಥಾನಗಳು ಸಿಗದೇ ಇರುವ ಕಾರಣ, ಬಿಜೆಪಿ ಹೈಕಮಾಂಡ್‌ ರಾಜ್ಯ ನಾಯಕರಿಗೆ ಒತ್ತಡ ಹೇರಿದೆ. ಆದ್ದರಿಂದ ಬಿಜೆಪಿ‌ ನಾಯಕರು ಇಂತಹ ಕೆಳಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಬಿಜೆಪಿ ಪಾದಯಾತ್ರೆ ಕುರಿತು ಸ್ವತಃ ಬಿಜೆಪಿ ಶಾಸಕ ಯತ್ನಾಳ ಅವರೇ ಟೀಕಿಸಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ಮುಡಾ ಹಗರಣ ಬಗ್ಗೆ ಬಿಜೆಪಿಯವರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಪರಮೇಶ್ವರ್

ಮಾಧ್ಯಮಗಳು ಸುದ್ದಿಯ ಸತ್ಯಾಸತ್ಯತೆ ಅರಿಯಿರಿ: ಮಾಧ್ಯಮಗಳು ಯಾವುದೇ ವಿಷಯವನ್ನು ಜನರಿಗೆ ತಿಳಿಸುವ ಮುನ್ನ ಅದರ ಸತ್ಯಾಸತ್ಯತೆ ಅರಿತು, ನಿಖರವಾದ ಮಾಹಿತಿ ತಿಳಿಸಬೇಕು. ತಪ್ಪಾಗಿ ನೀಡಿದರೆ ಸಮಾಜದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತದೆ ಎಂದು ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅಭಿಪ್ರಾಯಪಟ್ಟರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ, ಮಂಗಳವಾರ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಮುದ್ರಣ ಮಾಧ್ಯಮದ ಮೇಲೆ ಜನರ ಮೇಲೆ ಅಪಾರವಾದ ವಿಶ್ವಾಸವಿದೆ. ಹೀಗಾಗಿಯೇ ಸಾಮಾಜಿಕ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದರು. ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಎಲ್ಲಿಯೂ ನ್ಯಾಯ ಸಿಗದಿದ್ದಾಗ ಮಾಧ್ಯಮಗಳ ಮುಂದೆ ಹೋದರೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಜನರಲ್ಲಿದೆ. ಪತ್ರಕರ್ತರು ಸತ್ಯವನ್ನು ಜನತೆಗೆ ತಿಳಿಸುವಂತಹ ಕೆಲಸ ಮಾಡಲು ಮುಂದಾಗುವುದು ತುಂಬ ಅಗತ್ಯವಿದೆ ಎಂದು ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಕೆ. ನಿಂಗಜ್ಜ ಮಾತನಾಡಿ, ರಾಜ್ಯ ಸರಕಾರ ಆಂಧ್ರ ಮಾದರಿಯಲ್ಲಿ ಪತ್ರಕರ್ತರಿಗೆ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಬೇಕಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಪತ್ರಕರ್ತರಿಗೆ ನಿವೇಶನಗಳನ್ನು ನೀಡಲು ರಾಜ್ಯ ಸರಕಾರ ಮುಂದಾಗಬೇಕು ಎಂದು ತಿಳಿಸಿದರು.

ರಾಜ್ಯದ ಜನತೆ ಪ್ರಶ್ನಿಸಬೇಕಾಗಿರುವುದು ದಲಿತ ವಿರೋಧಿ ಕೇಂದ್ರವನ್ನು, ದಲಿತ ಪರ ರಾಜ್ಯ ಸರ್ಕಾರವನ್ನಲ್ಲ: ಸಿದ್ದರಾಮಯ್ಯ

ಖ್ಯಾತ ಹಾಸ್ಯ ಕಲಾವಿದ ಬಸವರಾಜ ಮಹಾಮನಿ ಮಾತನಾಡಿ, ಪತ್ರಿಕೋದ್ಯಮದಲ್ಲಿ ನೈಜ ಪತ್ರಕರ್ತರ ಸಂಖ್ಯೆ ಕಡಿಮೆ ಆಗುತ್ತಿರುವುದು ನಿಜಕ್ಕೂ ಕಳವಳಕಾರಿ ಎಂದರು. ಡಿಡಿಯು ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಡಾ. ಭೀಮಣ್ಣ ಮೇಟಿ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಕಷ್ಟು ಮಾಧ್ಯಮಗಳು ಹೊಸದಾಗಿ ಬರುತ್ತಿವೆ. ಅದರಲ್ಲಿಯೂ ದೃಶ್ಯ ಮಾಧ್ಯಮಗಳಿಗಿಂತಲೂ ಮುದ್ರಣ ಮಾಧ್ಯಮ ಮೇಲೆ ಸಾಕಷ್ಟು ವಿಶ್ವಾಸವಿದೆ. ಇದನ್ನು ಉಳಿಸಿಕೊಂಡು ಹೋಗಬೇಕು ಎಂದು ತಿಳಿಸಿದರು. ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಮಾತನಾಡಿ, ಕಳೆದ ಮೂರು ವರ್ಷಗಳಿಂದಲೂ ಪತ್ರಕರ್ತರ ಏಳ್ಗೆಗೆ ಸಂಘ ಶ್ರಮಿಸುವ ಮೂಲಕ ಇಡೀ ರಾಜ್ಯದಲ್ಲಿಯೇ ಉತ್ತಮ ಸಂಘ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ ಎಂದರು.

Latest Videos
Follow Us:
Download App:
  • android
  • ios