ಜಗದೀಶ್‌ ಶೆಟ್ಟರ್‌ಗೆ ಕಾಂಗ್ರೆಸ್‌ನಿಂದ ಯಾವುದೇ ಅನ್ಯಾಯ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಜಗದೀಶ್‌ ಶೆಟ್ಟರ್ ಅವರಿಗೆ ಕಾಂಗ್ರೆಸ್‌ನಿಂದ ಯಾವುದೇ ಅನ್ಯಾಯ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿರಾಜಪೇಟೆ ತಾಲೂಕಿನ ಅಂಬಟ್ಟಿಯ ಗಾಲ್ಫ್ ಮೈದಾನದಲ್ಲಿ ಸುದ್ದಿಗಾರರೊದಿಗೆ ಮಾತನಾಡಿದರು.

jagadish shettar return to bjp issue cm siddaramaiah reaction at madikeri gvd

ಮಡಿಕೇರಿ (ಜ.26): ಜಗದೀಶ್‌ ಶೆಟ್ಟರ್ ಅವರಿಗೆ ಕಾಂಗ್ರೆಸ್‌ನಿಂದ ಯಾವುದೇ ಅನ್ಯಾಯ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿರಾಜಪೇಟೆ ತಾಲೂಕಿನ ಅಂಬಟ್ಟಿಯ ಗಾಲ್ಫ್ ಮೈದಾನದಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದೆ ಬಿಜೆಪಿ ವಂಚಿಸಿದೆ ಎಂದು ಹೇಳಿ ಅವರು ಕಾಂಗ್ರೆಸ್‌ಗೆ ಬಂದರು. ಕಾಂಗ್ರೆಸ್ ಪಕ್ಷ ಅವರಿಗೆ ಟಿಕೆಟ್ ನೀಡಿತು. ಆದರೆ ಸ್ವ ಕ್ಷೇತ್ರದಲ್ಲೇ ಅವರು ಸೋತರು. ಆದರೂ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಲಾಯಿತು. ಕಾಂಗ್ರೆಸ್ ಪಕ್ಷದಿಂದ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಆದರೆ ಅವರು ಪಕ್ಷಕ್ಕೆ ರಾಜಿನಾಮೆ ನೀಡಿರುವ ವಿಚಾರ ಗೊತ್ತಾಗಿಲ್ಲ. 

ಈಚೆಗೆ ನನ್ನ ಬಳಿ ಮಾತನಾಡಿದ್ದಾಗಲೂ ಅವರು ಬಿಜೆಪಿ ನನಗೆ ಅನ್ಯಾಯ ಮಾಡಿದೆ. ವಾಪಸ್ ಆ ಪಕ್ಷಕ್ಕೆ ಹೋಗುವುದಿಲ್ಲ ಎಂದಿದ್ದರು ಎಂದು ವಿಷಾದ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರಿಗೆ ನಮ್ಮಲ್ಲಿ ಓಳ್ಳೆಯ ಸ್ಥಾನ ಮಾನ ನೀಡಿ, ಗೌರವದಿಂದ ನೋಡಿಕೊಂಡಿದ್ದೇವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದ ಸಿಎಂ ಲಕ್ಷ್ಮಣ ಸವದಿ ನಮ್ಮಲೆ ಇದ್ದಾರೆ ಅವರು ನಮ್ಮ ಪಕ್ಷದಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ ಹೀಗಾಗಿ ಎಲ್ಲೂ ಹೋಗಲ್ಲ ಎಂದರು. ಹಿಂದೆ ಮೊಟ್ಟೆ ಎಸೆದವರು ಬಿಜೆಪಿಯ ದುಷ್ಟರು, ಕೊಡಗಿನ ಜನರು ಯಾರು ದುಷ್ಟರಲ್ಲ ಅವರು ಸಜ್ಜನರು ಇಂದು ನನ್ನ ಮೇಲೆ ಹೂವಿನ ಮಳೆಯನ್ನೇ ಸುರಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಸಂಸದ ಡಾ.ಉಮೇಶ್‌ ಜಾಧವ್‌ಗೆ ಪ್ರೋಟೋಕಾಲ್‌ ಗೊತ್ತಿದೆಯಾ: ಸಚಿವ ಪ್ರಿಯಾಂಕ್‌ ಖರ್ಗೆ

ಅಂತರ್ಜಲಮಟ್ಟ ಹೆಚ್ಚಿಸಲು ಇಡೀ ರಾಜ್ಯದಲ್ಲಿ ಕೆರೆಗಳನ್ನು ತುಂಬಿಸುವ ಕಾರ್ಯ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಇಡೀ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಮಾಡಲಾಗುತ್ತಿದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಳ ಆಗಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪಿರಿಯಾಪಟ್ಟಣ ತಾಲೂಕು ಕೊಪ್ಪ ಗ್ರಾಮದಲ್ಲಿ ಮುತ್ತಿನ ಮುಳುಸೋಗೆ ಬಳಿಯಿಂದ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.

ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವೆ ಎಂದಿದ್ದ ದೇವೇಗೌಡರು: ಸಚಿವ ಚಲುವರಾಯಸ್ವಾಮಿ

2017 ರಲ್ಲಿ ನಾನು ಈ ಯೋಜನೆಗೆ ಮಂಜೂರು ಮಾಡಿ ಚಾಲನೆ ನೀಡಿದ್ದೆ. ಪಿರಿಯಾಪಟ್ಟಣ ತಾಲೂಕಿನ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಇದೆ, ಈ ಯೋಜನೆಯಿಂದ 150 ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಹೆಚ್ಚಳ ಆಗಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಯುತ್ತದೆ. ಇದರಿಂದ 79 ಗ್ರಾಮಗಳ 93 ಸಾವಿರ ಜನರಿಗೆ ಅನುಕೂಲ ಆಗುತ್ತದೆ ಎಂದರು. ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ. ನಾವು ನೀರಾವರಿ ಯೋಜನೆಗೆ ಪ್ರತಿ ವರ್ಷ 10 ಸಾವಿರ ಕೋಟಿ ಖರ್ಚು ಮಾಡುವುದಾಗಿ ವಾಗ್ದಾನ ಮಾಡಿದ್ದೆವು, ಅದರಂತೆ 5 ವರ್ಷಗಳಲ್ಲಿ 56 ಸಾವಿರ ಕೋಟಿ ಖರ್ಚು ಮಾಡಿದೆವು. ರಾಜ್ಯದ 223 ತಾಲೂಕುಗಳಲ್ಲಿ ಬರಗಾಲ ಇದೆ. ಆದರೂ ಜನರಿಗೆ ನೀರಿನ ಸಮಸ್ಯೆ ಆಗದಂತೆ ಕಾರ್ಯ ನಿರ್ವಹಿಸಿದ್ದೇವೆ. ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ ಆದರೆ ಇನ್ನೂ ಬರ ಪರಿಹಾರ ಬಿಡುಗಡೆ ಆಗಿಲ್ಲ ಎಂದು ಅವರು ತಿಳಿಸಿದರು.

Latest Videos
Follow Us:
Download App:
  • android
  • ios