ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರೋದು ಪಕ್ಕಾ ಎಂದ ಶಾಮನೂರು ಶಿವಶಂಕರಪ್ಪ!

ಜಗದೀಶ್ ಶೆಟ್ಟರ್ ನಮ್ಮ ಬೀಗರು. ನಾನು ಇನ್ನು  ಅವರ ಜತೆಗೆ ಮಾತಾಡಿಲ್ಲ. ಅವರು ಕಾಂಗ್ರೆಸ್  ಸೇರೋದು ಪಕ್ಕಾ ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.

jagadish shettar will joining congress says Shamanuru Shivashankarappa gow

ದಾವಣಗೆರೆ (ಏ.16): ಜಗದೀಶ್ ಶೆಟ್ಟರ್ ನಮ್ಮ ಬೀಗರು. ನಾನು ಇನ್ನು  ಅವರ ಜತೆಗೆ ಮಾತಾಡಿಲ್ಲ. ಅವರು ಕಾಂಗ್ರೆಸ್ ಬರಬಹುದು ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ  ಕೇಂದ್ರ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್‌ಬೈ ಹೇಳಲು ತೀರ್ಮಾನಿದ್ದು,  ಶಾಮನೂರು ಶಿವಶಂಕರಪ್ಪ  ಅವರು ನೀಡಿರುವ ಈ ಹೇಳಿಕೆ ಮಹತ್ವ ಪಡೆದಿದೆ. ಬಿಜೆಪಿ ಇಂತಹ‌ ಕೆಲಸ ಮಾಡಿ ಎಲ್ಲವನ್ನು ಕಳೆದುಕೊಳ್ಳುತ್ತಾರೆ. ಬಿಜೆಪಿ ರಾಜ್ಯದಲ್ಲಿ 60 ಸೀಟು ಕೂಡ ಗೆಲ್ಲಲ್ಲ. ಕಾಂಗ್ರೆಸ್ ಗೆ ಬಂದ್ರೆ ಟಿಕೆಟ್ ಕೊಡಲೇಬೇಕಾಗುತ್ತದೆ. ಟಿಕೆಟ್  ಕೊಟ್ಟರೇಬೆ ಅವರು ಕಾಂಗ್ರೆಸ್ ಸೇರೋದು. ಕಾಂಗ್ರೆಸ್ ಗೆ ಅವರು ಬರೋದು ಪಕ್ಕಾ. ನಮ್ಮ ಮಗ ಅವರ ಜತೆಗೆ ಮಾತನಾಡುತ್ತಾನೆ. 

ಕಟ್ಟಿದ ಮನೆಯಿಂದ ಹೊರಹೋಗಲು ದುಃಖವಾಗ್ತಿದೆ: ಜಗದೀಶ ಶೆಟ್ಟರ್ ಭಾವುಕ ಮಾತು

ನಮ್ಮ ಕಾಂಗ್ರೆಸ್ ಹಿರಿಯ ನಾಯಕರು ಈಗಾಗಲೇ ಮಾತನಾಡಿದ್ದಾರೆ. ಲಿಂಗಾಯತ ನಾಯಕರು ಒಬ್ಬೊಬ್ಬರಾಗಿ ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಮುಂದೆ ಏನಾಗೊತ್ತೋ ಕಾದು ನೋಡೋಣ ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.

ಬಿಜೆಪಿಯಲ್ಲಿ ರಾಜೀನಾಮೆ ಪರ್ವ, ಶಾಸಕ ಸ್ಥಾನಕ್ಕೆ ನೆಹರು ಓಲೇಕಾರ್​ ರಾಜೀನಾಮೆ..!

ಏಪ್ರಿಲ್‌ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.  ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ.  ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

Latest Videos
Follow Us:
Download App:
  • android
  • ios