ಕರ್ನಾಟಕದಲ್ಲಿ ಕೋಮುವಾದಿ ಬಿಜೆಪಿಯನ್ನು ಮಣಿಸಿ ಕಾಂಗ್ರೆಸ್ ಜಯಗಳಿಸಿ ಸರ್ಕಾರ ರಚಿಸಿರುವುದು ದೇಶದಲ್ಲಿ ಹೊಸ ನಿರೀಕ್ಷೆಯನ್ನು ಹುಟ್ಟಿಸಿದೆ ಎಂದು ಜಮ್ಮು ಕಾಶ್ಮೀರದ ಪಿಡಿಪಿ ಪಕ್ಷದ ಅಧ್ಯಕ್ಷೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಮೇ.22): ಕರ್ನಾಟಕದಲ್ಲಿ ಕೋಮುವಾದಿ ಬಿಜೆಪಿಯನ್ನು ಮಣಿಸಿ ಕಾಂಗ್ರೆಸ್ ಜಯಗಳಿಸಿ ಸರ್ಕಾರ ರಚಿಸಿರುವುದು ದೇಶದಲ್ಲಿ ಹೊಸ ನಿರೀಕ್ಷೆಯನ್ನು ಹುಟ್ಟಿಸಿದೆ ಎಂದು ಜಮ್ಮು ಕಾಶ್ಮೀರದ ಪಿಡಿಪಿ ಪಕ್ಷದ ಅಧ್ಯಕ್ಷೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮುವಾದಿ ಮತ್ತು ವಿಭಜಿಸಿ ಆಳುವ ಮನೋಭಾವ ಹೊಂದಿರುವ ಬಿಜೆಪಿಯನ್ನು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸುವ ಮೂಲಕ ಕರ್ನಾಟಕದ ಜನತೆ ಇಡೀ ದೇಶಕ್ಕೇ ಭರವಸೆಯ ಹಾದಿ ತೋರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಎಲ್ಲ ನಾಯಕರೂ ಚುನಾವಣೆಯಲ್ಲಿ ಧರ್ಮದ ವಿಷಯಗಳನ್ನು ಪ್ರಸ್ತಾಪಿಸಿದರು. ಆದರೆ ಮತದಾರರು ಇದನ್ನು ತಿರಸ್ಕರಿಸಿದರು ಎಂದು ವಿವರಿಸಿದರು. ಕಳೆದ ಐದು ವರ್ಷದ ಬಿಜೆಪಿಯು ದ್ವೇಷದ ರಾಜಕಾರಣ, ಕೋಮುವಾದದಿಂದ ಬೇಸತ್ತ ಜನತೆ ಈಗ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ’ ಯಾತ್ರೆಯು ಕಾಂಗ್ರೆಸ್ ಗೆಲುವಿಗೆ ತಳಪಾಯ ಹಾಕಿಕೊಟ್ಟಿತು. ಈಗ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಉತ್ತಮ ಆಡಳಿತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹುಣಸೂರು ತಾಲೂಕಿನ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಹರೀಶ್ ಗೌಡ
ಕಲಂ 370 ರದ್ದು ಸರಿಯಲ್ಲ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವು ಒಕ್ಕೂಟ ವ್ಯವಸ್ಥೆಗಿದ್ದ ಉತ್ತಮ ಉದಾಹರಣೆಯಾಗಿತ್ತು. ಆದರೆ ಇದನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರದ್ದು ಮಾಡಿದ್ದು ಸರಿಯಲ್ಲ. ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಕಲಂ 370 ರ ಅಡಿ ವಿಶೇಷ ಸ್ಥಾನಮಾನ ನೀಡಲಾಗಿತ್ತು. ಒಕ್ಕೂಟ ವ್ಯವಸ್ಥೆಗೂ ಇದು ಪೂರಕವಾಗಿತ್ತು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಹಲವು ನೆಪಗಳನ್ನೊಡ್ಡಿ ವಿಶೇಷ ಸ್ಥಾನಮಾನ ರದ್ದುಪಡಿಸಿದೆ ಎಂದು ಟೀಕಿಸಿದರು.
ಕಲಂ 370 ರದ್ದು ಮಾಡಿದ್ದನ್ನು ತಾವು ತೀವ್ರವಾಗಿ ವಿರೋಧಿಸುತ್ತಿದ್ದು, ಇದನ್ನು ಜಮ್ಮು ಕಾಶ್ಮೀರದಲ್ಲಿ ಮರು ಸ್ಥಾಪಿಸುವವರೆಗೂ ನಾನು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ಪಕ್ಷದಿಂದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. 370 ನೇ ವಿಧಿಯನ್ನು ರದ್ದು ಮಾಡಿದ್ದು ಜಮ್ಮು ಕಾಶ್ಮೀರದಲ್ಲಿ ಪ್ರತೀಕೂಲ ಪರಿಣಾಮ ಬೀರಿದೆ. ಭದ್ರತೆಯ ಹೆಸರಿನಲ್ಲಿ ನಾಗರಿಕರಿಗೆ ಪ್ರತಿದಿನ ತೊಂದರೆ ನೀಡಲಾಗುತ್ತಿದ್ದು ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಆರು ಬಾರಿ ಗೆದ್ದರೂ ಸಚಿವ ಸ್ಥಾನಕ್ಕಾಗಿ ಕಾಯಬೇಕು ಮೈಸೂರು ಜಿಲ್ಲೆಯ ಮೂವರು ಶಾಸಕರು!
ಜಿ-20 ಪ್ರವಾಸೋದ್ಯಮ ಸಭೆಯು ಮೇ 22 ರಿಂದ 24 ರವರೆಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿದ್ದು ಇದನ್ನು ಬಿಜೆಪಿ ಹೈಜಾಕ್ ಮಾಡಿದೆ. ಜಿ-20 ಲಾಂಛನ ಕಮಲದ ರೀತಿ ಇದೆ. ಲಾಂಛನವು ದೇಶಕ್ಕೆ ಸಂಬಂಧಪಟ್ಟಂತೆ ಇರಬೇಕು. ಅದನ್ನು ಬಿಟ್ಟು ಬಿಜೆಪಿಯ ಚಿಹ್ನೆ ಕಮಲದಂತೆ ಇದೆ ಎಂದು ಇದೇ ಸಂದರ್ಭದಲ್ಲಿ ದೂರಿದರು.
