ಕಾಂಗ್ರೆಸ್‌, ಬಿಜೆಪಿ ರಾಜ್ಯಾಧ್ಯಕ್ಷರ ಬದಲಿಗೆ ಜಾರಕಿಹೊಳಿ ಬ್ರದರ್ಸ್‌ ಪಟ್ಟು!

ಹೈಕಮಾಂಡ್ ತೀರ್ಮಾನವೇ ಅಂತಿಮ ಹೊಸ ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಹೈಕಮಾಂಡ್ ನವರು ಏನು ತೀರ್ಮಾನ ಮಾಡ್ತಾರೋ ಅದೇ ಅದೇ ಆಗುತ್ತದೆ. ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿಯವರು ಹೇಳಿಕೆ ನಿಡಿರುವ ಬಗ್ಗೆ ಅವರನ್ನೇ ಕೇಳಬೇಕು. ನಾನು ಈ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದ   ಮುಖ್ಯಮಂತ್ರಿ ಸಿದ್ದರಾಮಯ್ಯ 

Jarkiholi Brothers  Demand For Change Congress, BJP State Presidents

ಬೆಂಗಳೂರು(ಡಿ.16): ಒಂದೆಡೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರು ಬದಲಾವಣೆ ಆಗಬೇಕೆಂದು ಕಾಂಗ್ರೆಸ್‌ನಲ್ಲಿ ಆಗ್ರಹ ಕೇಳಿಬರುತ್ತಿದೆ. ಈ ನಿಟ್ಟಿನಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು 2 ದಿನದಿಂದ ನಡೆಸುತ್ತಿರುವ ಚಟುವಟಿಕೆ ಹಾಗೂ ಹೇಳಿಕೆಗಳು ಸಾಕ್ಷಿಯಾಗಿವೆ. ಇನ್ನೊಂದೆಡೆ ಅವರ ಸೋದರ ಹಾಗೂ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಆಗ್ರಹಿಸಿ ಮತ್ತೆ ಹೇಳಿಕೆ ನೀಡಿದ್ದಾರೆ. ಬೇರೆ ಬೇರೆ ಪಕ್ಷಗಳಲ್ಲಿರುವ ಸೋದರರು, ಉಭಯ ಪಕ್ಷಗಳ ರಾಜ್ಯಾಧ್ಯಕ್ಷರ ಬದಲಾವಣೆಗೆ ಆಗ್ರಹಿಸುತ್ತಿರುವುದು ವಿಶೇಷ.

ವಿಜಯೇಂದ್ರ ಬದಲಿಸಿ, ಹೊಸ ಅಧ್ಯಕ್ಷರ ನೇಮಿಸಿ: ರಮೇಶ್‌ ಜಾರಕಿಹೊಳಿ 

ಬೆಳಗಾವಿ:  ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಲು ನಾವು ಹೋರಾಟ ಮಾಡಿದ್ದು ನಿಜ. ಈ ಬಗ್ಗೆ ಹೈಕಮಾಂಡ್ ಕೈಗೊಳ್ಳುವ ನಿರ್ಣಯಕ್ಕೆ ನಾವು ಬದ್ಧ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಕೆಪಿಸಿಸಿ ಅಧ್ಯಕ್ಷಗಿರಿ ರೇಸ್‌ಗೆ ಜಾರಕಿಹೊಳಿ: ಸತೀಶ್ ಎಂಟ್ರಿಯಿಂದ ರೋಚಕ ತಿರುವು!

ಹಾಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಬದಲಾವಣೆ ಸಂದರ್ಭದಲ್ಲಿ ತಮ್ಮನ್ನು ಹುದ್ದೆಗೆ ಪರಿ ಗಣಿಸಬೇಕು

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ಬಗ್ಗೆ ನಮಗೆ ಅಪಾರವಾದ ಗೌರವ ಇದೆ. ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಿದರೆ ಸ್ವಾಗತ. ಆದರೆ, ಯಾಕೆ ಪ್ರವಾಸ ಮಾಡುತ್ತಾರೆ ಅದನ್ನ ಸ್ಪಷ್ಟಪಡಿಸಬೇಕು. ಮಗನ ಸ್ಥಾನ ಭದ್ರ ಮಾಡೋಕೆ ಮಾಡುತ್ತಿದ್ದಾರಾ? ಪಕ್ಷ ಭದ್ರ ಮಾಡೋಕೆ ಮಾಡುತ್ತಿದ್ದಾರಾ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಯಡಿಯೂರಪ್ಪರವರೇ ನಿಮ್ಮ ಬಗ್ಗೆ ಗೌರವ ಇದೆ. ವಯಸ್ಸಾಗಿದೆ. ಪಕ್ಷ ಎಲ್ಲವನ್ನೂ ನಿಮಗೆ ಕೊಟ್ಟಿದೆ‌. ದಯವಿಟ್ಟು ಪಕ್ಷವನ್ನು ಬ್ಲ್ಯಾಕ್‌ಮೇಲ್ ಮಾಡಬೇಡಿ. ವಿಜಯೇಂದ್ರ ಬೆನ್ನು ಹತ್ತಿದರೆ ನೀವೂ ಹಾಳಾಗುತ್ತೀರಿ. ಮಗನಾಗಿ ನೋಡಬೇಡಿ, ವೈಫಲ್ಯಗೊಂಡ ಅಧ್ಯಕ್ಷ ಅಂತಾ ನೋಡಿ. ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕಕ್ಕೆ ಸಹಕಾರ ಕೊಡಿ ಎಂದು ಒತ್ತಾಯಿಸಿದರು.

ಡಿಕೆಶಿ ಹಸ್ತಕ್ಷೇಪ ನನಗೆ ಸಂಬಂಧಿಸಿದ್ದಲ್ಲ: 

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ ಹಸ್ತಕ್ಷೇಪ ಮಾಡುತ್ತಿರುವ ವಿಚಾರದ ಕುರಿತು ಮಾತನಾಡಿದ ಅವರು, ಅದು ಕಾಂಗ್ರೆಸ್ ಆಂತರಿಕ ಸಮಸ್ಯೆ. ಅದಕ್ಕೂ ನನಗೂ ಸಂಬಂಧ ಇಲ್ಲ. ನಾನು ಬಿಜೆಪಿ ನಿಷ್ಠಾವಂತ ಎಂಎಲ್‌ಎ, ಕಾರ್ಯಕರ್ತ. ಕಾಂಗ್ರೆಸ್ ಕಚೇರಿ ನಿರ್ಮಾಣದಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ದೊಡ್ಡದಿತ್ತು ಎಂಬುದು ನಿಜ. ಇಂದು ಬೆಳಗಾವಿಯಲ್ಲಿ ಬಿಜೆಪಿ ಕಚೇರಿ ನಿರ್ಮಾಣ ಆಗಲು ಜಾಗ ಕೊಡಿಸಲು ನಾನು ಓಡಾಡಿದ್ದೇ‌ನೆ ಎಂದು ಹೇಳಿದರು.

ಕಾಂಗ್ರೆಸ್‌ ಕಚೇರಿಗೆ ಸತೀಶ ಜಾರಕಿಹೊಳಿ ಕೊಡುಗೆ ಏನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸತೀಶ್ ಜಾರಕಿಹೊಳಿ ಕೊಡುಗೆ ಇದೆ. ಅರ್ಧ ಕಾಮಗಾರಿ ಆಗಿದ್ದ ಕಟ್ಟಡ ಪೂರ್ಣಗೊಳಿಸಿದ್ದಾರೆ. ಇಂದಿಗೂ ಕಚೇರಿ ನಿರ್ವಹಣೆಗೆ ಸತೀಶ ಜಾರಕಿಹೊಳಿ ದುಡ್ಡು ನೀಡುತ್ತಿದ್ದಾರೆ ಎಂಬುದನ್ನು ಕೇಳಿದ್ದೇನೆ. ಕಾಂಗ್ರೆಸ್ ಕಚೇರಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲು ಹಾಗೂ ನಿರ್ವಹಣೆಗೆ ಸತೀಶ ಜಾರಕಿಹೊಳಿ ಕೊಡುಗೆ ಇದೆ ಎಂದು ಹೇಳಿದರು.

ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ವೇಳೆ ಬೆಳಗಾವಿ ರಾಜಕಾರಣಕ್ಕೆ ಡಿ.ಕೆ.ಶಿವಕುಮಾರ ಎಂಟ್ರಿ ಆಗಲು ಕೊಟ್ಟಿಲ್ಲ. ಅಲ್ಲೇ ಬ್ಲಾಕ್ ಮಾಡಿದ್ದೆ. ನಾನು ಕಾಂಗ್ರೆಸ್ ಪಕ್ಷದಲ್ಲಿ ಶಾಸಕ, ಮಂತ್ರಿಯಾಗಿ ಇದ್ದಾಗ ಆತನನ್ನು ಇಲ್ಲಿ ಬರಲು ಕೊಟ್ಟಿರಲಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ಮಟ್ಟದಲ್ಲಿ ಅಂದು ಡಿ.ಕೆ.ಶಿವಕುಮಾರ ಅವರ ಸಲಹೆ ಸ್ವೀಕಾರ ಮಾಡಿದ್ದೇನೆ ಎಂದರು.

ಕಾಂಗ್ರೆಸ್‌ ಭವನ ನಿರ್ಮಾಣದಲ್ಲಿ ಗೋಲಮಾಲ್‌:

ಕಾಂಗ್ರೆಸ್‌ ಭವನದ ಕಟ್ಟಡ ನಿರ್ಮಾಣ ಆಗುವಾಗ ಲಕ್ಷ್ಮೀ ಹೆಬ್ಬಾಳಕರ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿದ್ದರು. ಆ ವೇಳೆ ಏನು ಲೆಕ್ಕ ಪತ್ರ ಮಾಡಿದ್ದಾರೆ ದೇವರಿಗೆ ಗೊತ್ತು. ಈಗಿನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ ಕೇಳಿ, ಯಾರ್ಯಾರು ಗೋಲ್‌ಮಾಲ್ ಮಾಡಿದ್ದಾರೆ ಎಂದು ನನಗೆ ಹೇಳಿದ್ದಾರೆ. ನಾನು ಅದನ್ನು ಬಹಿರಂಗಪಡಿಸಲ್ಲ. ಆ ಹಣದಲ್ಲಿ ಯಾರು ಕಾರು ಖರೀದಿಸಿದ್ದಾರೆ ಎನ್ನುವುದನ್ನು ವಿನಯನನ್ನು ಕೇಳಿ‌ ಎಂದು ಹೇಳಿದರು.

ಕಾಂಗ್ರೆಸ್‌ ಕಚೇರಿ ಇರುವ ಜಾಗ ಕೇಂದ್ರ ಮಾಜಿ ಸಚಿವ ಬಿ.ಶಂಕರಾನಂದ ಹೆಸರಲ್ಲಿತ್ತು. ಬಿ.ಶಂಕರಾನಂದ ಮಕ್ಕಳನ್ನು ಆ ಜಾಗ ಕಚೇರಿಗೆ ಬಿಟ್ಟು ಕೊಡಲು ಮನವೊಲಿಸಿದೆ. ಬಳಿಕ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿ ಕಟ್ಟಡಕ್ಕೆ ಜಾಗ ಮಂಜೂರಾಯಿತು. ಜಾಗ ಫ್ರೀ ಆಗಿ ಕೊಡಬಹುದಿತ್ತು. ಆದರೆ, ಆ ಜಾಗಕ್ಕೆ ₹54 ಲಕ್ಷ ನಿಗದಿ ಮಾಡಿದರು. ಈ ಹಣ ಕಡಿಮೆ ಮಾಡಲು ಪ್ರಯತ್ನ ಪಟ್ಟೆ ಆದರೂ ಆಗಲಿಲ್ಲ. ಆಗ ಅಂದಿನ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹಣ ತುಂಬಲು ಮನವಿ ಮಾಡಿದರು. ಒಂದೇ ಹಂತದಲ್ಲಿ ಕಾಂಗ್ರೆಸ್ ಕಚೇರಿಗೆ ₹54 ಲಕ್ಷ ಕಟ್ಟಬೇಕಿತ್ತು. ಅದು ಬಹಳ ಆಗುತ್ತದೆ. ಎರಡು ಹಂತದಲ್ಲಿ ಹಣ ಪಾವತಿಗೆ ಮನವಿ ಮಾಡಿದೆ‌. ಬಳಿಕ ಮೊದಲ ಕಂತು ₹27 ಲಕ್ಷ ಹಣವನ್ನು ನಾನೇ ತುಂಬಿದೆ. ಜಾಗ ಖರೀದಿ ಆಯಿತು, ಕಟ್ಟಡ ಕಾಮಗಾರಿ ಆರಂಭವಾಗಿರಲಿಲ್ಲ . ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ರುಪಾಯಿ ಕೊಟ್ಟೆ . ಹೀಗೆ ಒಟ್ಟು ₹ 1.27 ಕೋಟಿ ಹಣವನ್ನು ನಾನು ಕೊಟ್ಟಿದ್ದೇನೆ. ಕಟ್ಟಡ ನಿರ್ಮಾಣದಲ್ಲಿ ಗೋಲ್‌ಮಾಲ್ ಆಗಿದೆ‌‌‌. ಮುಂದಿನ ದಿನಗಳಲ್ಲಿ ಹೇಳುತ್ತೇನೆ ಎಂದು ಹೇಳಿದರು.

ಬೆಳಗಾವಿ ಕಾಂಗ್ರೆಸ್ ಕಚೇರಿ ನಾನೇ ನಿರ್ಮಾಣ ಮಾಡಿದ್ದು ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳುತ್ತಿರುವುದು ತಪ್ಪು. ಆಗ ಇದ್ದಂತಹ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ₹20 ರಿಂದ 25 ಲಕ್ಷ ಹಣ ನೀಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಷ್ಟು ಹಣ ಕೊಟ್ಟಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಸುಳ್ಳು ಹೇಳಿದ್ದಾರೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಆಡಿದ ಮಾತಿಗೆ ನನ್ನ ಸಹಮತವಿಲ್ಲ. ಅವರು ಆ ರೀತಿ ಹೇಳಿಲ್ಲಾ ಎನ್ನುತ್ತಾರೆ. ಇವರು ಹೇಳಿದ್ದಾರೆ ಎನ್ನುತ್ತಾರೆ. ಇಂದಿರಾಗಾಂಧಿ ಬಗ್ಗೆ ಸಿಎಂ ಇಬ್ರಾಹಿಂ ಏನ್ ಬೇಕಾದರೂ ಮಾತನಾಡಿದ್ದರು. ರಾಜಕಾರಣದಲ್ಲಿ ಇಂತಹ ವಿಚಾರ ದೊಡ್ಡದು ಮಾಡಬಾರದು. ರಾಜಕಾರಣದಲ್ಲಿ ಯಾರೂ ಶುದ್ಧರಿಲ್ಲ. ಏನೇ‌ನೋ ತಪ್ಪು ಹೇಳಿಕೆ ಕೊಡುತ್ತಾರೆ. ಈ ವಿಚಾರ ದೊಡ್ಡದು ಮಾಡಿ ವಿಧಾನಸೌಧಕ್ಕೆ ಅಗೌರವ ತಂದಿದ್ದಾರೆ ಎಂದು ಕಿಡಿಕಾರಿದರು.

ಅಧಿವೇಶನದಲ್ಲಿ ಬಹುಶಃ ವಕ್ಫ್ ಕಾನೂನು ರಚನೆ ಆಗುತ್ತೆ

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ವಕ್ಫ್ ವಿರುದ್ಧ ಹೋರಾಟ ಈಗ ಮೂರು ಹಂತ ಮುಗಿದಿದೆ. ನಾಲ್ಕನೇ ಹಂತದ ಹೋರಾಟದ ಬಗ್ಗೆ ಬೆಂಗಳೂರಲ್ಲಿ ಸೇರುತ್ತೇವೆ. ಮುಂದಿನ ಹಂತದ ಹೋರಾಟ ಬಗ್ಗೆ ಚರ್ಚೆ ಮಾಡುತ್ತೇವೆ. ಬಜೆಟ್ ಅಧಿವೇಶನದಲ್ಲಿ ಬಹುಶಃ ವಕ್ಫ್ ಕಾನೂನು ರಚನೆ ಆಗುತ್ತದೆ. ಬೇರೆ ಜಿಲ್ಲೆಗಳಿಗೂ ಬರಲು ಆಹ್ವಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹೋಗುತ್ತೇವೆ. ನಾವು ಪೂರ್ಣ ಪ್ರಮಾಣದಲ್ಲಿ ಬಿಜೆಪಿ ಸರ್ಕಾರ ತರಲು ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಸರ್ಕಾರ ಪತನ ಕ್ಲೈಮಾಕ್ಸ್‌ ಹಂತಕ್ಕೆ ಬಂದಿದೆ!

ಬೆಳಗಾವಿ ರಾಜಕಾರಣದಿಂದ ಸರ್ಕಾರ ಪತನವಾಗುತ್ತದೆ ಎಂಬ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆ ಕ್ಲೈಮ್ಯಾಕ್ಸ್ ಹಂತ ಬಂದಿದ್ದು ನಿಜ. ಈಗ ಸ್ಟಾರ್ಟ್ ಆಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನುಸಚಿವರಾದ ಎಂ.ಬಿ‌.ಪಾಟೀಲ್, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ. ಬೆಳಗಾವಿಯಿಂದ ಸ್ಟಾರ್ಟ್ ಆಗಿದೆ ನೋಡಿ ಎಂದು ಅನೇಕ ನಾಯಕರು ಹೇಳಿದ್ದಾರೆ. ಆವಾಗಲೂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಲಿಲ್ಲ. ಹಾಗಾಗಿ ಆಗಿನ ಸರ್ಕಾರ ಬಿತ್ತು. ಈಗಲೂ ಎಚ್ಚರಿಕೆ ವಹಿಸದಿದ್ದರೇ ಸರ್ಕಾರ ಪತನಕ್ಕೆ ಮುಖ್ಯಮಂತ್ರಿ ಕಾರಣರಾಗಲಿದ್ದಾರೆ. ಸತೀಶ್ ಜಾರಕಿಹೊಳಿ ಸೈಲೆಂಟ್ ಆಗಿರಬಾರದು. ಉಗ್ರವಾದರೆ ಉಳಿಗಾಲವಿದೆ. ಇಲ್ಲವಾದರೆ ಅವರನ್ನು ಅಲ್ಲಿ ಮುಗಿಸುತ್ತಾರೆ ಎಂದು ಹೇಳಿದರು.

ನಾನು ಕೆಪಿಸಿಸಿಗೆ ಅಧ್ಯಕ್ಷ ಆಗಲಿ ಎಂದು ಕೆಲವರ ಕೂಗು:ಸತೀಶ್

ಬೆಂಗಳೂರು 'ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್‌ ಬಿಟ್ಟ ವಿಚಾರ. ಆದರೆ, ಈ ಬಗ್ಗೆ ಪಕ್ಷದಲ್ಲಿ ಗೊಂದಲವಿದೆ. ಇದನ್ನು ಹೈಕಮಾಂಡ್ ಪರಿ ಹರಿಸಬೇಕು. ಪಕ್ಷ ಸಂಘಟನೆ ವೇಗ ಕಳೆದುಕೊಂಡಿರು ವುದರಿಂದ ಶಾಸಕರ ಅಭಿಪ್ರಾಯಪಡೆದು ಅಧ್ರಕರ ನೇಮಕ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಬೇಕು' ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿವಾದಿಸಿದ್ದಾರೆ. ಆದರೆ ಇದರ ಜತೆಗೇ 'ಅಹಿಂದ ಸಮಾಜಕ್ಕೆ ಸೇರಿದ ನಾನು ಕೆಪಿಸಿಸಿ ಅಧ್ಯಕ್ಷನಾಗಬೇಕು ಎಂದು ಕೆಲವು ಶಾಸಕರು ಹೇಳುತ್ತಿದ್ದಾರೆ' ಎಂದು ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸಚಿವ ಸತೀಶ್ ಜಾರಕಿಹೊಳಿ ಯತ್ನ ನಡೆಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಸತೀಶ್ ಹೇಳೋದೇನು?: 

ಸುದ್ದಿಗಾರರಿಗೆ ಬುಧವಾರ ವಿವರಣೆ ನೀಡಿರುವ ಸತೀಶ್ ಜಾರಕಿಹೊಳಿ ಅವರು, 'ನೇರವಾಗಿ ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು ಎಂದು ಹೇಳುತ್ತಿಲ್ಲ ಮತ್ತು ತಾವು ಈ ಹುದ್ದೆಗೆ ಆಕಾಂಕ್ಷಿ ಎಂದೂ ನೇರವಾಗಿ ಹೇಳುತ್ತಿಲ್ಲ. ಆದರೆ, ಕೆಪಿಸಿಸಿಗೆ ಪೂರ್ಣಾವಧಿ ಅಧ್ಯಕ್ಷರ ನೇಮಕವಾಗಬೇಕು ಎಂಬುದು ನನ್ನ ಅನಿಸಿಕೆ.ಈಹಿಂದೆಲೋಕಸಭಾ ಚುನಾವಣೆ ನಂತರ ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುವುದಾಗಿ ವರಿಷ್ಠರು ಹೇಳಿದರು. 

ಇದರಿಂದಾಗಿ ಪಕ್ಷದೊಳಗೆ ಗೊಂದಲ ನಿರ್ಮಾ ಣವಾಗಿದೆ. ಇದನ್ನು ನಿವಾರಿಸಲುಹೈಕಮಾಂಡ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಿಸಲಾಗುತ್ತ ದೆಯೇ ಅಥವಾ ಹಾಲಿ ಇರುವವರನ್ನೇ ಮುಂದುವರೆಸಲಾಗುತ್ತ ದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು' ಎಂದು ಆಗ್ರಹಿಸುತ್ತಾರೆ. ಜತೆಗೆ, 'ಕೆಪಿಸಿಸಿ ಅಧ್ಯಕ್ಷ ಯಾರನ್ನೇ ಮಾಡಿದರೂ ಮತಗಳಿಕೆ ಹೆಚ್ಚಿಸುವ, ಜನಪ್ರಿಯತೆ ಇರುವ ನಾಯಕರನ್ನು ನೇಮಿಸಬೇಕು' ಎಂದು ಒತ್ತಾಯಿಸುತ್ತಾರೆ. 

ಅಲ್ಲದೆ, ಪ್ರಸ್ತುತ ಪಕ್ಷ ಸಂಘಟನೆ ವೇಗ ಕಳೆದುಕೊಳ್ಳುತ್ತಿದೆ ಎನ್ನುವ ಅವರು, ಇದಕ್ಕೆ ನಾನು ಸೇರಿ ಪಕ್ಷ ಸಂಘಟನೆ ಹೊಣೆ ಹೊತ್ತಿದ್ದವರು ಸಚಿವರಾಗಿ ಕಾರ್ಯ ದೊತ್ತಡಅನುಭವಿಸುತ್ತಿರುವುದುಕಾರಣವಿರಬ ಹುದು ಎಂದೂ ಹೇಳುವ ಮೂಲಕ ಒಬ್ಬರಿಗೆ ಒಂದು ಹುದ್ದೆ ಸಿದ್ದಾಂತ ಪಾಲನೆಯಾಗಬೇಕು ಎಂದೂ ಸೂಚ್ಯವಾಗಿ ತಿಳಿಸುತ್ತಾರೆ.

ಅಲ್ಲದೆ, ಪ್ರಸ್ತುತ ಪಕ್ಷ ಸಂಘಟನೆ ವೇಗ ಕಳೆದುಕೊಳ್ಳುತ್ತಿದೆ ಎನ್ನುವ ಅವರು, ಇದಕ್ಕೆ ನಾನು ಸೇರಿ ಪಕ್ಷ ಸಂಘಟನೆ ಹೊಣೆ ಹೊತ್ತಿದ್ದವರು ಸಚಿವರಾಗಿ ಕಾರ್ಯದೊತ್ತಡ ಅನುಭವಿಸುತ್ತಿರುವುದು ಕಾರಣವಿರಬಹುದು ಎಂದೂ ಹೇಳುವ ಮೂಲಕ ಒಬ್ಬರಿಗೆ ಒಂದು ಹುದ್ದೆ ಸಿದ್ದಾಂತ ಪಾಲನೆಯಾಗಬೇಕು ಎಂದೂ ಸೂಚ್ಯವಾಗಿ ತಿಳಿಸುತ್ತಾರೆ.

ಅಹಿಂದ ಶಾಸಕರ ಒತ್ತಡ: 

ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಸುರ್ಜೇವಾಲಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚಿಸಿದ್ದನ್ನು ಒಪ್ಪಿಕೊಳ್ಳುವ ಸತೀಶ್ ಜಾರಕಿಹೊಳಿ ಅವರು, 'ಕೆಪಿಸಿಸಿ ಹುದ್ದೆ ತಮಗೆ ನೀಡಿ ಎಂದು ಕೇಳಿಲ್ಲ' ಎಂದೇನೋ ಹೇಳುತ್ತಾರೆ. ಇದೇ ಓಘದಲ್ಲಿ, 'ಅಹಿಂದ ಸಮಾಜಕ್ಕೆ ಸೇರಿದ ನಾನು ಕೆಪಿಸಿಸಿ ಅಧ್ಯಕ್ಷ ಆಗಬೇಕು ಎಂದು ಕೆಲ ಶಾಸಕರು ಹೇಳುತ್ತಿದ್ದಾರೆ. ಜಿಲ್ಲಾ ಪ್ರವಾಸದ ವೇಳೆ ನನ್ನ ಮೇಲೂ ಒತ್ತಡ ಹಾಕುತ್ತಿದ್ದಾರೆ. ಆದರೆ, ಈ ಬಗ್ಗೆ ನಾನು ಪಕ್ಷದ ನಾಯಕರೊಂದಿಗೆ ಚರ್ಚಿಸಿಲ್ಲ' ಎನ್ನುವ ಮೂಲಕ ತಮಗಿರುವ ಆಸಕ್ತಿಯ ಸುಳಿವು ನೀಡುತ್ತಾರೆ. 

ಡಿಕೆಶಿ ಬದಲಿಸಿ ಎನ್ನಲ್ಲ: 

ಹಾಲಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರೇ ಮುಂದುವರಿದರೆ ಅದರಲ್ಲಿ ತಪ್ಪಿಲ್ಲ. ಎನ್ನುವ ಸತೀಶ್ ಜಾರಕಿಹೊಳಿ ಅವರು, ಒಂದೇ ಹುದ್ದೆ ಎಂಬ ಸಿದ್ಧಾಂತದಲ್ಲಿ ಕೆಲವೊಮ್ಮೆ ಬದಲಾವಣೆಯಾಗಬಹುದು ಎಂದೂ ಹೇಳುತ್ತಾರೆ. ಸಾಮರ್ಥವಿದ್ದರೆ ಒಬ್ಬರಿಗೆ ಎರಡಲ್ಲ, ಮೂರು ಹುದ್ದೆಯನ್ನೂ ನೀಡಬಹುದು. ನಮ್ಮ ತಕರಾರಿಲ್ಲ. ಹೈ ಕಮಾಂಡ್ ನಿರ್ಧಾರ ಅಂತಿಮವಾಗಿರಲಿದೆ. ಆದರೆ, ಜನರಲ್ಲಿ ಮತ್ತು ಪಕ್ಷದೊಳಗೆ ಮೂಡುವ ಗೊಂದಲಗಳ ನಿವಾರಣೆ ಆಗಬೇಕು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಬೇಕಾದ ಸಂದರ್ಭದಲ್ಲಿ ಸಿಎಂ ಸಭೆ ನಡೆಸಿ ಚರ್ಚೆ ನಡೆಸಬೇಕು ಎಂದರು.

ಭಿಕ್ಷೆಪದ ಬಳಕೆಯನ್ನು ದೊಡ್ಡದು ಮಾಡೋ ಅಗತ್ಯವಿಲ್ಲ: ಜಾರಕಿಹೊಳಿ 

ಕಾರ್ಯಕರ್ತ ಬೆಂಬಲವಿದ್ದರೆ ಯಾರ ಭಿಕ್ಷೆಯೂ ಬೇಡ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾವ ಅರ್ಥದಲ್ಲಿ ಅವರು ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಕಾರ್ಯಕರ್ತರಿಂದಲೇ ಎಲ್ಲರೂ ಶಾಸಕರಾಗಿರುವುದು, ಶಾಸಕರಿಂದ ಸರ್ಕಾರ ರಚನೆಯಾಗಿದೆ ಹಾಗೂ ಸರ್ಕಾರದಿಂದ ನಾವು ಸಚಿವರಾಗಿದ್ದೇವೆ. ಇನ್ನು, ಡಿ.ಕೆ.ಶಿವಕುಮಾರ್ ಮಾತಿನ ಭರದಲ್ಲಿ ಭಿಕ್ಷೆ ಎಂಬ ಪದ ಬಳಕೆ ಮಾಡಿರಬೇಕು. ಅದನ್ನು ದೊಡ್ಡದು ಮಾಡುವ ಅವಶ್ಯಕತೆಯಿಲ್ಲ ಎಂದರು.

ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಸಾವಿರಾರು ಕೋಟಿ ಬಿಲ್ ಬಾಕಿ: ಸಚಿವರು

ಮಾಸಾಂತ್ಯಕ್ಕೆ ದಿಲ್ಲಿ ಪ್ರವಾಸ 

ಈತಿಂಗಳ ಅಂತ್ಯಕ್ಕೆ ದೆಹಲಿ ಪ್ರವಾಸಕ್ಕೆಗೊಳಲಿದ್ದೇ ವಿಚಾರಗಳಿಗಾಗಿ ದೆಹಲಿಗೆ ಹೋಗುತ್ತಿಲ್ಲ. ಬದಲಿಗೆ ದೆಹಲಿಯಲ್ಲಿ ನೂತನ ಕರ್ನಾ ಟಕ ಭವನ ನಿರ್ಮಾಣಗೊಂಡಿದ್ದು, ಅದರ ಉದ್ಘಾಟನೆಗೆ ಹೋಗುತ್ತಿದ್ದೇನೆ. ಆ ಸಂದರ್ಭದಲ್ಲಿ ಹೈಕಮಾಂಡ್ ನಾಯ ಕರನ್ನು ಭೇಟಿಯಾಗಲು ಅವಕಾಶ ಸಿಕ್ಕರೆ ಭೇಟಿಯಾಗುತ್ತೇನೆ ಎಂದು ಮಾಹಿತಿ ನೀಡಿದರು.

ಹೈಕಮಾಂಡ್ ತೀರ್ಮಾನವೇ ಅಂತಿಮ ಹೊಸ ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಹೈಕಮಾಂಡ್ ನವರು ಏನು ತೀರ್ಮಾನ ಮಾಡ್ತಾರೋ ಅದೇ ಅದೇ ಆಗುತ್ತದೆ. ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿಯವರು ಹೇಳಿಕೆ ನಿಡಿರುವ ಬಗ್ಗೆ ಅವರನ್ನೇ ಕೇಳಬೇಕು. ನಾನು ಈ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios