ರಾಮನಗರ, [ನ.06]: ತೀವ್ರ ಕುತೂಹಲ ಕೆರಳಿಸಿದ್ದ ಒಟ್ಟು ಐದು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು,ಇನ್ನು ಕೇಲವೇ ಕ್ಷಣಗಳಲ್ಲಿ ಸ್ಪಷ್ಟ ಫಲಿತಾಂಶ ಹೊರ ಬೀಳಲಿದೆ.
 
 ಸಧ್ಯದ ಬಂದ ಮಾಹಿತಿ ಪ್ರಕಾರ ರಾಮನಗರ ವಿಧಾನಸಬಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಸಿಎಂ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ರಾಮನಗರ ಜಿಲ್ಲೆ ಇದೇ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿ ಒಬ್ಬರು ಗೆಲುವು ಸಾಧಿಸಿರುವುದು ಇದೇ ಮೊದಲು ಎನ್ನುವುದು ವಿಶೇಷವಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಜಯಗಳಿಸಿದ್ದರು. 

ನಂತರ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡು, ರಾಮನಗರಕ್ಕೆ ರಾಜೀನಾಮೆ ನೀಡಿದ್ದರು. ಇದ್ರಿಂದ ರಾಮನಗರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು. ನ.3 ರಂದು ಚುನಾವಣೆ ನಡೆದಿತ್ತು.