Asianet Suvarna News Asianet Suvarna News

ಉಪಚುನಾವಣಾ ಕದನ: 'ಆರ್‌.ಆರ್‌.ನಗರದಲ್ಲಿ ಜೆಡಿಎಸ್‌ನದ್ದೇ ಗೆಲುವು'

ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಾಗಿಲ್ಲ. ನಾನು ಎಂದೆಂದಿಗೂ ನಿಮ್ಮ ಜತೆ ಇರುತ್ತೇನೆ. ಬಿಜೆಪಿ-ಕಾಂಗ್ರೆಸ್‌ನವರು ಎಷ್ಟೇ ಜನರನ್ನು ಜೆಡಿಎಸ್‌ನಿಂದ ಸೇರಿಸಿಕೊಂಡರೂ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮುಂದುವರಿಸಲಾಗುವುದು ಎಂದ ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ 

JDS Candidate Krishnamurthy Says We Will Win in RR Nagar ByElection grg
Author
Bengaluru, First Published Oct 22, 2020, 9:22 AM IST

ಬೆಂಗಳೂರು(ಅ.22): ನಾನು ಈ ಕ್ಷೇತ್ರದ ಮಗನಾಗಿದ್ದು, ನಿಮ್ಮೆಲ್ಲರ ಕಷ್ಟ ಸುಖಗಳನ್ನು ನೋಡಿಕೊಂಡು ಬೆಳೆದವನು. ಜೆಡಿಎಸ್‌ ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಿಲ್ಲ. ಚುನಾವಣೆಯಲ್ಲಿ ನಾವೇ ಗೆಲ್ಲುವುದು ಎಂದು ಆರ್‌.ಆರ್‌.ನಗರ ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಾಗಿಲ್ಲ. ನಾನು ಎಂದೆಂದಿಗೂ ನಿಮ್ಮ ಜತೆ ಇರುತ್ತೇನೆ. ಬಿಜೆಪಿ-ಕಾಂಗ್ರೆಸ್‌ನವರು ಎಷ್ಟೇ ಜನರನ್ನು ಜೆಡಿಎಸ್‌ನಿಂದ ಸೇರಿಸಿಕೊಂಡರೂ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮುಂದುವರಿಸಲಾಗುವುದು ಎಂದರು.

RR ನಗರ ಉಪಚುನಾವಣೆ: ಮುನಿರಾಜುಗೆ ಮುನಿರತ್ನ ಗೆಲ್ಲಿಸುವ ಉಸ್ತುವಾರಿ

ಜೆಡಿಎಸ್‌ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್‌.ಪ್ರಕಾಶ್‌ ಮಾತನಾಡಿ, ಮೂರು ಪಕ್ಷಗಳಿಗೂ ಆರ್‌.ಆರ್‌.ನಗರ ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಗೆಲ್ಲಲು ಜೆಡಿಎಸ್‌ ಸಹ ರಣತಂತ್ರ ರೂಪಿಸಿದೆ. ಒಟ್ಟು 50 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ 10-15ಬೂತ್‌ಗಳ ಉಸ್ತುವಾರಿ ನೀಡಿದೆ. ಜತೆಗೆ 10 ಶಾಸಕರಿಗೆ ವಾರ್ಡ್‌ವಾರು ಉಸ್ತುವಾರಿ ನೀಡಲಾಗಿದೆ ಎಂದು ತಿಳಿಸಿದರು.

ಕೊರೋನಾ ವೈರಸ್‌ ಕಾರಣದಿಂದ ಅಬ್ಬರದ ಪ್ರಚಾರಕ್ಕೆ ಮಣೆ ಹಾಕದೆ ಪ್ರತಿ ಮತದಾರರನ್ನು ತಲುಪುವ ಕಾರ್ಯತಂತ್ರವನ್ನು ರೂಪಿಸಲಾಗಿದೆ. ಶಾಸಕರು ಮತ್ತು ನಾಯಕರಿಂದ ವಾರ್ಡ್‌ವಾರು ಪ್ರತಿ ಮನೆ-ಮನೆಗೂ ಭೇಟಿ ನೀಡಿ ಮತಯಾಚಿಸಲಾಗುವುದು. ಬೆಂಗಳೂರು ಮತ್ತು ರಾಜ್ಯಕ್ಕೆ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೀಡಿದ ಕೊಡುಗೆಯನ್ನು ಜನರಿಗೆ ತಲುಪಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ ಕೃಷ್ಣಮೂರ್ತಿ ಅವರು ಬಿಇಎಂಎಲ್‌ ಲೇಔಟ್‌ನ ಮಾರುತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
 

Follow Us:
Download App:
  • android
  • ios