ಮೇಲ್ಮನೆಯಲ್ಲೂ ಬಿಜೆಪಿ ಜತೆ ಮೈತ್ರಿಗೆ ಜೆಡಿಎಸ್ ನಿರ್ಧಾರ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಉಭಯ ಪಕ್ಷಗಳ ನಾಯಕರು, ಕಾರ್ಯಕರ್ತರು ಒಟ್ಟಾಗಿ ಮೈತ್ರಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಇದು ವಿಧಾನ ಪರಿಷತ್ ಚುನಾವಣೆಯಲ್ಲಿ ಮುಂದುವರಿಸಬೇಕು. ಇದರಿಂದ ಕಾಂಗ್ರೆಸ್ ಮಣಿಸಲು ಸಹಕಾರಿಯಾಗಲಿದೆ.
ಬೆಂಗಳೂರು(ಮೇ.10): ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಂತೆ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸುವ ಬಗ್ಗೆ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬುಧವಾರ ಜೆಡಿಎಸ್ ಕಚೇರಿಯಲ್ಲಿ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಉಭಯ ಪಕ್ಷಗಳ ನಾಯಕರು, ಕಾರ್ಯಕರ್ತರು ಒಟ್ಟಾಗಿ ಮೈತ್ರಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಇದು ವಿಧಾನ ಪರಿಷತ್ ಚುನಾವಣೆಯಲ್ಲಿ ಮುಂದುವರಿಸಬೇಕು. ಇದರಿಂದ ಕಾಂಗ್ರೆಸ್ ಮಣಿಸಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾದವು ಎಂದು ಹೇಳಲಾಗಿದೆ.
ಲೋಕಸಭಾ ಚುನಾವಣೆ ಫಲಿತಾಂಶ ಹೊರಬರುತ್ತಿದ್ದಂತೆ ವಿಧಾನ ಪರಿಷತ್‌ಗೆ ಚುನಾವಣೆ
ಸಂಸದ ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗಿದೆ. ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಿದೆ. ಅಲ್ಲದೇ, ಮೈತ್ರಿ ವಿಚಾರದಲ್ಲಿಯೂ ಅಪಸ್ವರ ಕೇಳಿಬಂದಿವೆ. ಆದರೆ, ಅದನ್ನು ಹೊರತುಪಡಿಸಿ ಚುನಾವಣೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಶ್ರಮವಹಿಸಿದ್ದಾರೆ. ಉಭಯ ಪಕ್ಷಗಳ ನಾಯಕರ ಗೆಲುವಿನ ಹಿಂದೆ ಎರಡೂ ಪಕ್ಷಗಳ ಕಾರ್ಯಕರ್ತರ ಕೆಲಸ ಇದೆ ಎಂಬ ಮಾತು ಕೇಳಿಬಂತು ಎನ್ನಲಾಗಿದೆ. ಇದೇ ವಿಶ್ವಾಸದೊಂದಿಗೆ ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸಲು ಸಮಾಲೋಚನೆ ನಡೆಸಲಾಗಿದೆ ಎನ್ನಲಾಗಿದೆ.