ಕಪ್ಪು ಚುಕ್ಕೆಯಿಂದ ಬೆತ್ತಲಾದ 'ವೈಟ್ನರ್ ರಾಮಯ್ಯ' : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ - ಜೆಡಿಎಸ್ ಆಗ್ರಹ
ಮೂಡಾದಲ್ಲಿ ಅಕ್ರಮವಾಗಿ ಸೈಟುಗಳನ್ನು ಕಬಳಿಸಿದ ಪ್ರ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ಗೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಜೆಡಿಎಸ್ ಆಗ್ರಹಿಸಿದೆ. ಮುಖ್ಯಮಂತ್ರಿಗಳು ಅಧಿಕಾರ ದುರ್ಬಳಕೆ, ಸ್ವಜನಪಕ್ಷಪಾತ ಎಸಗಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.
ಬೆಂಗಳೂರು (ಸೆ.24): ಮುಡಾದಲ್ಲಿ ಹಗರಣ ನಡೆದೇ ಇಲ್ಲ, ನನ್ನ ಮೇಲೆ ಕಪ್ಪು ಚುಕ್ಕು ಇಲ್ಲ ಎಂದು ಸ್ವಯಂ ಸರ್ಟಿಫಿಕೇಟ್ ಪಡೆದಿದ್ದ ಸಿದ್ದರಾಮಯ್ಯ ಅವರೇ, ನಿಮಗೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಗೌರವ ಉಳಿಸಿಕೊಳ್ಳಿ ಎಂದು ಜೆಡಿಎಸ್ ಆಗ್ರಹಿಸಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜೆಡಿಎಸ್ ರಾಜ್ಯ ಘಟಕದಿಂದ ಮೂಡಾದಲ್ಲಿ ಅಕ್ರಮವಾಗಿ 14 ಸೈಟುಗಳನ್ನು ಕಬಳಿಸಿದ್ದ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿರುವುದು ಸ್ವಾಗತಾರ್ಹ. ಅಧಿಕಾರ ದುರ್ಬಳಕೆ, ಸ್ವಜನಪಕ್ಷಪಾತ ಎಸಗಿ ಮೂಡಾದಲ್ಲಿನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಸಿಎಂ ಸಿದ್ದರಾಮಯ್ಯ ನಡೆಸಿದ್ದ ಕುತಂತ್ರಗಳಿಗೆ ಹೈಕೋರ್ಟ್ ಆದೇಶ ಕಪಾಳಮೋಕ್ಷ ಮಾಡಿದೆ. ಮುಡಾ ಹಗರಣದ ವಿರುದ್ಧ NDA ಮೈತ್ರಿ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷ ನಡೆಸಿದ್ದ "ಮೈಸೂರು ಚಲೋ" ಹೋರಾಟಕ್ಕೆ ಜಯ ಸಿಕ್ಕಿದೆ.
ಗಣೇಶನನ್ನು ಬಂಧಿಸಿದ್ದ ಸಿಎಂ ಸಿದ್ದರಾಮಯ್ಯಗೆ ಶಾಪ ತಟ್ಟಿದೆ: ಆರ್. ಅಶೋಕ್
ಮುಡಾದಲ್ಲಿ ಹಗರಣ ನಡೆದೇ ಇಲ್ಲ, ನನ್ನ ಮೇಲೆ ಕಪ್ಪು ಚುಕ್ಕು ಇಲ್ಲ ಎಂದು ಸ್ವಯಂ ಸರ್ಟಿಫಿಕೇಟ್ ಪಡೆದಿದ್ದ ಸಿದ್ದರಾಮಯ್ಯ ಅವರೇ, ನಿಮಗೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಗೌರವ ಉಳಿಸಿಕೊಳ್ಳಿ ಎಂದು ಪೋಸ್ಟ್‌ನಲ್ಲಿ ಬರೆದುಕೊಳ್ಳಲಾಗಿದೆ.
ಸತ್ಯಮೇವ ಜಯತೇ.. ರಾಜ್ಯದ ಭ್ರಷ್ಟ ಮುಖ್ಯಮಂತ್ರಿ ಹಾಗೂ ಲೂಟಿಕೋರ ಕಾಂಗ್ರೆಸ್ ಸರ್ಕಾರದ ವಿರುದ್ಧ ಎನ್ ಡಿಎ ಮೈತ್ರಿಕೂಟ ಜೆಡಿಎಸ್ ಮತ್ತು ಬಿಜೆಪಿ ನಡೆಸಿದ್ದ 'ಮೈಸೂರು ಚಲೋ' ಪಾದಯಾತ್ರೆಗೆ ಜಯ ಸಿಕ್ಕಿದೆ. ವಾಲ್ಮೀಕಿ ಹಗರಣ, ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ದುರ್ಬಳಕೆ, ಪರಿಶಿಷ್ಟರ ಭೂಮಿ ಕಬಳಿಸಿರುವ ಸಿಎಂ ಸಿದ್ದರಾಮಯ್ಯ ಅವರೇ ನಿಮ್ಮದು ಕಡು ಭ್ರಷ್ಟ ಸರ್ಕಾರ. ರಾಜ್ಯಪಾಲರ ಪ್ರಾಸಿಕ್ಯೂಷನ್ ಧಿಕ್ಕರಿಸಿದ್ದ ನಿಮಗೆ ಇಂದು ಹೈಕೋರ್ಟ್ ನೀಡಿರುವ ಆದೇಶ ನಮ್ಮ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ ಎಂದು ಮತ್ತೊಂದು ಪೋಸ್ಟ್ ಹಂಚಿಕೊಂಡಿದೆ.