ಬೆಂಗಳೂರು (ಡಿ.02): ಜೆಡಿಎಸ್ ಪ್ರಧಾನ ಕಾರ್ಯದರ್ಶಿ, ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರ ಆಪ್ತರಾಗಿದ್ದ ಉದ್ಯಮಿ ನಾಗಣ್ಣ ಸೇರಿದಂತೆ ಹಲವಾರು ಮಂದಿ ಇತ್ತೀಚೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 

ಉದ್ಯಮಿ ನಾಗಣ್ಣ ಅವರ ನೇತೃತ್ವದಲ್ಲಿ ಪ್ರಸಿದ್ದ ಲೆಕ್ಕಪರಿಶೋಧಕ ಮುರೂರು ರಾಜೇಂದ್ರ ಕುಮಾರ್‌ ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಆಮ್ ಆದ್ಮಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ಬಗ್ಗೆ ದತ್ತಾ ಸ್ಪಷ್ಟನೆ, ಜೊತೆಗೆ ಎಚ್‌ಡಿಕೆಗೊಂದು ಕಿವಿಮಾತು..!

ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ದೆಹಲಿಯ ಆಮ್ ಆದ್ಮಿ ಪಕ್ಷ ತಂದಿರುವ ಕ್ರಾಂತಿಕಾರಕ ಬದಲಾವಣೆಗಳನ್ನು ಬೆಂಗಳೂರಿಗೂ ತರುವ ಒತ್ತಾಸೆಯನ್ನು ಇಟ್ಟುಕೊಂಡು ಅನೇಕ ಕ್ಷೇತ್ರಗಳ ಪ್ರಮುಖರು, ವಿವಿಧ ಪಕ್ಷಗಳ ನಾಯಕರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ಹೇಳಿದರು. 

ಈ ಸಂದರ್ಭದಲ್ಲಿ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ರಾಜ್ಯ ಉಪಾಧ್ಯಕ್ಷ ಸುರೇಶ್‌ ರಾಥೋಡ್‌, ಉಸ್ತುವಾರಿ ರೋಮಿ ಬಾಟಿ ಉಪಸ್ಥಿತರಿದ್ದರು.