Asianet Suvarna News Asianet Suvarna News

janata jaladhare ಇಂದು ಜೆಡಿಎಸ್‌ ‘ಜನತಾ ಜಲಧಾರೆ’ ಸಮಾರೋಪ, 5 ಲಕ್ಷ ಜನರು ಭಾಗಿ ನಿರೀಕ್ಷೆ!

- ನೆಲಮಂಗಲ ಬಳಿ ಸಮಾವೇಶ , 5 ಲಕ್ಷ ಜನರು ಭಾಗಿ ನಿರೀಕ್ಷೆ

- ಗಂಗಾ ಪೂಜೆ, ಗಂಗಾ ಆರತಿಗೆ ಕಾಶಿಯಿಂದ 20 ಪಂಡಿತರು

- 180 ಕ್ಷೇತ್ರ ಸುತ್ತಿ ಸಂಗ್ರಹಿಸಿದ ನೀರು ಕಳಸಕ್ಕೆ ತುಂಬಿ ಪೂಜೆ

JDS host closing ceremony of janata jaladhare campaign Nelamangala ahead karnataka aseembly poll ckm
Author
Bengaluru, First Published May 13, 2022, 2:05 AM IST

ಬೆಂಗಳೂರು(ಮೇ.13): ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾಗಿರುವ ಜೆಡಿಎಸ್‌ನ ‘ಜನತಾ ಜಲಧಾರೆ’ ಕಾರ್ಯಕ್ರಮದ ಸಮಾರೋಪ ಸಮಾವೇಶ ಶುಕ್ರವಾರ ನಡೆಯಲಿದೆ.

ನೆಲಮಂಗಲ ಸಮೀಪದ ಬಾವಿಕೆರೆ ಬಳಿಯ ಬೆಂಗಳೂರು-ಹಾಸನ ಹೆದ್ದಾರಿಯ ಪಕ್ಕದ ಬೃಹತ್‌ ಮೈದಾನದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭವಾಗಲಿದೆ. ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು ನಾಲ್ಕೈದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯದ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ನಿಟ್ಟಿನಲ್ಲಿ ಜೆಡಿಎಸ್‌ ನಾಯಕರು ಗಂಗಾ ಮಾತೆಯ ಸಾಕ್ಷಿಯಾಗಿ ಸಂಕಲ್ಪ ಮಾಡಲಿದ್ದಾರೆ.

ದತ್ತಾ ಜೆಡಿಎಸ್‌ ತೊರೆಯುತ್ತಾರಾ? ಮಂತ್ರಿಯಾಗ್ತಾರಾ? ಆಡಿಯೋ ವೈರಲ್

ಈ ಸಮಾವೇಶದಲ್ಲಿ ಮಾಜಿ ಪ್ರಧಾನಮಂತ್ರಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಪಕ್ಷದ ಕೋರ್‌ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಶೆಂಪೂರ್‌, ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಮುಖಂಡರು, ಮುಂದಿನ ವಿಧಾನಸಭೆ ಚುನಾವಣೆಯ ಜೆಡಿಎಸ್‌ ಅಭ್ಯರ್ಥಿಗಳು ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ ಭಾಗಿಯಾಗುವ ಎಲ್ಲರಿಗೂ ದಾಸೋಹ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.

ಗಂಗಾ ಆರತಿ:
ಜನತಾ ಜಲಧಾರೆ ಸಮಾವೇಶದಲ್ಲಿ ‘ಗಂಗಾ ಪೂಜೆ’ ಮತ್ತು ‘ಗಂಗಾ ಆರತಿ’ ಪ್ರಮುಖವಾಗಿದೆ. ಸಂಜೆ 6.30ಕ್ಕೆ ಗಂಗಾ ಆರತಿ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ 20 ಪಂಡಿತರ ವಿಶೇಷ ತಂಡ ವಾರಾಣಸಿಯಿಂದ ಬಂದಿದೆ. ಏ.16ರಂದು ಆರಂಭವಾದ ಜನತಾ ಜಲಧಾರೆಯ 15 ಗಂಗಾರಥಗಳು ರಾಜ್ಯದ 180 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿವೆ. ಈ ಅವಧಿಯಲ್ಲಿ ರಾಜ್ಯದ ಎಲ್ಲ ಜೀವ ನದಿಗಳಿಂದ ಸಂಗ್ರಹಿಸಿರುವ ಪುಣ್ಯಜಲವನ್ನು ಒಂದು ಬೃಹತ್‌ ಕಲಶಕ್ಕೆ ತುಂಬಿಸಿ ಸಮಾವೇಶದಲ್ಲಿ ಅದಕ್ಕೆ ಪೂಜೆ ನಡೆಯಲಿದೆ.

ನನ್ನ ಬಗ್ಗೆ ಮಾತನಾಡಿದ್ರೆ ಹುಷಾರ್‌: ಸಚಿವ ಅಶ್ವತ್ಥನಾರಾಯಣಗೆ ಎಚ್‌ಡಿಕೆ ಎಚ್ಚರಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ನೆಲಮಂಗಲ ಸಮೀಪ ಬೃಹತ್‌ ಮೈದಾನದಲ್ಲಿ ನಡೆಯುತ್ತಿರುವ ಜನತಾ ಜಲಧಾರೆ ಸಮಾರೋಪ ಸಮಾವೇಶದ ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದರು. ಈ ವೇಳೆ ಸ್ಥಳದಲ್ಲಿದ್ದ ಐಜಿ ಚಂದ್ರಶೇಖರ್‌, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಂಶಿಕೃಷ್ಣ, ತುಮಕೂರು ಗ್ರಾಮಾಂತರ ಜಿಲ್ಲೆ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ ಹಾಗೂ ಪೊಲೀಸ್‌ ಅಧಿಕಾರಿಗಳ ಜತೆ ಭದ್ರತೆ ಮತ್ತಿತರೆ ವಿಷಯಗಳ ಬಗ್ಗೆ ಚರ್ಚಿಸಿದರು.

ನಗರದ ಜಲಮೂಲ ರಕ್ಷಣೆಗೆ ಜೆಡಿಎಸ್‌ ಬದ್ಧ 
ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ಗೆ ಪೂರ್ಣ ಬಹುಮತ ಬಂದರೆ ಬೆಂಗಳೂರಿನ ಎಲ್ಲ ಕೆರೆಗಳ ಅಭಿವೃದ್ಧಿಯ ಜತೆಗೆ ಕೆರೆಗಳ ಒತ್ತುವರಿ ತೆರವುಗೊಳಿಸಿ ಜಲಮೂಲಗಳನ್ನು ಸಂರಕ್ಷಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಗರದ ಗಾಂಧಿನಗರದಲ್ಲಿ ಗುರುವಾರ ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜೆಡಿಎಸ್‌ ಪಕ್ಷಕ್ಕೆ ಪೂರ್ಣ ಬಹುಮತ ಕೊಟ್ಟು ಐದು ವರ್ಷಗಳ ಸರ್ಕಾರ ರಚನೆಗೆ ಜನ ಬೆಂಬಲ ನೀಡಿದರೆ, ನೀರಿನ ವಿಷಯದಲ್ಲಿ ಬೆಂಗಳೂರು ಜನರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

ಜಲ ಮೂಲಗಳನ್ನು ರಕ್ಷಿಸಿ ಅದನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಜಲಧಾರೆ ಕಾರ್ಯಕ್ರಮ ರೂಪಿಸಲಾಗಿದೆ. ಕೆರೆಗಳನ್ನು ಉತ್ತಮಪಡಿಸಿ ಅವುಗಳಿಗೆ ನದಿ ನೀರು ತುಂಬಿಸುವ ಕೆಲಸ ಮಾಡಲಾಗುವುದು. ಎಚ್‌.ಡಿ.ದೇವೇಗೌಡರ ಅಧಿಕಾರದಲ್ಲಿ ಇದ್ದಾಗ ರಾಜ್ಯಕ್ಕೆ ಅನೇಕ ನೀರಾವರಿ ಯೋಜನೆ ಕೊಟ್ಟಿದ್ದಾರೆ. ಅದರಲ್ಲೂ ಬೆಂಗಳೂರಿಗೆ ಅನೇಕ ಕಾರ್ಯಕ್ರಮ ಕೊಟ್ಟಿದ್ದಾರೆ. ದೇವೇಗೌಡರು ಮಾಡಿದ ಒಂದು ಆದೇಶದಿಂದ ನಗರಕ್ಕೆ ಕಾವೇರಿ ನದಿಯಿಂದ 9 ಟಿಎಂಸಿ ನೀರು ಸಿಕ್ಕಿದೆ. ಇಂದು ನಗರದ ಜನ ಕಾವೇರಿ ನೀರು ಕುಡಿಯುತ್ತಿದ್ದರೆ, ಅದಕ್ಕೆ ಕಾರಣ ದೇವೇಗೌಡರು ಎಂದು ಹೇಳಿದರು.

Follow Us:
Download App:
  • android
  • ios