ಮೈಸೂರು, (ಜ.31) : ನನ್ನ ಪ್ರಕಾರ ಜೆಡಿಎಸ್ ಈಸ್ ನಾಟ್ ಎ ಪೊಲಿಟಿಕಲ್ ಪಾರ್ಟಿ, ನಾನು ಅವರ ಬಗ್ಗೆ ಮಾತನಾಡುವುದಕ್ಕೆ ಹೋಗೋದಿಲ್ಲ ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೆಡಿಎಸ್ ರಾಜಕೀಯ ಪಕ್ಷವೇ ಅಲ್ಲ ಎಂದು ಹೇಳುವ ಮೂಲಕ ಪ್ರತಿಕ್ರಿಯಿಸಲು ನಿರಾಕರಿಸಿದರು.

ಮೈತ್ರಿ ಹಳಸಿದರೂ ಮುಗಿಯದ ಕುಮಾರಸ್ವಾಮಿ ಗೋಳಾಟ.. 

 ಆರ್ಥಿಕ ಸಮೀಕ್ಷೆಯಲ್ಲಿ ಸುಳ್ಳು ಹೇಳಲಾಗಿದೆ. ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಮೋದಿ ಸರ್ಕಾರದಲ್ಲಿ ಜಿಡಿಪಿ ಪಾತಾಳಕ್ಕೆ ಕುಸಿದಿದೆ. ಅಭಿವೃದ್ಧಿ ಮಾಡಲು ಕೇಂದ್ರದ ಬಳಿ ಹಣವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರದ ಬಜೆಟ್‌ ಮೇಲೆ ನಾನು ಯಾವ ನಿರೀಕ್ಷೆಯನ್ನೂ ಇಟ್ಟಿಲ್ಲ, ಜಿಡಿಪಿ ಪಾತಾಳಕ್ಕೆ ಕುಸಿದಿದೆ. ಕೇಂದ್ರ ಜನರಿಗೆ ಸುಳ್ಳು ಹೇಳಿಕೊಂಡು ಸರ್ಕಾರ ನಡೆಸುತ್ತಿದೆ ಎಂದು ಕಿಡಿಕಾರಿದರು.

 ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಕೃಷಿ ಮತ್ತು ಕೈಗಾರೀಕ ಕ್ಷೇತ್ರಕ್ಕೆ ಒತ್ತು ನೀಡದಿದ್ದಾರೆ ದೇಶ ಆಭಿವೃದ್ಧಿ ಸಾಧ್ಯವೇ ಇಲ್ಲ ಎಂದರು.