*  17 ದಿನ ಕಾರ್ಯಕ್ರಮ*  ಬೆಂಗಳೂರು ಹೇಗಿರಬೇಕು ಎಂದು ಜನರಿಗೆ ಮಾಹಿತಿ ಸಂಗ್ರಹ*  ಈಗಾಗಲೇ 15 ಜನತಾಮಿತ್ರ ಹೆಸರಿನ ಎಲ್‌ಇಡಿ ವಾಹನಗಳು ಸಿದ್ಧ 

ಬೆಂಗಳೂರು(ಜು.01):  ಜನತಾ ಜಲಧಾರೆ ಯಶಸ್ವಿಯಾದ ಬಳಿಕ ಜೆಡಿಎಸ್‌ ಪಕ್ಷವು ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರದಿಂದ 17 ದಿನ ಜನತಾ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜನತಾಮಿತ್ರ ಕಾರ್ಯಕ್ರಮದ ಸಿದ್ಧತೆ ಕುರಿತು ಪೂರ್ವಭಾವಿ ಸಭೆ ನಡೆಸಿದರು.

Add Asianetnews Kannada as a Preferred SourcegooglePreferred

ಜಲಧಾರೆಯಂತೆ ಜನತಾಮಿತ್ರ ಕಾರ್ಯಕ್ರಮವೂ ಯಶಸ್ವಿಯಾಗಬೇಕು. ರಾಜ್ಯದ ಕನ್ನಡಿಗರೆಲ್ಲಾ ನೆಲಮಂಗಲ ಸಮಾವೇಶದಲ್ಲಿ ಸೇರಿದಂತೆ ಬೆಂಗಳೂರು ಮಹಾನಗರದ ಜನತೆ ಜನತಾ ಮಿತ್ರ ಸಮಾವೇಶದಲ್ಲಿ ಸೇರಬೇಕು. ಅದಕ್ಕಾಗಿ ಬೇಕಾದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಸೂಚನೆ ನೀಡಿದರು.

ಮೋದಿ ಮಾತು ಕೇಳಿದ್ದರೆ ಎಚ್‌ಡಿಕೆ 5 ವರ್ಷ ಸಿಎಂ ಆಗಿರ್ತಿದ್ರು: ರೇವಣ್ಣ

ಜನತಾಮಿತ್ರ ವಾಹನವು ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪ್ರತಿಯೊಂದು ವಾರ್ಡ್‌ಗಳಿಗೂ ಹೋಗಬೇಕು. ಪಕ್ಷದ ಮುಖಂಡರೆಲ್ಲಾ ಪ್ರತ್ಯೇಕ ತಂಡಗಳಾಗಿ ಬೇರ್ಪಟ್ಟು ಸಂಚಾರ ಮಾಡಬೇಕು. ಎಲ್ಲ ವಾರ್ಡ್‌ಗಳಲ್ಲಿಯೂ ಸಭೆಗಳನ್ನು ನಡೆಸಬೇಕು. ಜನತಾ ಮಿತ್ರ ವಾಹನವನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿದೆ. ಜನತೆ ತಮ್ಮ ನಿರೀಕ್ಷೆಯ ಸರ್ಕಾರ ಹೇಗಿರಬೇಕು ಎಂಬ ಬಗ್ಗೆ ಸಲಹೆ, ಅಭಿಪ್ರಾಯವನ್ನು ನೀಡಬಹುದು. ಜನತಾ ಮಿತ್ರ ಕಾರ್ಯಕ್ರಮವನ್ನು ನಗರದ ಎಲ್ಲಾ ವಿಧಾನಸಭೆ ಕ್ಷೇತ್ರದಲ್ಲಿ ಮನೆ ಮನೆಗೂ ತಲುಪಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈಗಾಗಲೇ 15 ಜನತಾಮಿತ್ರ ಹೆಸರಿನ ಎಲ್‌ಇಡಿ ವಾಹನಗಳನ್ನು ಸಿದ್ಧಪಡಿಸಲಾಗಿದೆ. ಪ್ರತಿ ಒಂದು ವಾಹನ ತಲಾ ಎರಡು ಕ್ಷೇತ್ರಗಳಿಗೆ ತೆರಳಲಿದೆ. ಅಷ್ಟೂವಾಹನಗಳಿಗೆ ಶಾಸಕರು ಅಥವಾ ಹಿರಿಯ ಮುಖಂಡರ ನೇತೃತ್ವದಲ್ಲಿ ಉಸ್ತುವಾರಿ ತಂಡಗಳನ್ನು ರಚನೆ ಮಾಡಲಾಗಿದೆ. ಜೆಡಿಎಸ್‌ ನೀಡಿರುವ ಕೊಡುಗೆಗಳ ಮಾಹಿತಿಯನ್ನು ಮನೆಮನೆಗೂ ತಲುಪಿಸಲಾಗುವುದು. ಈ ಯಾತ್ರೆಯ ಮೂಲಕ ಜನರಿಂದ ಭವಿಷ್ಯದ ಸರ್ಕಾರ ಹೇಗೆ ಕೆಲಸ ಮಾಡಬೇಕು? ಜನರ ನಿರೀಕ್ಷೆಗಳೇನು? ಇತ್ಯಾದಿ ಅಂಶಗಳ ಬಗ್ಗೆ ನೇರವಾಗಿ ಜನತೆಯಿಂದಲೇ ಅಭಿಪ್ರಾಯ ಸಂಗ್ರಹ ಮಾಡಲಿದೆ ಎಂದು ಹೇಳಿದರು. ಮುಖಂಡರಾದ ಕೆ.ಎನ್‌.ತಿಪ್ಪೇಸ್ವಾಮಿ, ಟಿ.ಎ.ಶರವಣ, ಆರ್‌.ಪ್ರಕಾಶ್‌ ಇತರರು ಉಪಸ್ಥಿತರಿದ್ದರು.