ದೇವೇಗೌಡರು ಕಂಡಿದ್ದ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಸ್ವಾಗತಾರ್ಹ: ಜೆಡಿಎಸ್ ನಾಯಕ ಬಂಡೆಪ್ಪ ಖಾಶೆಂಪುರ್
ಹೆಚ್.ಡಿ.ದೇವೇಗೌಡರು 1996 ಸೆಪ್ಟೆಂಬರ್ 12ರಂದು ತಾವು ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲೇ ಈ ಐತಿಹಾಸಿಕ ಮಸೂದೆಯನ್ನು ಜಾರಿಗೆ ತರಲು ಮುಂದಾಗಿ, ರಾಜಸಭೆಯಲ್ಲಿ ಮಸೂದೆ ಮಂಡಿಸಲಾಗಿತ್ತು. ಆದರೇ ಕೆಲವರ ವಿರೋಧದಿಂದ ಮಸೂದೆ ಅಂಗೀಕಾರವಾಗಿರಲಿಲ್ಲ: ಬಂಡೆಪ್ಪ ಖಾಶೆಂಪುರ್
ಬೀದರ್(ಸೆ.20): ರಾಜಕೀಯ ರಂಗದಲ್ಲಿ ಹೆಚ್ಚೆಚ್ಚು ಮಹಿಳೆಯರು ಬರಬೇಕು. ಮಹಿಳೆಯರಿಗೆ ವಿಶೇಷ ಮೀಸಲಾತಿ ಕಲ್ಪಿಸಬೇಕೆಂಬ ಕನಸನ್ನು ದೇವೇಗೌಡರು ಕಂಡಿದ್ದರು. ಮಹಿಳಾ ಮೀಸಲಾತಿ ದೇವೇಗೌಡರ ಕನಸಿನ ಕೂಸು ಆಗಿದೆ ಎಂದು ಜೆಡಿಎಸ್ ಪಕ್ಷದ ಹಿರಿಯ ನಾಯಕ ಬಂಡೆಪ್ಪ ಖಾಶೆಂಪುರ್ ಅಭಿಪ್ರಾಯ ಪಟ್ಟಿದ್ದಾರೆ.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜಕೀಯ ರಂಗದಲ್ಲಿ ಮಹಿಳಾ ಮೀಸಲಾತಿ ತರಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ. ದೇವೇಗೌಡರ ಕನಸು ನನಸಾಗುವುದನ್ನು ಕಾಣುವುದಕ್ಕಾಗಿ ನಾನು ಕೂಡ ಕಾಯುತ್ತಿದ್ದೇನೆ. ಮಹಿಳಾ ಸಬಲೀಕರಣಕ್ಕೆ ಮೀಸಲಾತಿ ಅಗತ್ಯವಾಗಿದೆ ಎಂದರು.
ಚುನಾವಣೆಗಳಿಂದ ನಾನು ದೂರ ಇದ್ದೇನೆ: ನಿಖಿಲ್ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ
ರಾಷ್ಟ್ರದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33% ರಷ್ಟು ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಜಾರಿಗೆ ತರಲು ಮುಂದಾಗಿರುವುದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ.
ಹೆಚ್.ಡಿ.ದೇವೇಗೌಡರು 1996 ಸೆಪ್ಟೆಂಬರ್ 12ರಂದು ತಾವು ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲೇ ಈ ಐತಿಹಾಸಿಕ ಮಸೂದೆಯನ್ನು ಜಾರಿಗೆ ತರಲು ಮುಂದಾಗಿ, ರಾಜಸಭೆಯಲ್ಲಿ ಮಸೂದೆ ಮಂಡಿಸಲಾಗಿತ್ತು. ಆದರೇ ಕೆಲವರ ವಿರೋಧದಿಂದ ಮಸೂದೆ ಅಂಗೀಕಾರವಾಗಿರಲಿಲ್ಲ.
ಈಗಿನ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅದನ್ನು ಜಾರಿಗೆ ತರಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಸರ್ಕಾರ, ವಿರೋಧ ಪಕ್ಷಗಳು ಸರ್ವಾನುಮತದಿಂದ ಮಸೂದೆಯನ್ನು ಅಂಗೀಕರಿಸಿ ಮಹಿಳಾ ಸಬಲೀಕರಣಕ್ಕೆ ಕೈಜೋಡಿಸಬೇಕೆಂಬುದು ನನ್ನ ಒತ್ತಾಯವಾಗಿದೆ. ಮಹಿಳೆಯರ ಒಳಿತಿಗಾಗಿ ಜಾರಿಗೆ ತರಲಾಗುತ್ತಿರುವ ಈ ಮಸೂದೆ ಆದಷ್ಟು ಬೇಗ ಅಂಗೀಕಾರವಾಗಿ, ಕೂಡಲೇ ಜಾರಿಯಾಗಲಿ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಅವರು ಹೇಳಿದರು.