'ಹಿಂದುತ್ವ, ಹಿಂದೂ ರಾಷ್ಟ್ರದ ಹೆಸರಿನಲ್ಲಿ ಬಿಜೆಪಿ ಯುವಕರ ದಾರಿ ತಪ್ಪಿಸುತ್ತಿದೆ'
* ಬಿಜೆಪಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ
* ಹಿಂದೂ ರಾಷ್ಟ್ರದ ಹೆಸರಿನಲ್ಲಿ ಬಿಜೆಪಿ ಯುವಕರನ್ನು ದಾರಿ ತಪ್ಪಿಸುತ್ತಿದೆ ಎಂದ ಎಚ್‌ಡಿಕೆ
* ನಿರುದ್ಯೋಗದ ದೊಡ್ಡ ಬಿಕ್ಕಟ್ಟನ್ನು ಸೃಷ್ಟಿಸಿದೆ ಎಂದು ಕಿಡಿ
ಬೆಂಗಳೂರು, (ಸೆ.30): ಹಿಂದುತ್ವ ಮತ್ತು ಹಿಂದೂ (Hindu) ರಾಷ್ಟ್ರದ ಹೆಸರಿನಲ್ಲಿ ಬಿಜೆಪಿ ಯುವಕರನ್ನು ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ (HD Kumaraswamy( ಆರೋಪಿಸಿದ್ದಾರೆ.
ಇಂದು (ಸೆ.30) ಬಿಡದಿಯ ತಮ್ಮ ತೋಟದ ಮನೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಯುವಕರಿಗೆ ಉದ್ಯೋಗ ಸೃಷ್ಟಿ ಮತ್ತು ಉದ್ಯೋಗ ನೀಡುವತ್ತ ಗಮನ ಹರಿಸಬೇಕು ಎಂದಿರುವ ಕುಮಾರಸ್ವಾಮಿ, ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಜೆಡಿ(ಎಸ್) ತನ್ನ "ಮಿಷನ್ 123 ಸ್ಥಾನಗಳ" ಭಾಗವಾಗಿ ಯುವ ಶಕ್ತಿಯನ್ನು ಸಜ್ಜುಗೊಳಿಸುವತ್ತ ಗಮನ ಹರಿಸುತ್ತಿದೆ ಎಂದು ಹೇಳಿದರು.
ಸಂಕ್ರಾಂತಿ ದಿನವೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ, ಪಂಚರತ್ನ ಯೋಜನೆ ಘೋಷಿಸಿದ HDK
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿತ್ತು, ಆದರೆ ನಿರುದ್ಯೋಗದ ದೊಡ್ಡ ಬಿಕ್ಕಟ್ಟನ್ನು ಸೃಷ್ಟಿಸಿದೆ ಎಂದು ವಾಗ್ದಾಳಿ ನಡೆಸಿದರು.
ತಮ್ಮ ನೇತೃತ್ವದ 14 ತಿಂಗಳ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ 9 ಜಿಲ್ಲೆಗಳಲ್ಲಿ ಕೈಗಾರಿಕಾ ಸಮೂಹಗಳನ್ನು ಸ್ಥಾಪಿಸುವ ನಿರ್ಧಾರವನ್ನು ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಕೆಲಸಗಳಿಗೆ ನೇಮಕಾತಿಗಳು ನಡೆಯುತ್ತಿಲ್ಲ ಮತ್ತು ಕೋವಿಡ್ ನಿಂದಾಗಿ ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಹಿಂದೂ ರಾಷ್ಟ್ರ ನಿರ್ಮಾಣ ಬಿಜೆಪಿಯ ಮುಖ್ಯ ಪ್ರಚಾರವಾಗಿದೆ. ಅವರು ಹಿಂದುತ್ವದ ಹೆಸರಿನಲ್ಲಿ ದೇಶದ ಯುವಕರನ್ನು ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಇಂದು ದೇಶದ ಮತ್ತು ರಾಜ್ಯದ ಯುವಕರಿಗೆ ಬೇಕಾಗಿರುವುದು ಉದ್ಯೋಗ, ಒಬ್ಬರ ಕುಟುಂಬ ಮತ್ತು ಅವಲಂಬಿತರನ್ನು ಬೆಂಬಲಿಸುವ ಶಕ್ತಿ ಎಂದರು.