ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಣ್ಣು ಮಕ್ಕಳಿಗೆ ದೌರ್ಜನ್ಯ ಮಾಡಲ್ಲ. ಅವರ ನಡವಳಿಕೆ ಬೇರೆಯೇ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ಉತ್ತರಿಸಿದರು.
ನಾಗಮಂಗಲ (ಸೆ.05): ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಣ್ಣು ಮಕ್ಕಳಿಗೆ ದೌರ್ಜನ್ಯ ಮಾಡಲ್ಲ. ಅವರ ನಡವಳಿಕೆ ಬೇರೆಯೇ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ಉತ್ತರಿಸಿದರು. ತಾಲೂಕಿನ ದೊಡ್ಡಚಿಕ್ಕನಹಳ್ಳಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಹದೇಶ್ವರ ಕ್ಷೇತ್ರದಲ್ಲಿ ತಮ್ಮ ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆ ಜೊತೆ ಶಾಸಕ ಅರವಿಂದ ಲಿಂಬಾವಳಿ ಅನುಚಿತ ವರ್ತಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಒಂದು ವಿಚಾರವಾಗಿ ಕೋರ್ಟ್‌ನಲ್ಲಿ ಸ್ಟೇ ತಂದಿದ್ರು. ಆ ಕ್ಯಾಸೆಟ್ ನೋಡಿದ್ರೆ ಅವರು ಯಾರ ಮೇಲೆ ದೌರ್ಜನ್ಯ ಮಾಡುತ್ತಾರೆ ಎಂದು ಗೊತ್ತಾಗುತ್ತದೆ. ಹೆಣ್ಣು ಮಕ್ಕಳ ಮೇಲೆ ರೇಪ್ ಮಾಡಲು ಹೋಗಿಲ್ಲ ಅಂತಾ ಹೇಳಿದ್ದಾರೆ.
ಸುಮಲತಾ ಸತ್ಯಹರಿಶ್ಚಂದ್ರರಾ, ಅವರು ಕಮಿಷನ್ ತೆಗೊಂಡಿಲ್ವಾ? ನಮ್ಮ ಬಳಿ ಸಾಕ್ಷಿ ಇವೆ - ಡಿ.ಸಿ.ತಿಮ್ಮಣ್ಣ
ಅವರ ನಡವಳಿಕೆಗಳು ಬೇರೆ ರೀತಿ ಇದೆ. ಜನಪ್ರತಿನಿಧಿಗಳಿಗೆ ಅಹವಾಲನ್ನು ಕೊಡಲು ಬಂದಾಗ ಅಗೌರವವಾಗಿ ನಡೆದುಕೊಳ್ಳಬಾರದು ಎಂದು ಸಲಹೆ ನೀಡಿದರು. ಚಿತ್ರದುರ್ಗ ಮುರುಘ ಶ್ರೀಗಳ ತಡವಾಗಿ ಬಂಧನ ವಿಚಾರವಾಗಿ ತೀರ್ಮಾನ ಮಾಡಬೇಕಾಗಿರುವುದು ಸರ್ಕಾರ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಅನಾವಶ್ಯಕ. ಕಾನೂನು ವ್ಯಾಪ್ತಿಯಲ್ಲಿ ನಡೆದು ಘಟನೆಯ ಸತ್ಯಾಂಶವನ್ನು ಹೊರತೆಗೆಯಬೇಕು. ಜನರಲ್ಲಿ ಅಪನಂಬಿಕೆ ಬಾರದಂತೆ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.
ಪ್ರಧಾನಿ ಮೋದಿ ರಾಜ್ಯಕ್ಕೆ ಏನು ಕೊಟ್ಟಿದ್ದಾರೆ: ರಾಜ್ಯಕ್ಕೆ ತಿಂಗಳಿಗೊಮ್ಮೆ ಬರುವ ಪ್ರಧಾನಿ ನರೇಂದ್ರ ಮೋದಿ ಏನು ಕೊಡುಗೆ ನೀಡಿದ್ದಾರೆ. ಏನು ಕೊಟ್ಟಿದ್ದೇವೆ ಅಂತ ಬರ್ತಾರೆ. ಇಲ್ಲೇನು ಗೊಂಬೆ ಕುಣಿಸೋಕೆ ಬರ್ತಾರಾ?. ರಾಜ್ಯದಲ್ಲಿ ಮಳೆಯಿಂದಾಗಿ 30 ರಿಂದ 40 ಸಾವಿರ ಕೋಟಿ ರು.ಗಳಷ್ಟುರೈತರ ಬೆಳೆ ಸೇರಿದಂತೆ ಸಾರ್ವಜನಿಕರ ಆಸ್ತಿ ಪಾಸ್ತಿ ನಷ್ಟಉಂಟಾಗಿದೆ. ಈ ಬಗ್ಗೆ ಮಾತನಾಡದ ಪ್ರಧಾನಿಗಳು ರಾಜ್ಯಕ್ಕೆ ಸುಮ್ಮನೇ ಭೇಟಿ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಬೆಂಗಳೂರು- ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿರುವುದರಿಂದ ರಾಮನಗರ ಎಸ್ಪಿ ಮತ್ತು ಜಿಲ್ಲಾಡಳಿತ ಬೆಂಗಳೂರಿನಿಂದ ಮೈಸೂರಿಗೆ ಸಂಚಾರ ಮಾಡುವವರು ಬೇರೆ ಮಾರ್ಗವಾಗಿ ಹೋಗಿ ಎಂದು ಹೇಳಿಕೆ ನೀಡಿದ್ದಾರೆ. ಇದರ ಅರ್ಥವೇನು ಕಾಮಗಾರಿ ಸರಿ ಎಂದಲವೇ ಎಂದು ಪತ್ರಕರ್ತರನ್ನೇ ಪ್ರಶ್ನೆ ಮಾಡಿದರು. ಮೈಸೂರು ಸಂಸದ ಪ್ರತಾಪ್ ಸಿಂಹ ಈ ವಿಚಾರವಾಗಿ ಯಾಕೆ ವಹಿಸಿಕೊಳ್ಳುತ್ತಿದ್ದಾರೆ ಎಂದು ಗೊತ್ತಿಲ್ಲ ಎಂದರು.
ಜೆಡಿಎಸ್‌ಗೆ 80 ರಿಂದ 90 ಸ್ಥಾನದಲ್ಲಿ ಗೆಲುವು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯದಲ್ಲಿ 80 ರಿಂದ 90 ಸ್ಥಾನ ಗೆಲ್ಲಲು ಯಾವುದೇ ಸಮಸ್ಯೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ದೊಡ್ಡಚಿಕ್ಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದಿಲ್ಲ.
ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಸರಿ ಎನ್ನುವವರು ಬಂದು ನೋಡಲಿ: ಪ್ರತಾಪ್ ಸಿಂಹ ವಿರುದ್ಧ ಸುಮಲತಾ ಕಿಡಿ
ಕಾರ್ಯಕರ್ತರು, ಮುಖಂಡರು ಹಾಗೂ ಜನ ಸಾಮಾನ್ಯರ ಆಶೀರ್ವಾದವಿದೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ಏನೆಂಬುದು ವಿರೋಧಿಗಳಿಗೆ ಗೊತ್ತಾಗಲಿದೆ ಎಂದರು. ಜೆಡಿಎಸ್ ಪಕ್ಷ ನಾಡಿನ ಜನರಿಗೆ ಉಚಿತ ಶಿಕ್ಷಣ, ಆರೋಗ್ಯ, ರೈತರು ಸಾಲ ಮಾಡದ ಹಾಗೆ ಚೈತನ್ಯ, ಪ್ರತಿ ಕುಟುಂಬಕ್ಕೆ ಒಂದು ಮನೆ, ಯುವಕರಿಗೆ ಉದ್ಯೋಗ ಕಲ್ಪಿಸುವ ಪಂಚರತ್ನ ಕಾರ್ಯಕ್ರಮ ಜಾರಿಗೆ ತರಲು ಮುಂದಾಗಿದೆ. ಇದಕ್ಕಾಗಿ ನನ್ನ ಆರೋಗ್ಯ ಲೆಕ್ಕಿಸದೇ ರಾಜ್ಯಾದ್ಯಂತ ಓಡಾಟ ನಡೆಸುತ್ತಿದ್ದೇನೆ ಎಂದರು.
