ರಾಮಂದಿರ ದೇಣಿಗೆ ವಿಚಾರದಲ್ಲಿ ವಿವಾದಕ್ಕೀಡಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತೆ ಅಯೋಧ್ಯೆ ರಾಮಮಂದಿರದ ಬಗ್ಗೆ ಮಾತನಾಡಿದ್ದಾರೆ.

ಮಂಡ್ಯ, (ಮಾ.14): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬರೋಬ್ಬರಿ 2,500 ಕೋಟಿ ದೇಣಿಗೆ ಸಂಗ್ರಹ ಆಗಿದೆ. ಈ ಬಗ್ಗೆ ರಾಮಮಂದಿರ ಟ್ರಸ್ಟ್ ಮಾಹಿತಿ ಕೊಟ್ಟಿದೆ.

ಇನ್ನೂ ಈ ಬಗ್ಗೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಡಿಕೆ, ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟೋಕೆ 2,500 ಕೋಟಿ ರೂ. ದೇಣಿಗೆ ಸಂಗ್ರಹ ಆಗಿದೆ. ಅದೇ ಒಂದು ಊರಿನಲ್ಲಿ ದೇವಸ್ಥಾನ ಕಟ್ಟೋಕೆ ನಮ್ಮಂಥವರ ಬಳಿ ದೇಣಿಗೆಗೆ ಬರುತ್ತೀರಾ ಎಂದು ಹೇಳಿದರು.

ರಾಮನ ಹೆಸರಲ್ಲಿ ಪುಂಡ-ಪೋಕರಿಗಳಿಂದ ಹಣ ಸಂಗ್ರಹ: ಮತ್ತೆ ಸಿಡಿದ ಕುಮಾರಸ್ವಾಮಿ

ಈ ಹಿಂದೆ ಕುಮಾರಸ್ವಾಮಿ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುತ್ತಿರುವ ಸಂದರ್ಭದಲ್ಲಿ ಮನೆಗಳ ಗುರುತು ಮಾಡಲಾಗುತ್ತಿದೆ ಎಂದು ಹೇಳಿಕೆ ನೀಡಿ ವಿವಾದ ಹುಟ್ಟುಹಾಕಿದ್ದರು. ಇದಕ್ಕೆ ಪರ-ವಿರೋಧದ ಚರ್ಚೆಗಳು ಆಗಿದ್ದವು. ಅಲ್ಲದೇ ಎಚ್‌.ಡಿ ಕುಮಾರಸ್ವಾಮಿ ಈ ಹೇಳಿಕೆಗೆ ವಿಶ್ವ ಹಿಂದೂ ಪರಿಷತ್ ಆಕ್ಷೇಪ ವ್ಯಕ್ತಪಡಿಸಿತ್ತು.

ರಾಮನ ಹೆಸರಲ್ಲಿ ಪುಂಡ-ಪೋಕರಿಗಳಿಂದ ಹಣ ಸಂಗ್ರಹ ಮಾಡುತ್ತಿದ್ದಾರೆ ಅವರಿಗೆ ಅನುಮತಿ ಕೊಟ್ಟವರು ಯಾರು ಎಂದು ಪ್ರಶ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.