*   30 ಜಿಲ್ಲೆಗಳಿಗೆ 1277 ಕೋಟಿ ರು. ಅನುದಾನ ನೀಡಿದ್ದ ಮಾಜಿ ಸಿಎಂ ಯಡಿಯೂರಪ್ಪ *   ಜೆಡಿಎಸ್ ಶಾಸಕರಿಗೆ ಬಿಡಿಗಾಸು ಅನುದಾನ ಕೊಡದ ಬಿಎಸ್‌ವೈ*   ಹಿಂದಿನ ಸರ್ಕಾರಗಳು ನೀಡಿರುವ ಅನುದಾನಕ್ಕೆ ತಡೆಯಾಜ್ಞೆ ನೀಡಿದ ಬಿಜೆಪಿ ಸರ್ಕಾರ  

ಬೆಂಗಳೂರು(ಸೆ.22): ಅನುದಾನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ನಮ್ಮ ಪಕ್ಷದ ಶಾಸಕರಿಗೆ ಬಿಡಿಗಾಸು ಅನುದಾನ ಕೊಟ್ಟಿಲ್ಲ ಎಂದು ಜೆಡಿಎಸ್(JDS) ಸದಸ್ಯ ಎಚ್.ಡಿ.ರೇವಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳವಾರ ಸದನದಲ್ಲಿ(Session)ರಾಜ್ಯದಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶ ಹೊರಡಿಸುವ ಬಗ್ಗೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೀರಾವರಿ ಇಲಾಖೆ ಸೇರಿದಂತೆ ಇತರೆ ಇಲಾಖೆಯಲ್ಲಿನ ಅಭಿವೃದ್ಧಿ ಯೋಜನೆಗೆ ಹಿಂದಿನ ಸರ್ಕಾರಗಳು ನೀಡಿರುವ ಅನುದಾನವನ್ನು ಬಿಜೆಪಿ(BJP) ಸರ್ಕಾರವು ತಡೆಯಾಜ್ಞೆ ನೀಡಿದೆ. ಕಾವೇರಿ ಜಲಾನಯನ ಪ್ರದೇಶಗಳ ವ್ಯಾಪ್ತಿಯಲ್ಲಿನ ಜಿಲ್ಲೆಗಳ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕಾರ್ಯಾದೇಶ ನೀಡುವ ವೇಳೆ ತಡೆಯಾಜ್ಞೆ ನೀಡಿರುವುದು ಸರಿಯಲ್ಲ ಎಂದು ಹೇಳಿದರು.

ಸಿದ್ದು ಸಿಎಂ ಆಗಿದ್ದಕ್ಕೆ ನಾನು 2 ಸಲ ಶಾಸಕನಾದೆ: ರೇವಣ್ಣಗೆ ಜೆಡಿಎಸ್‌ ನಾಯಕನಿಂದಲೇ ತಿರುಗೇಟು

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 1277 ಕೋಟಿ ರು. ಅನುದಾನ ನೀಡಿದ್ದರು. 30 ಜಿಲ್ಲೆಗಳಿಗೆ ಹಣಕಾಸು ಒದಗಿಸಲಾಗಿತ್ತು. ಆದರೆ, ಇದರಲ್ಲಿ ಜೆಡಿಎಸ್ ಶಾಸಕರಿಗೆ ಬಿಡಿಗಾಸು ಅನುದಾನ ಕೊಟ್ಟಿಲ್ಲ. ಜೆಡಿಎಸ್ ಪ್ರತಿಭಟನೆ ನಡೆಸಿದ ನಂತರ ರಾಜಕೀಯ ದ್ವೇಷ ಇಲ್ಲದಂತೆ ಅನುದಾನ ಬಿಡುಗಡೆ ಮಾಡುವ ಆಶ್ವಾಸನೆ ನೀಡಿದ್ದರು. ಅನುದಾನ ತಾರತಮ್ಯಗಳನ್ನು ನಿವಾರಣೆ ಮಾಡುವುದಾಗಿಯೂ ತಿಳಿಸಿದ್ದರು. ಆದರೆ, ಅವರ ಪಕ್ಷದಲ್ಲಿನ ಬೆಳವಣಿಗೆಯಿಂದಾಗಿ ಅವರೇ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿದರು ಎಂದರು.