Karnataka Politics: ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ, ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ, ಮುಹೂರ್ತ ಫಿಕ್ಸ್
* ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ,
* ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ, ಮುಹೂರ್ತ ಫಿಕ್ಸ್
* ಹಲವು ದಿನಗಳಿಂದ ಮಾಜಿ ಶಾಸಕರೊಬ್ಬರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು
ಧಾರವಾಡ, (ಡಿ.12); ಜೆಡಿಎಸ್‌ನ (JDS) ಹಲವು ಶಾಸಕರು ಪಕ್ಷ ತೊರೆದು ಬಿಜೆಪಿ ಇಲ್ಲವೇ ಕಾಂಗ್ರೆಸ್‌ಗೆ ವಲಸೆ ಹೋಗಲು ಮಾನಸಿಕವಾಗಿ ಸಿದ್ದರಾದಂತಿದೆ. ಇದಕ್ಕೆ ಪೂರಕವೆಂಬಂತೆ ಜೆಡಿಎಸ್ ಮತ್ತೋರ್ವ ಮಾಜಿ ಶಾಸಕ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಹಾಗೂ ವೇದಿಕೆ ಸಿದ್ಧವಾಗಿದೆ.
ಹೌದು....ನವಲಗುಂದ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ನಾಯಕ ಎನ್. ಎಚ್. ಕೋನರಡ್ಡಿ (NH Lonaraddi) ಜೆಡಿಎಸ್(JDS) ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಸೋಮವಾರ (ಡಿ.13) ಬೆಳಗಾವಿ ಕಾಂಗ್ರೆಸ್(Congress) ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್(DK Shivakumar) ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
ಸೋಮವಾರದಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ(Belagavi Winter Session) ಪ್ರಾರಂಭವಾಗಲಿದೆ. ಹಾಗಾಗಿ ಎಲ್ಲಾ ನಾಯಕರು ಬೆಳಗಾವಿಗೆ ತೆರಳಿದ್ದಾರೆ. ಆದ್ದರಿಂದ ಕೋನರೆಡ್ಡಿ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ಬೆಳಗಾವಿಯಲ್ಲೇ ನಡೆಯಲಿದೆ.
Karnataka Politics: ತೆನೆ ಇಳಿಸಿ ಕಾಂಗ್ರೆಸ್‌ನತ್ತ ಜೆಡಿಎಸ್ ನಾಯಕನ ಚಿತ್ತ?
ಖಚಿತಪಡಿಸಿದ ಕೋನರೆಡ್ಡಿ
ಕಳೆದ 2013 ವಿಧಾನಸಭಾ ಚುನಾವಣೆಯಲ್ಲಿ ಮಾತ್ರ ನವಲಗುಂದ ಕ್ಷೇತ್ರದಿಂದ ಗೆಲುವು ಕಂಡಿದ್ದ ಕೋನರೆಡ್ಡಿ, ಕಳೆದ 30 ವರ್ಷಗಳಿಂದ ಜೆಡಿಎಸ್ ನಲ್ಲಿದ್ದ ಕೋನರೆಡ್ಡಿ, ಕ್ಷೇತ್ರದ ಜನರ ಒತ್ತಾಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಅಲ್ಲದೆ ಜೆಡಿಎಸ್ ಪಕ್ಷ, ಕುಮಾರಸ್ವಾಮಿ ಹಾಗೂ ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವ ಇದೆ ಎಂದು ಕೂಡ ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಬಳಿಕ ಎನ್. ಎಚ್. ಕೋನರಡ್ಡಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಬಳಿಕ ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ಭೇಟಿಯಾಗಿ ಪಕ್ಷ ಸೇರುವ ಕುರಿತು ಮಾತುಕತೆ ನಡೆಸಿದ್ದರು.
Alliance Politics: ಬಿಜೆಪಿ ಜತೆ ಮೈತ್ರಿ ಚರ್ಚೆ ಮಧ್ಯೆ ಕಾಂಗ್ರೆಸ್ ಪರ ಜೆಡಿಎಸ್ ನಾಯಕನ ಪ್ರಚಾರ
ಅದಾದ ಬಳಿಕ ಮೊನ್ನೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್. ಎಚ್. ಕೋನರಡ್ಡಿ ನವಲಗುಂದ ಕ್ಷೇತ್ರದಲ್ಲಿ ಓಡಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಲೀಂ ಅಹ್ಮದ್ ಪರವಾಗಿ ಭರ್ಜರಿ ಪ್ರಚಾರ ಮಾಡಿದ್ದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ
ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಎನ್. ಎಚ್. ಕೋನರಡ್ಡಿಗೆ ಅವರಿಗೆ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಆದ್ರೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋಲು ಕಂಡಿದ್ದರಿಂದ ನೈತಿಕ ಹೊಣೆ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪ್ರಬಲವಾಗಿಲ್ಲ. ಸಂಘಟನೆಯೂ ಅಷ್ಟಾಗಿ ಇಲ್ಲ. ಬಸವರಾಜ ಹೊರಟ್ಟಿ ಸಭಾಧ್ಯಕ್ಷರಾದ ಬಳಿಕ ರಾಜಕೀಯದಲ್ಲಿ ಸಕ್ರಿಯವಾಗಿಲ್ಲ.. ಕೊನರೆಡ್ಡಿ ಒಬ್ಬರೇ ಪ್ರಯತ್ನ ಪಟ್ಟರೂ ಜೆಡಿಎಸ್ ದಡ ತಲುಪುತ್ತಿಲ್ಲ. ಅಲ್ಲದೇ ಜೆಡಿಎಸ್‌ನಲ್ಲಿ ಭವಿಷ್ಯ ಕೂಡ ಇಲ್ಲ ಎನ್ನುವ ಆತಂಕವೂ ಅವರನ್ನು ಕಾಡುತ್ತಿದೆ. ಹೀಗಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಜೆಡಿಎಸ್ ಶಾಸಕ ಹಾಗೂ ಮಾಜಿ ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಶನಿವಾರ ಕೋಲಾರ ಶ್ರೀನಿವಾಸಗೌಡ ಕೂಡ ತಾನು ತೆನೆ ಪಕ್ಷ ತೊರೆದು ಕೈ ಹಿಡಿಯುವುದಾಗಿ ಬಹಿರಂಗ ಘೋಷಣೆ ಮಾಡಿದ್ದಾರೆ. ಇದೀಗ ಕೊನರೆಡ್ಡಿ ರಾಜೀನಾಮೆ ಬಗ್ಗೆ ತೆರೆಮರೆಯ ಮಾತುಗಳು ಕೇಳಿ ಬರುತ್ತಿದೆ.