ಬೆಂಗಳೂರು (ಅ.23): ನಿಖಿಲ್ ಕುಮಾರಸ್ವಾಮಿ ಪ್ರಚಾರಕ್ಕೆ ಬರುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿಯೇ ಇದೀಗ ಪ್ರಚಾರ ಕಣಕ್ಕೆ ಇಳಿಯಲು ಸಜ್ಜಾಗಿದ್ದಾರೆ. 

ಶನಿವಾರ (ಅ.24)ರಿಂದ ಪ್ರಚಾರದ ಅಂಗಳಕ್ಕೆ ನಿಖಿಲ್ ಬರುತ್ತಿದ್ದಾರೆ.  ಆರ್‌ ಆರ್ ನಗರ ಹಾಗೂ ಶಿರಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು ಆರ್‌ ಆರ್‌ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. 

ಅತ್ತಿಗೆ ಜೊತೆ ಫೋಟೋ ಎಲ್ಲಿ?: ನಿಖಿಲ್ ಕುಮಾರಸ್ವಾಮಿ ಫ್ಯಾನ್ಸ್ .

ಆರ್‌ ಆರ್‌ ನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಕಣಕ್ಕೆ ಇಳಿದಿದ್ದು, ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. 

ಕುತೂಹಲ ಮೂಡಿಸಿದ ಎಚ್‌ಡಿಕೆ ಪುತ್ರ ನಿಖಿಲ್ ನಡೆ

ಇನ್ನು ತುಮಕೂರು ಶಿರಾ ಕ್ಷೇತ್ರದಲ್ಲಿ ಪ್ರಜ್ವಲ್ ಕಣಕ್ಕೆ ಇಳಿಯುತ್ತಿದ್ದು, ಅಭ್ಯರ್ಥಿ ಅಮ್ಮಾಜಮ್ಮ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. 
 
ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯುವ ಮತದಾರರನ್ನು ಗುರಿಯಾಗಿಟ್ಟುಕೊಂಡು  ಪ್ರಚಾರಕ್ಕಿಳಿಯಲಿದ್ದಾರೆ.