ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ನಾಗರಬಾವಿಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಗಿರೀಶ್‌ಗೌಡ, ಜೆಡಿಎಸ್ ಬೆಂಗಳೂರು ನಗರ ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷರಾದ ಶಾಂತರಾಜು, ರಂಗೇಗೌಡ ಸೇರಿದಂತೆ ನೂರಾರು ಮಂದಿ ಜೆಡಿಎಸ್ ತೊರೆದು ಸಂಸದ ಡಿ.ಕೆ.ಸುರೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಬೆಂಗಳೂರು (ಏ.25) : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ನಾಗರಬಾವಿಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಗಿರೀಶ್‌ಗೌಡ, ಜೆಡಿಎಸ್ ಬೆಂಗಳೂರು ನಗರ ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷರಾದ ಶಾಂತರಾಜು, ರಂಗೇಗೌಡ ಸೇರಿದಂತೆ ನೂರಾರು ಮಂದಿ ಜೆಡಿಎಸ್ ತೊರೆದು ಸಂಸದ ಡಿ.ಕೆ.ಸುರೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಿ.ಕೆ.ಸುರೇಶ್(DK Suresh) ಅವರು, ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ತೊಲಗದಿದ್ದರೆ ಜನರಿಗೆ ನೆಮ್ಮದಿ ಇರುವುದಿಲ್ಲ. ಬಿಜೆಪಿ ಬಡವರು, ಮಧ್ಯಮವರ್ಗ, ರೈತರು, ಕಾರ್ಮಿಕರ ಬದುಕನ್ನು ಕಸಿದುಗೊಂಡಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಅನ್ನಭಾಗ್ಯ ಯೋಜನೆಯಡಿ 7 ಕೆ.ಜಿ ಅಕ್ಕಿ ನೀಡುತ್ತಿದ್ದೇವು. ಈಗ ಬಿಜೆಪಿ 5 ಕೇಜಿ ಅಕ್ಕಿಯನ್ನು ಮಾತ್ರ ಕೊಡುತ್ತಿದೆ. ತೊಗರಿಬೇಳೆ 180 ರು. ಕಡಲೆಬೀಜ 180 ರು. ಅಡುಗೆ ಅನಿಲದ ಬೆಲೆ 1150ಕ್ಕೆ ಏರಿಕೆಯಾಗಿದೆ. ಪೆಟ್ರೋಲ್ ದರ 110 ರು. ಮತ್ತು ಡಿಸೇಲ್ 95 ರು.ಗಳಿಗಿಂತ ಹೆಚ್ಚಾಗಿದೆ. ಮತ್ತೊಮ್ಮೆ ಬಿಜೆಪಿ ಬಂದರೆ ಈಗಿರುವ ಬೆಲೆಗಿಂತ ಎರಡುಪಟ್ಟು ಜಾಸ್ತಿಯಾಗಲಿದೆ ಎಂದು ಎಚ್ಚರಿಸಿದರು.
ಡಿಕೆ ಸಹೋದರರಿಗೆ ಅಭದ್ರತೆ ಕಾಡುತ್ತಿದೆ: ಸಚಿವ ಅಶೋಕ್
ಕಾಂಗ್ರೆಸ್ ನಾಯಕ ಹನುಮಂತರಾಯಪ್ಪ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ಮನೆಗಳಿಗೂ ತಲಾ 200 ಯೂನಿಟ್ ವಿದ್ಯುತ್, ಕುಟುಂಬದ ಮುಖ್ಯಸ್ಥೆಗೆ ಮಾಸಿಕ 2 ಸಾವಿರ ರು., ಪ್ರತಿ ಫಲಾನುಭವಿಗೆ ತಲಾ 10 ಕೆಜಿ ಅಕ್ಕಿ, ಪದವೀಧರ ನಿರುದ್ಯೋಗಿಗಳಿಗೆ ಮೂರು ಸಾವಿರ ರು. ಕೊಡುವ ಭರವಸೆ ಈಡೇರಲಿದೆ ಎಂದರು.
ಆರ್‌ಆರ್‌ನಗರ ಕ್ಷೇತ್ರದ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿದ್ದ ಗಿರೀಶ್ ಗೌಡ ಕ್ಷೇತ್ರದಲ್ಲಿ ಅಮಾಯಕರು. ಬಡವರು. ಮಧ್ಯಮ ವರ್ಗದವರ ಮೇಲೆ ದಬ್ಬಾಳಿಕೆ, ಅಕ್ರಮ ಮತ್ತು ಕಳಪೆ ಕಾಮಗಾರಿ ತೊಲಗಿಸಲು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಗೆಲುವಿಗಾಗಿ ಅಪಾರ ಬೆಂಬಲಿಗರು, ಜೆಡಿಎಸ್ ಮುಖಂಡರು ಕಾರ್ಯಕರ್ತರೊಂದಿಗೆ ಸೇರ್ಪಡೆಯಾಗಿದ್ದೇವೆ ಎಂದರು.
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ; 'ಇದು ಭಾಗ್ಯ ಇದು ಭಾಗ್ಯವಯ್ಯ' ದಾಸರ ಕೀರ್ತನೆ ಹೇಳಿದ ಡಿಕೆಶಿ
ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ವಿಧಾನ ಪರಿಷತ್ ಸದ್ಯಸ್ಯ ಎಸ್.ರವಿ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಅಮರ್ ನಾಥ್. ಕಾಂಗ್ರೆಸ್ ಮುಖಂಡ ಕೊಟ್ಟಿಗೇಪಾಳ್ಯ ಎನ್. ಶೇಖರ್ ಉಪಸ್ಥಿತರಿದ್ದರು.
