ಟಿಕೆಟ್ ಆಕಾಂಕ್ಷಿಗಳು ಜೆಡಿಎಸ್ ಸದಸ್ಯತ್ವ ನೋಂದಣಿಯ ನೇತೃತ್ವವಹಿಸಿ: ಸಾ.ರಾ.ಮಹೇಶ್

ಜೆಡಿಎಸ್ ಸದಸ್ಯತ್ವ ನೋಂದಣಿಯನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳೀಯ ಸಂಸ್ಥೆಗಳ ಟಿಕೆಟ್ ಆಕಾಂಕ್ಷಿಗಳು ಇದರ ನೇತೃತ್ವ ವಹಿಸಿ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್ ಹೇಳಿದರು. 

JDS Membership Registration for Ticket Aspirants Headed by Says Sa Ra Mahesh gvd

ಮೈಸೂರು (ಸೆ.19): ಜೆಡಿಎಸ್ ಸದಸ್ಯತ್ವ ನೋಂದಣಿಯನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳೀಯ ಸಂಸ್ಥೆಗಳ ಟಿಕೆಟ್ ಆಕಾಂಕ್ಷಿಗಳು ಇದರ ನೇತೃತ್ವ ವಹಿಸಿ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್ ಹೇಳಿದರು. ಜೆಡಿಎಸ್ ಪಕ್ಷವು ನಗರದ ಮಂಜುನಾಥಪುರದ ಎಚ್. ಕೆಂಪೇಗೌಡ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ನಗರ ಹಾಗೂ ಜಿಲ್ಲಾ ಘಟಕದ ಸದಸ್ಯತ್ವ ನೋಂದಣಿ ಮತ್ತು ಬೂತ್ ಸಮಿತಿ ಅಭಿಯಾನದಲ್ಲಿ ಅವರು ಮಾತನಾಡಿದರು. ಸದ್ಯದಲ್ಲಿಯೇ ನಗರ ಪಾಲಿಕೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ. ಈ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಸಕ್ರಿಯರಾಗಿ ಸದಸ್ಯತ್ವ ನೊಂದಣಿಯಲ್ಲಿ ತೊಡಗಿಸಿಕೊಳ್ಳಬೇಕು. ಇಲ್ಲದಿದ್ದರೆ ಬಿ ಫಾರಂ ಸಿಗುವುದಿಲ್ಲ ಎಂದರು.

ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸದಸ್ಯತ್ವ ನೋಂದಣಿ ಮಾಡಿಸಲಾಗುತ್ತಿದೆ ಎಂದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಮಾತನಾಡಿ, ಮುಖಂಡರು ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಸದಸ್ಯತ್ವ ನೋಂದಣಿ ಮಾಡಿಸಬೇಕು. ಪಕ್ಷ ಉಳಿಯಬೇಕೆಂದರೆ ಸದಸ್ಯತ್ವ ನೋಂದಣಿ ಆಗಲೇಬೇಕು. ಬೂತ್ ಸಮಿತಿಯು ಎಲ್ಲ ಜಾತಿಯವರನ್ನೂ ಒಳಗೊಂಡಿರುವಂತೆ ನೋಡಿಕೊಳ್ಳಿ. ತಲಾ 10 ರೂ. ಪಡೆದು ಸದಸ್ಯತ್ವ ನೋಂದಣಿ ಮಾಡಿಸಬೇಕು ಎಂದು ಸೂಚಿಸಿದರು.

ಹೋಟೆಲ್ ಅಥವಾ ಎಲ್ಲೋ ಕುಳಿತು ಬೂತ್ ಸಮಿತಿ ಮಾಡಬಾರದು. ಬೂತ್ ನಲ್ಲಿಯೇ ಆ ಕೆಲಸ ನಡೆಯಬೇಕು. ಹಣವನ್ನು ನೀವ್ಯಾರೂ ಹಾಕಬೇಡಿ. ಸದಸ್ಯರಿಂದಲೇ ಕಟ್ಟಿಸಿ. ಆಗ, ಪಕ್ಷಕ್ಕೆ ನಾನೂ ಹಣ ಕೊಟ್ಟಿದ್ದೇನೆ ಎಂಬ ಭಾವನೆ ಕಾರ್ಯಕರ್ತರಲ್ಲಿ ಬಂದು ಚೆನ್ನಾಗಿ ಕೆಲಸ ಮಾಡುತ್ತಾರೆ ಎಂದು ಅವರು ಹೇಳಿದರು. ಜೆಡಿಎಸ್‌ ಎಸ್ಸಿ ವಿಭಾಗದ ಅಧ್ಯಕ್ಷ ಡಾ.ಕೆ. ಅನ್ನದಾನಿ ಮಾತನಾಡಿ, ಪಕ್ಷದ ಸದಸ್ಯತ್ವ ನೋಂದಣಿಯನ್ನು ಈಗ ಗಂಭೀರವಾಗಿ ಪರಿಗಣಿಸಿದ್ದೇವೆ. ಹಿಂದೆ ಯಶಸ್ವಿಯಾಗಿಸಲು ಸಾಧ್ಯವಾಗಿರಲಿಲ್ಲ. ರೈತ ಪರವಾದ ಈ ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಲು ಗಟ್ಟಿಯಾಗಿ ಕಟ್ಟಬೇಕಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಭಾರತ-ನೇಪಾಳ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ: ಕೇಂದ್ರ ಸಚಿವ ವಿ.ಸೋಮಣ್ಣ

ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಶಾಸಕ ಜಿ.ಡಿ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಪಕ್ಷದ ನಗರ ಘಟಕದ ಅಧ್ಯಕ್ಷ ಕೆ.ಟಿ. ಚಲುವೇಗೌಡ, ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹಸ್ವಾಮಿ, ಮುಖಂಡರಾದ ಕೆ.ಟಿ. ಶ್ರೀಕಂಠೇಗೌಡ, ಎಚ್.ಕೆ. ರಾಮು, ಪ್ರೇಮಾ ಶಂಕರೇಗೌಡ, ಆರ್. ಲಿಂಗಪ್ಪ, ಎಂ. ಅಶ್ವಿನ್ ಕುಮಾರ್, ಸತೀಶ್, ಕೃಷ್ಣ, ಶಿವಣ್ಣ, ಭಾಗ್ಯವತಿ, ರಾಜೇಶ್ವರಿ ಸೋಮು, ಎಸ್.ಬಿ.ಎಂ. ಮಂಜು, ಎಂ.ಜೆ. ರವಿಕುಮಾರ್, ಅಶ್ವಿನಿ ಇದ್ದರು. ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾದ ನಂತರ ಪಕ್ಷದಲ್ಲಿ ಹೊಸ ಹುಮ್ಮಸ್ಸು ಬಂದಿದೆ. ಅದನ್ನು ಬಳಸಿಕೊಂಡು ಬೆಳೆಯಬೇಕು.

Latest Videos
Follow Us:
Download App:
  • android
  • ios