ಯಾರನ್ನೋ ಮೆಚ್ಚಿಸಲು ಎಚ್‌ಡಿಕೆ ಕಣ್ಣೀರು ಹಾಕೋ ನಾಟಕವಾಡಿಲ್ಲ: ಪುಟ್ಟರಾಜು
ಉದ್ವೇಗದಿಂದ ಕುಮಾರಸ್ವಾಮಿ ಕಣ್ಣೀರು, ಸಿಎಂ ಸೇರಿದಂತೆ ಸಚಿವರ ಟೀಕೆ ಶೋಭೆಯಲ್ಲ: ಸಿ.ಎಸ್.ಪುಟ್ಟರಾಜು
ಮಂಡ್ಯ(ಆ.13): ತಂದೆ ಆರೋಗ್ಯದ ಪರಿಸ್ಥಿತಿ ನೆನೆದು ಉದ್ವೇಗಕ್ಕೆ ಒಳಗಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು, ವಿಪಕ್ಷ ನಾಯಕರು ಟೀಕಿಸಿದರೆ ಶೋಭೆ ತರುವುದಿಲ್ಲ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಕಿಡಿಕಾರಿದರು. ತಾಲೂಕಿನ ಕೆಆರ್‌ಎಸ್ ಹಿನ್ನೀರಿನಲ್ಲಿ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತಂದೆ ಆರೋಗ್ಯ ಸ್ಥಿತಿ, ರೈತರು ಇನ್ನೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ವೇದನೆಯಿಂದ ಉದ್ವೇಗಕ್ಕೆ ಒಳಗಾಗಿ ಕುಮಾರಸ್ವಾಮಿ ಅವರು ಕಣ್ಣೀರು ಹಾಕಿದ್ದಾರೆಯೇ ಹೊರತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಥವಾ ಇನ್ಯಾರನ್ನೋ ಮೆಚ್ಚಿಸಲು ಕಣ್ಣೀರು ಹಾಕುವ ನಾಟಕವಾಡಿಲ್ಲ ಎಂದರು.
ಸಿಎಂ ಅವರ ತಂದೆ ಬೊಮ್ಮಾಯಿ ಜತೆ ದೇವೇಗೌಡರು ಕೆಲಸ ಮಾಡಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ನೆನೆದು ನಾಗಮಂಗಲದಲ್ಲಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಟೀಕಿಸುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಿಎಂ, ಸಚಿವರು, ವಿಪಕ್ಷ ನಾಯಕರ ಟೀಕೆಗೆ ಪ್ರತ್ಯುತ್ತರ ನೀಡಿದರು.
ಬಿಜೆಪಿ ಸರ್ಕಾರದಲ್ಲಿ ಉದ್ಯೋಗ ಬೇಕೆಂದರೆ ಮಹಿಳೆಯರು ಮಂಚ ಹತ್ತಬೇಕು: ಪ್ರಿಯಾಂಕ ಖರ್ಗೆ ವಾಗ್ದಾಳಿ
ಹೈಕೋರ್ಟ್ ತೀರ್ಪು ಸ್ವಾಗತಾರ್ಹ:
ಭ್ರಷ್ಟರನ್ನು ಭೇಟೆಯಾಡುತ್ತಿದ್ದ ಲೋಕಾಯುಕ್ತಕ್ಕೆ ಮರುಜೀವ ನೀಡಿರುವ ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪು ಸ್ವಾಗತಾರ್ಹವಾಗಿದೆ. ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಷ್ಕ್ರೀಯಗೊಳಿಸಿ ಎಸಿಬಿ ರಚನೆ ಮಾಡಿತ್ತು. ಇದಕ್ಕೆ ಪ್ರಾರಂಭದಿಂದಲೂ ಅಪಸ್ವರವಿತ್ತು ಎಂದರು.
ಎಸಿಬಿ ಅಧಿಕಾರಿಗಳ ನಡಾವಳಿಕೆ ಹಾಗೂ ಒತ್ತಡ ಹಾಗೂ ಪ್ರಭಾವಕ್ಕೆ ಒಳಗಾಗಿ ಕೆಲಸ ಮಾಡುವುದು ನ್ಯಾಯಾಲಯಕ್ಕೆ ಮನವರಿಕೆಯಾಗಿ ಎಸಿಬಿಯನ್ನು ರದ್ದು ಮಾಡಿ ಲೋಕಾಯುಕ್ತಕ್ಕೆ ಶಕ್ತಿ ತುಂಬಿರುವುದು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
ರಾಜ್ಯದ ನೆಲ, ಜಲ, ಭಾಷೆ, ಗಡಿ, ಭೂಮಿ ವಿಚಾರಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಮೆಟ್ಟಿನಿಲ್ಲಬೇಕಾದರೆ ಕನ್ನಡಿಗರು ಸ್ವಾಭಿಮಾನಿಗಳಾಗಬೇಕು. ನಾವು ರಾಷ್ಟ್ರ ಧ್ವಜಕ್ಕೆ ಎಷ್ಟು ಗೌರವ ಕೊಡುತ್ತಿರೋ ಅಷ್ಟೇ ಗೌರವನ್ನು ಕನ್ನಡ ಧ್ವಜಕ್ಕೂ ಕೊಡಬೇಕು ಎಂದರು.
ಸಿಎಂ ಬದಲಾವಣೆ ಯಾವುದೇ ಚಿಂತನೆಯಿಲ್ಲ: ಕೇಂದ್ರ ಸಚಿವ ಜೋಶಿ
ನಟ ದಿ.ಪುನೀತ್ ರಾಜ್ ಕುಮಾರ್ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆ ಮತ್ತು ಸಮಾಜದ ಬಗ್ಗೆ ಅವರಿಗಿದ್ದ ಕಳಕಳಿ ಮೆಚ್ಚುವಂತಹದು. ಹೀಗಾಗಿ ಅವರ ಕುಟುಂಬದ ಖ್ಯಾತ ನಟ ಶಿವರಾಜ್‌ಕುಮಾರ್ ಅವರನ್ನು ಅಹ್ವಾನಿಸಿ ಅಭಿನಂದಿಸಲಾಗಿದೆ ಎಂದರು.
ಕೆಆರ್‌ಎಸ್ ಹಿನ್ನೀರಿನ ಪ್ರದೇಶದಲ್ಲಿ ಮಿಲಿಟರಿ ತರಬೇತಿ ಕೇಂದ್ರ ಸ್ಥಾಪನೆಯಾದರೆ ಯುವಕರಿಗೆ ಉದ್ಯೋಗ ಸಿಗುವ ಜೊತೆಗೆ ಕೆಆರ್‌ಎಸ್ ಅಣಕಟ್ಟೆಗೂ ಸುರಕ್ಷತೆ ಸಿಕ್ಕಿದಂತಾಗುತ್ತದೆ ಎಂದು ಅಭಿಲಾಷೆ ವ್ಯಕ್ತಪಡಿಸಿದರು.
ಈ ವೇಳೆ ಜೆಡಿಎಸ್ ಮುಖಂಡರಾದ ವಕೀಲ ಕಣಿವೆ ಯೋಗೇಶ್, ಸುಂಕಾತೊಣ್ಣೂರು ಗ್ರಾಪಂ ಅಧ್ಯಕ್ಷ ಮಹೇಶ್, ಮಾಜಿ ಅಧ್ಯಕ್ಷ ದೇವೇಗೌಡ, ತಾಪಂ ಮಾಜಿ ಸದಸ್ಯ ಅಲ್ಪಹಳ್ಳಿ ಗೋವಿಂದಯ್ಯ ಇತರರು ಇದ್ದರು.