ಬಿಜೆಪಿಯತ್ತ ಒಲವು ತೋರಿದ್ದ ಜೆಡಿಎಸ್ ಶಾಸಕ, ಇದೀಗ ಕಾಂಗ್ರೆಸ್‌ನತ್ತ ಮುಖ..?
ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡ ಬಿಜೆಪಿ ನಾಯಕ ಗುಂಪಿನಲ್ಲಿ ಕಾಣಿಸಿಕೊಳ್ಳುತ್ತಿದ್ದ ಶಾಸಕ ಇದೀಗ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
ಬೆಂಗಳೂರು, (ಅ.07): ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಸೋಲಿಸಿ ರಾಜ್ಯದ ಗಮನಸೆಳೆದಿದ್ದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರ ರಾಜಕೀಯ ನಡೆ ಭಾರೀ ಕುತೂಹಲ ಮೂಡಿಸಿದೆ.
ಯಾಕಂದ್ರೆ, ಕಾಂಗ್ರೆಸ್೦ ಜೆಡಿಎಸ್ ಮೈತ್ರಿ ಸರ್ಕಾರ ಪನತಗೊಂಡ ಬಳಿಕ ಜಿ.ಟಿ.ದೇವೇಗೌಡ್ರು ಜೆಡಿಎಸ್‌ನಿಂದ ಒಂದು ಕಾಲು ಹೊರಗೆ ಇಟ್ಟಿದ್ದು, ಬಿಜೆಪಿ ನಾಯಕರ ಜೊತೆಗೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಜಿಟಿಡಿ ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವುದು ಪಕ್ಕಾ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಮಬರುತ್ತಿದ್ದವು.
ರಾಜಕೀಯ ಕ್ರಾಂತಿ: BL ಸಂತೋಷ್ ಭೇಟಿಯಾದ ಜೆಡಿಎಸ್ ಶಾಸಕ
ಆದ್ರೆ, ಇದೀಗ ಜಿಟಿಡಿ ತಮ್ಮ ವರಸೆ ಬದಲಿಸಿದ್ದು, ದಿಢೀರ್ ಅಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಹೌದು...ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು JDS ಶಾಸಕ ಜಿ.ಟಿ. ದೇವೇಗೌಡ ಅವರು ಡಿಕೆ ಶಿವಕುಮಾರ್ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದರು.
ಸದ್ಯ ಜಿ.ಟಿ. ದೇವೇಗೌಡ ಜೆಡಿಎಸ್ ನಿಂದ ದೂರ ಉಳಿದಿದ್ದು, ಬಿಜೆಪಿ ನಾಯಕರ ಜೊತೆಗೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಇದೀಗ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಸಿಬಿಐ ದಾಳಿ ಬಗ್ಗೆ ಪರೋಕ್ಷವಾಗಿ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಡಿಕೆಶಿ ಪರ ಬ್ಯಾಟಿಂಗ್ ಮಾಡಿದ್ದಾರೆ.
ಜೆಡಿಎಸ್‌ನಿಂದ ಆಚೆ ಹೋಗಲು ಜಿಟಿ ದೇವೇಗೌಡ್ರಿಗೆ ಗ್ರೀನ್ ಸಿಗ್ನಲ್
ಡಿಕೆಶಿ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿಟಿಡಿ, ಚುನಾವಣೆಯ ಸಂದರ್ಭದಲ್ಲಿ ದಾಳಿಗಳು ಆಗಬಾರದು. ಸಿಬಿಐ ದಾಳಿ ಮಾಡಿದ್ದು ತಪ್ಪು, ಇದು ನನ್ನ ಅಭಿಪ್ರಾಯ ಎಂದರು.
ರೈಡ್ ಆದ ಸಂದರ್ಭದಲ್ಲಿ ಅವರಿಗೆ ಮೀಟ್ ಮಾಡಬೇಕು. ಏಕೆಂದರೆ ಅವರು ನನ್ನ ಸ್ನೇಹಿತ. ನಾನು ಮತ್ತು ಡಿಕೆಶಿ ಬಹಳ ವರ್ಷಗಳಿಂದ ಸ್ನೇಹಿತರು. ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನಿಸಿದ್ದವರು. ಬಾಂಬೆಗೆ ಸಹ ಹೋಗಿದ್ವಿ. ಡಿಕೆಶಿ ಅವರ ಶ್ರೀಮತಿ ನಮ್ಮ ಮೈಸೂರಿನವರು ಎಂದು ಹೇಳಿದರು.
ಒಟ್ಟಿನಲ್ಲಿ ಜೆಡಿಎಸ್‌ನಿಂದ ಅಂತ ಕಾಯ್ದುಕೊಂಡು ಬಿಜೆಪಿ ನಾಯಕರುಗಳ ಜತೆ ಗುರುತಿಸಿಕೊಂಡಿದ್ದ ಜಿ.ಟಿ.ದೇವೇಗೌಡ ಇದೀಗ ದಿಢೀರ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ, ಅವರ ಪರ ಬ್ಯಾಟಿಂಗ್ ಮಾಡಿದ್ದು, ಕುತೂಹಲ ಕೆರಳಿಸಿದೆ.