ತುಮಕೂರು, (ಡಿ.19): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಳ ಒಪ್ಪಂದ ಹಾಗೂ ನಮ್ಮವರಿಂದ ಸೋಲಬೇಕಾಯ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೊತ್ತೊಮ್ಮೆ ಹೇಳಿಕೆ ಕೊಟ್ಟಿದ್ದಾರೆ.

ಸಿದ್ದರಾಮಯ್ಯನವರ ಈ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಮ್ಮ ಅಭಿಪ್ರಾಯಗಳನ್ನ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಜೆಡಿಎಸ್ ಶಾಸ ಹೊಸ ಬಾಂಬ್ ಸಿಡಿಸಿದ್ದಾರೆ.

ಪಕ್ಷದ್ರೋಹಿ ಪಕ್ಷ ಬಿಡಲಿ: ಚಾಮುಂಡೇಶ್ವರಿ ಸೋಲಿನ ಬಗ್ಗೆ ಸಿದ್ದು ಸ್ಫೋಟಕ ಹೇಳಿಕೆ..!

ಮಾಜಿ ಸಿಎಂ ಸಿದ್ದರಾಮಯ್ಯ ಸೋಲಿಸಬೇಕೆಂದು ಬೆಂಬಲ ನೀಡಿದ್ದು ನಿಜ. ಚಾಮುಂಡೇಶ್ವರಿ ಕ್ಷೇತ್ರ ಮಾತ್ರವಲ್ಲದೇ, ಹಲವು ಕ್ಷೇತ್ರಗಳಲ್ಲಿ ಒಳ ಒಪ್ಪಂದವಾಗಿತ್ತು ಎಂದು ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

ಸಿದ್ದರಾಮಯ್ಯಗೆ ಈಗ ಜ್ಞಾನೋದಯವಾಗಿದೆ. ಆದ್ರೆ ಸಿದ್ದರಾಮಯ್ಯ ಸೋಲಿಸಬೇಕೆಂದು ಬೆಂಬಲ ನೀಡಿದ್ದು ನಿಜ. ಚಾಮುಂಡೇಶ್ವರಿ ಕ್ಷೇತ್ರ ಮಾತ್ರವಲ್ಲ, ಹಲವು ಕ್ಷೇತ್ರಗಳಲ್ಲಿ ಒಳ ಒಪ್ಪಂದವಾಗಿತ್ತು. ಒಳ ಒಪ್ಪಂದ ಎಲ್ಲರಿಗೂ ಗೊತ್ತಿರುವಂತ ವಿಚಾರವಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಸೋಲಿನ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿರುವಾಗಲೇ ಗುಬ್ಬಿ ಶಾಸಕ ಶ್ರೀನಿವಾಸ್ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚನ ಮೂಡಿಸಿದೆ.