ಬೆಂಗಳೂರು, [ಮಾ.17]: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಜೆಡಿಎಸ್ ಉಚ್ಚಾಟಿತ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿ ಸೆರ್ಪಡೆಯಾದರು.

ಇಂದು [ಮಂಗಳವಾರ] ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲರುವ ಧವಳಗಿರಿ ನಿವಾಸದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದರು. ಪುಟ್ಟಣ್ಣ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು. 

ಜೆಡಿಎಸ್ ಫಸ್ಟ್ ವಿಕೆಟ್ ಔಟ್: ಪಕ್ಷ ತೊರೆಯುವುದಾಗಿ ಘೋಷಿಸಿದ MLC

ಈ ಹಿಂದೆ ಜೆಡಿಎಸ್ ತೊರೆಯುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದ ಪುಟ್ಟಣ್ಣ, ಮುಂದಿನ ನಡೆಯ ಬಗ್ಗೆ ಬಳಿಕ ತಿಳಿಸುವುದಾಗಿ ಹೇಳಿದ್ದರು. ಎರಡು ಮೂರು ಜನರನ್ನು ಹೊರತುಪಡಿಸಿ ಉಳಿದ ಎಲ್ಲ ಪರಿಷತ್ ಸದಸ್ಯರು ಕೂಡ ಈ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ ಎಂದು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದರು.

ಅಲ್ಲದೇ ಇತ್ತೀಚೆಗೆ ಪುಟಣ್ಣ ಅವರು ಜೆಡಿಎಸ್ ನಿಂದ ದೂರ ಉಳಿದು ಬಿಜೆಪಿ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಪಕ್ಷದಿಂದ ಉಚ್ಚಾಟನೆ ಮಾಡಿದ್ದರು.

ಶಿಕ್ಷಕರ ಕೆಲಸಕ್ಕಿಂತ ಗುಮಾಸ್ತನೇ ಮೇಲು: ಎಂಎಲ್‌ಸಿ ಪುಟ್ಟಣ್ಣ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿರುವ ಪುಟ್ಟಣ್ಣ ಅವರ ಅಧಿಕಾರಾವಧಿ ಮುಂದಿನ ತಿಂಗಳು ಜೂನ್ ವರೆಗೂ ಇದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. 

ಇತ್ತೀಚೆಗಷ್ಟೇ ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಅವರು ಜೆಡಿಎಸ್ ಗೆ ಗುಡ್ ಬೈ ಹೇಳಿದ್ದರು. ಆದ್ರೆ, ಅವರು ಬಿಜೆಪಿಮ ಸೇರುತ್ತಾರಾ ಅಥವಾ ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಎನ್ನುವುದು ಮಾತ್ರ ಇನ್ನು ಖಚಿತವಾಗಿಲ್ಲ.