ನಾಡಪ್ರಭು ಕೆಂಪೇಗೌಡ ಬಡಾವಣೆಯನ್ನ ಪೂರ್ಣಗೊಳಿಸುವಲ್ಲಿ ಬಿಡಿಎ ವಿಫಲವಾಗಿದೆ ಎಂದು ಆರೋಪಿಸಿದ ಟಿ.ಎ. ಶರವಣ 

ಬೆಂಗಳೂರು(ಜು.13):  ನಗರದಲ್ಲಿ ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣವಾಗಿ 7 ವರ್ಷ ಕಳೆದರೂ ಸಮಗ್ರ ಅಭಿವೃದ್ಧಿಯನ್ನು ಕಂಡಿಲ್ಲ. ಈ ಪ್ರಕರಣದ ಬಗ್ಗೆ RERA ದಲ್ಲಿ ಕೇಸ್ ದಾಖಲಾಗಿದೆ. 2021-22 ರ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಜೆಡಿಎಸ್‌ ಎಂಎಲ್‌ಸಿ ಟಿ.ಎ. ಶರವಣ ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು(ಗುರುವಾರ) ಸದನದ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಟಿ.ಎ. ಶರವಣ ಅವರು, ನಾಡಪ್ರಭು ಕೆಂಪೇಗೌಡ ಬಡಾವಣೆಯನ್ನ ಪೂರ್ಣಗೊಳಿಸುವಲ್ಲಿ ಬಿಡಿಎ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. 

ಕೆಂಪೇಗೌಡ ಲೇಔಟಲ್ಲಿ 180 ಎಕರೆಯ ಸೈಟ್‌ ಅಕ್ರಮವಾಗಿ ಪರಿವರ್ತಿಸಿ ಮಾರಾಟ..?

ನಿವೇಶನ ಪಡೆದ ಜನರು ಬ್ಯಾಂಕ್‌ನಿಂದ ಮನೆ ನಿರ್ಮಾಣಕ್ಕೆ ಸಾಲ ಪಡೆದು ವಾಣಿಜ್ಯ ಬಡ್ಡಿ ದರ ಗೃಹ ಸಾಲ ಬಡ್ಡಿ ದರದಿಂದ ತೊಂದರೆ ಅನುಭವಿಸುತ್ತಿದ್ದಾರೆ. ಬಡಾವಣೆಯ ವಿವಿಧೆಡೆಯಲ್ಲಿ ನಿವೇಶನ ಅಭಿವೃದ್ಧಿ, ರಸ್ತೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕೆಂದು ಟಿ.ಎ. ಶರವಣ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.