ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ರಾಜಕೀಯ ಸ್ಥಿತಿ ಚಿಂತಾಜನಕ: ಸಿ.ಎಂ.ಇಬ್ರಾಹಿಂ

ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ರಾಜಕೀಯ ಸ್ಥಿತಿ ಚಿಂತಾಜನಕವಾಗಿದೆ. ಒಕ್ಕಲಿಗರು ಹಾಗೂ ಮುಸ್ಲಿಂರು ರಾಜಕೀಯವಾಗಿ ಒಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರಕಾರ ಒಂದಿಲ್ಲೊಂದು ರೀತಿಯಲ್ಲಿ ಸಮಾಜದಲ್ಲಿ ಶಾಂತಿ ಕದಡುವ ವಾತಾವರಣವನ್ನು ಸೃಷ್ಟಿಮಾಡುತ್ತಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.

JDS State President CM Ibrahim Slams On BJP And Congress gvd

ಮಾಲೂರು (ಮಾ.29): ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ರಾಜಕೀಯ ಸ್ಥಿತಿ ಚಿಂತಾಜನಕವಾಗಿದೆ. ಒಕ್ಕಲಿಗರು ಹಾಗೂ ಮುಸ್ಲಿಂರು ರಾಜಕೀಯವಾಗಿ ಒಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರಕಾರ ಒಂದಿಲ್ಲೊಂದು ರೀತಿಯಲ್ಲಿ ಸಮಾಜದಲ್ಲಿ ಶಾಂತಿ ಕದಡುವ ವಾತಾವರಣವನ್ನು ಸೃಷ್ಟಿಮಾಡುತ್ತಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.

ಅವರು ಪಟ್ಟಣದ ಮಾಲೂರು-ಕೋಲಾರ ಮುಖ್ಯರಸ್ತೆಯ ಸರ್ಕಸ್‌ ಮೈದಾನದ ಆವರಣದಲ್ಲಿ ತಾ.ಜೆಡಿಎಸ್‌ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಯುವಕರು ಹಾಗೂ ಮಹಿಳಾ ಸಮಾವೇಶ ಕಾರ‍್ಯಕ್ರಮದಲ್ಲಿ ಮಾತನಾಡುತ್ತ, ಈಗಿನ ಬಿಜೆಪಿ ಸರಕಾರ ರಾಜಕೀಯ ಲಾಭಕ್ಕಾಗಿ ಮುಸ್ಲಿಂ ಮೀಸಲಾತಿನ್ನು ರದ್ದುಪಡಿಸಿ ಇತರೆ ಸಮುದಾಯಗಳಿಗೆ ಹಂಚುವ ಮೂಲಕ ಮುಸ್ಲಿಂ ಸಮುದಾಯಕ್ಕೆ ದ್ರೋಹ ಮಾಡಿದೆ. ಕಾನೂನಿನ ಅರಿವಿಲ್ಲದ ಸರ್ಕಾರ ಕರಪತ್ರದಂತೆ ಮೀಸಲಾತಿಯನ್ನು ಹಂಚುತ್ತಿದ್ದು, ಬಿಜೆಪಿ ಸರ್ಕಾರ ವೆಂಟಿಲೇಟರ್‌ನಲ್ಲಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಅಭ್ಯರ್ಥಿ ಪಟ್ಟಿ ಶೀಘ್ರವೇ ಘೋಷಣೆ: ನಳಿನ್‌ ಕುಮಾರ್‌ ಕಟೀಲ್‌

ಬಿಜೆಪಿ ವರ್ಚಸ್ಸು ಕುಸಿಯುತ್ತಿದೆ: ರಾಜ್ಯದಲ್ಲಿ ಬಿಜೆಪಿ ಸರಕಾರ ದಿನೇ ದಿನೇ ವರ್ಚಸ್ಸನ್ನು ಕಳೆದುಕೊಳ್ಳುತ್ತಿದೆ. ಇಲ್ಲಿನ ನಾಯಕರಿಗೆ ವರ್ಚಸ್ಸು ಕಡಿಮೆಯಾಗಿರುವುದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕರೆಸಿ ರಸ್ತೆಗಳಲ್ಲಿ ರೋಡ್‌ ಶೋ ನಡೆಸಿ ಪ್ರಚಾರ ಮಾಡಿಕೊಂಡು ಪಕ್ಷದ ವರ್ಚಸ್ಸು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ವಿಧಾನಸಭಾ ಚುನಾವಣೆಗೆ ಮುನ್ನ ನೀಡಿರುವ ಗ್ಯಾರಂಟಿ ಹೆಸರಿನಲ್ಲಿ ಮತ ಬಾಚಲು ಹೊರಟಿದೆ. ಆದರೆ ಜೆಡಿಎಸ್‌ ಜನಪರ ಪಂಚರತ್ನ ಯೋಜನೆಗಳ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ ಎಂದರು.

ಜೆಡಿಎಸ್‌ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಪಂಚರತ್ನ ಯೋಜನೆ ರಥಯಾತ್ರೆಗೆ ರಾಜ್ಯಾದ್ಯಂತ ಅಭೂತ ಪೂರ್ವ ಬೆಂಬಲ ಸಿಕ್ಕಿದೆ. ರಥಯಾತ್ರೆಯು ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಲ್ಲಿ 4 ತಿಂಗಳ ಕಾಲ ಯಶಸ್ವಿಯಾಗಿ ನಡೆಯಿತು. ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಮತ್ತೊಮ್ಮೆ ಆಡಳಿತಕ್ಕೆ ಬರಲಿದೆ ಎಂದರು. ಜೆಡಿಎಸ್‌ ಅಭ್ಯರ್ಥಿ ಜಿ.ಇ.ರಾಮೇಗೌಡ ಮಾತನಾಡಿ, ಭ್ರಷ್ಟಾಚಾರ ರಹಿತ ಉತ್ತಮ ಆಡಳಿತ ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಲು ಪಂಚರತ್ನ ರಥ ಯೋಜನೆ ಅನುಷ್ಠಾನಕ್ಕಾಗಿ ತಾಲೂಕಿನ ಜನತೆ ಜೆಡಿಎಸ್‌ ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು.

ನನ್ನ ರಾಜಕೀಯ ಜೀವನ ಉತ್ತುಂಗಕ್ಕೆ ಏರಿದ್ದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ: ಸಚಿವ ಸಿ.ಸಿ.ಪಾಟೀಲ್‌

ಈ ಸಂದರ್ಭದಲ್ಲಿ ವಿಧಾನಪರಿಷತ್‌ ಸದಸ್ಯ ಇಂಚರ ಗೋವಿಂದರಾಜು, ಜೆಡಿಎಸ್‌ ರಾಜ್ಯ ಹಿರಿಯ ಉಪಾಧ್ಯಕ್ಷ ಜಮೀರ್‌ ಅಹ್ಮದ್‌, ಜಿಲ್ಲಾಧ್ಯಕ್ಷ ನಟರಾಜ್‌, ರಾಜ್ಯ ಉಪಾಧ್ಯಕ್ಷ ಎಚ್‌.ವಿ. ಚಂದ್ರಶೇಖರ್‌ ಗೌಡ, ರಾಜ್ಯ ಉಪಾಧ್ಯಕ್ಷ ವಕ್ಕಲೇರಿ ರಾಮು, ತಾಲೂಕ ಅಧ್ಯಕ್ಷ ಬಲ್ಲಹಳ್ಳಿ ನಾರಾಯಣಸ್ವಾಮಿ, ಜಿಪಂ ಮಾಜಿ ಸದಸ್ಯ ಎಚ್‌.ವಿ. ಶ್ರೀನಿವಾಸ್‌, ತಾಪಂ ಮಾಜಿ ಅಧ್ಯಕ್ಷೆ ತ್ರಿವರ್ಣ ರವಿ, ಜೆಡಿಎಸ್‌ ನಗರಾಧ್ಯಕ್ಷ ಆನಂದ್‌ ಕುಮಾರ್‌, ಜೆಡಿಎಸ್‌ ಪ್ರ. ಕಾರ್ಯದರ್ಶಿ ಜಯಣ್ಣ, ಮತ್ತಿತರರು ಇದ್ದರು.

Latest Videos
Follow Us:
Download App:
  • android
  • ios