ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿರುವುದನ್ನು ಎಚ್.ವಿಶ್ವನಾಥ್ ಸುಳಿವು ನೀಡಿದ್ದಾರೆ. ಅಷ್ಟೇ ಅಲ್ಲದೇ ಅಭ್ಯರ್ಥಿ ಹೆಸರನ್ನು ಬಹಿರಂಗಪಡಿಸಿದ್ದಾರೆ.

ಮೈಸೂರು,(ಜ.27): ಮೈಸೂರು- ಕೊಡಗು ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಫಿಕ್ಸ್ ಆಗಿದ್ದು, ಹುಣಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅಭ್ಯರ್ಥಿ ಹೆಸರು ಘೋಷಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹುಣಸೂರಿನಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ದೋಸ್ತಿ ಸರ್ಕಾರದ ಸೀಟು ಹಂಚಿಕೆ ಬಹುತೇಕ ಪೂರ್ಣಗೊಂಡಿದೆ.

ಲೋಕಸಭೆ ಚುನಾವಣೆ: ರಾಜ್ಯ ಬಿಜೆಪಿಯಲ್ಲಿ ಶುರುವಾಯ್ತು ತಳಮಳ!

 ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಮೈಸೂರು- ಕೊಡಗು ಲೋಕಸಭಾ ಅಭ್ಯರ್ಥಿ ಎಂದು ಹೇಳಿದರು. ಈ ಮೂಲಕ ಮೈಸೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿರುವುದನ್ನು ಬಹಿರಂಗಪಡಿಸಿದ್ದಾರೆ.

ವಿಶ್ವನಾಥ್ ಅವರ ಈ ಹೇಳಿಕೆಯನ್ನು ನೋಡಿದ್ರೆ ಈಗಾಗಲೇ ಮೈಸೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿರುವುದು ಮಾತ್ರವಲ್ಲದೇ ಅಭ್ಯರ್ಥಿಯನ್ನು ಫೈನಲ್ ಆಗಿದೆ.

ರಂಗೇರಿತು ಲೋಕಸಭಾ ಎಲೆಕ್ಷನ್ : ಮೊದಲ ಅಭ್ಯರ್ಥಿ ಘೋಷಿಸಿದ ಯಡಿಯೂರಪ್ಪ

ವಿಶ್ವನಾಥ್ ಘೋಷಿಸಿದಂತೆ ವಿಜಯಶಂಕರ್ ಹಾಗೂ ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ನಡುವೆ ನೇರ ಹಣಾಹಣಿ ನಡೆಯಲಿದೆ.