ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ| ಮೈತ್ರಿ ಪಕ್ಷದ ‘ಕೈ’ಹಿಡಿಯುವುದಾಗಿ ಭರವಸೆ ನೀಡಿದ ಜೆಡಿಎಸ್ ವರಿಷ್ಠ| ಮೇ.19ರಂದು ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ| ಸಮ್ಮಿಶ್ರ ಸರ್ಕಾರ ಎರಡೂ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ ಹೆಚ್.ಡಿ.ದೇವೇಗೌಡ|

ಬೆಂಗಳೂರು(ಏ.24): ಮುಂಬರುವ ಮೇ.19ರಂದು ನಡೆಯಲಿರುವ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಜೆಡಿಎಸ್‌ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌.ಡಿ.ದೇವೇಗೌಡ, ವಿಧಾನಸಭೆ ಉಪಚುನಾವಣೆ ನಡೆಯುವ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ತಮ್ಮ ಪಕ್ಷ ಬೆಂಬಲಿಸಲಿದೆ ಎಂದು ಘೋಷಿಸಿದರು. 

ಆಡಳಿತಾರೂಢ ಸಮ್ಮಿಶ್ರ ಸರ್ಕಾರ ಎರಡೂ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್ ಗೆ ಸಹಕರಿಸಲಿದ್ದಾರೆ ಎಂದು ದೇವೇಗೌಡ ಭರವಸೆ ನೀಡಿದ್ದಾರೆ.

ಸಚಿವ ಸಿ.ಎಸ್‌.ಶಿವಳ್ಳಿ ಹೃದಯಾಘಾತದಿಂದ ನಿಧನ ಹೊಂದಿದ್ದರಿಂದ ಕುಂದಗೋಳ ಕ್ಷೇತ್ರ ತೆರವಾಗಿದ್ದರೆ, ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್‌ ಜಾಧವ್‌ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರಿಂದ ಚಿಂಚೋಳಿ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. 

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು, ಏ.23 ರಂದು ಎರಡನೇ ಹಂತದ ಮತದಾನ ಮುಕ್ತಾಯ ಕಂಡಿದೆ. ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.