Karnataka Politics: 2023ಕ್ಕೆ ಜೆಡಿ​ಎಸ್‌ ಅಧಿ​ಕಾ​ರಕ್ಕೆ ಬರು​ವುದು ನಿಶ್ಚಿತ: ಅನಿತಾ ಕುಮಾರಸ್ವಾಮಿ

*  ಪಕ್ಷಗಳ ದುರಾಡಳಿತ, ಜಾತಿ ರಾಜಕಾರಣದಿಂದ ಬೇಸತ್ತಿರುವ ರಾಜ್ಯದ ಜನ ಬೇಸತ್ತಿದ್ದಾರೆ
*  ರಾಷ್ಟ್ರೀಯ ಪಕ್ಷಗಳ ಕುತಂತ್ರ ಅರಿತುಕೊಂಡ ರಾಜ್ಯದ ಜನತೆ
*  ಜನತಾ ಜಲಧಾರೆಗೆ ಅಭೂತಪೂರ್ವ ಯಶಸ್ಸು

JDS will Come to Power in Karnataka on 2023 Says Anitha Kumaraswamy grg

ರಾಮ​ನ​ಗರ(ಮೇ.22): ರಾಷ್ಟ್ರೀಯ ಪಕ್ಷಗಳ ದುರಾಡಳಿತ ಹಾಗೂ ಜಾತಿ ರಾಜಕಾರಣದಿಂದ ಬೇಸತ್ತಿರುವ ರಾಜ್ಯದ ಜನತೆ ಮುಂದಿನ ದಿನಗಳಲ್ಲಿ ಜೆಡಿಎಸ್‌ನ್ನು ಬೆಂಬಲಿಸಲು ತೀರ್ಮಾನಿಸಿದ್ದು, ಎಚ್‌.ಡಿ. ಕುಮಾರಸ್ವಾಮಿ ಅವರು 2023ಕ್ಕೆ ಮತ್ತೊಮ್ಮೆ ಅಧಿಕಾರಕ್ಕೆ ಬರುವುದ ನಿಶ್ಚಿತವಾಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಭವಿಷ್ಯ ನುಡಿದರು.

ತಾಲೂಕಿನ ಕಸಬಾ ಹಾಗೂ ಕೈಲಾಂಚ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಮತದಾರರು ಜೆಡಿಎಸ್‌ ಪರ ವಾಲಿದ್ದಾರೆ ಎಂಬುದಕ್ಕೆ ಜನತಾ ಜಲಧಾರೆ ಅಭೂತಪೂರ್ವ ಯಶಸ್ಸು ಗಳಿಸಿರುವುದೇ ಸಾಕ್ಷಿ ಎಂದರು.

ಎಚ್‌ಡಿಕೆಗೆ ಶಾಕ್ ಕೊಟ್ಟ ಡಿಕೆ ಬ್ರದರ್ಸ್, ಚನ್ನಪಟ್ಟಣದ ಜೆಡಿಎಸ್‌ ಮುಖಂಡರು ಕಾಂಗ್ರೆಸ್‌ ಸೇರ್ಪಡೆ

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಜಾತಿ-ಜಾತಿಗಳ ನಡುವೆ, ಧರ್ಮ-ಧರ್ಮಗಳ ನಡುವೆ ದ್ವೇಷದ ವಾತಾವರಣ ನಿರ್ಮಿಸಿ, ಮತ ಗಿಟ್ಟಿಸುವುದನ್ನೇ ತಂತ್ರವಾಗಿಸಿಕೊಂಡಿದ್ದಾರೆ. ಸಾಮರಸ್ಯದಿಂದ ಜೀವನ ನಡೆಸುತ್ತಿದ್ದವರು ಇಂದು ಶತೃಗಳಂತೆ ವರ್ತಿಸುತ್ತಿರುವುದನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ದೇಶವು ಯಾವ ಹಂತಕ್ಕೆ ತಲುಪಲಿದೆಯೋ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಜನರು ಶಾಂತಿ, ಸಹಬಾಳ್ವೆಯಿಂದ ಜೀವನ ನಡೆಸುವಂತಹ ವಾತಾವರಣ ಸೃಷ್ಟಿಯಾಗಬೇಕಾದರೆ ಕುಮಾರಸ್ವಾಮಿ ಅವರು ಮತ್ತೊಮ್ಮೆ ಸಿಎಂ ಆಗುವ ಅನಿವಾರ್ಯವಾಗಿದೆ. ಜನರೂ ಕೂಡ ರಾಷ್ಟ್ರೀಯ ಪಕ್ಷಗಳ ಕುತಂತ್ರಗಳನ್ನು ಅರಿತುಕೊಂಡಿದ್ದು ಜೆಡಿಎಸ್‌ ಬೆಂಬಲಿಸಲು ತೀರ್ಮಾನಿಸಿದ್ದಾರೆ. ಹಾಗಾಗಿ 2023ಕ್ಕೆ ಜೆಡಿಎಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ಇದೇ ಸಂಧರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ತೀವ್ರ ಮತ್ತು ಸಾಧಾರಣ ಅಪೌಷ್ಟಿಕ ಮಕ್ಕಳಿಗೆ ಹೆಚ್ಚುವರಿಯಾಗಿ ವಾರದಲ್ಲಿ 3 ದಿನ ತಲಾ 20 ಗ್ರಾಂಗಳಂತೆ ಹಾಲಿನಪುಡಿ, ವಾರದಲ್ಲಿ 3 ದಿನ ಮೂರು ಮೊಟ್ಟೆವಿತರಣೆಗೆ ಶಾಸಕಿ ಅನಿತಾಕುಮಾರಸ್ವಾಮಿ ಮಕ್ಕಳಿಗೆ ವೇದಿಕೆಯಲ್ಲಿ ವಿತರಿಸಿ ಚಾಲನೆ ನೀಡಿದರು.

ಸ್ತ್ರೀ ಶಕ್ತಿ ಸಂಘಗಳು, ಅಂಗನವಾಡಿ, ಆಶಾ ಕಾರ್ಯರ್ತೆಯರ ಸಮಸ್ಯೆಗಳನ್ನು ನಿವಾರಿಸಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಕೆಲಸವನ್ನು ಮುಂದಿನ ದಿನಗಳಲ್ಲಿ ಜೆಡಿಎಸ್‌ ಪಕ್ಷ ಮಾಡಲಿದೆ. ರಾಜ್ಯದ ನೆಲ, ಜಲ, ಗಡಿ ರಕ್ಷಣೆ ವಿಚಾರವಾಗಿ ರಾಜಿಯಾಗದೆ ಜನಪರ ಆಡಳಿತ ಜೆಡಿಎಸ್‌ ಪಕ್ಷದಿಂದ ಮಾತ್ರ ನೀಡಲು ಸಾಧ್ಯ ಎಂದು ಹೇಳಿದರು.

ಆಟದ ವಸ್ತವಾದ ಚನ್ನಪಟ್ಟಣ ತಹಶೀಲ್ದಾರ್ ಹುದ್ದೆ, 24 ಗಂಟೆಯಲ್ಲಿ ಇಬ್ಬರು ತಹಶೀಲ್ದಾರ್ ವರ್ಗಾವಣೆ

ಕಸಬಾ ಹೋಬಳಿಯ ಹಾಗಲಹಳ್ಳಿಯಲ್ಲಿ ಶಾಲಾ ಕಟ್ಟಡ ಹಾಗೂ ಓವರ್‌ ಹೆಡ್‌ ಟ್ಯಾಂಕ್‌ ಉದ್ಘಾಟನೆ, ಬೊಮ್ಮಚ್ಚನಹಳ್ಳಿಯಲ್ಲಿ ಅಂಬೇಡ್ಕರ್‌ ಭವನ ಉದ್ಘಾಟನೆ, ಹರೀಸಂದ್ರ ಗ್ರಾಮದಲ್ಲಿ ಮಹಿಳಾ ಸ್ವಸಹಾಯ ಸಂಘದ ಸಂಜೀವಿನ ಭವನದ ಉದ್ಘಾಟನೆ, ಕೈಲಾಂಚ ಹೋಬಳಿಯ ಚೌಡೇಶ್ವರಿಪುರ ಗ್ರಾಮದಲ್ಲಿ ಹೈಟೆಕ್‌ ಅಂಗನವಾಡಿ ಕಟ್ಟಡದ ಉದ್ಘಾಟನೆ ಹಾಗೂ ಸೋಲಾರ್‌ ಚಾಲಿತ ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆಗೊಳಿಸಿದರು.

ರಾಮನಗರದ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಹರೀಸಂದ್ರ ಗ್ರಾಮದಲ್ಲಿ ನೂರಾರು ಮಹಿಳೆಯರು ಕಳಸಗಳನ್ನು ಹೊತ್ತು ಪೂರ್ಣಕುಂಭ ಸ್ವಾಗತ ನೀಡಿದರು. ಅವರಿಗೆ ಡೊಳ್ಳು ಕುಣಿತ ಕಲಾವಿದರು ಸಾತ್‌ ನೀಡಿದರು.

ಈ ವೇಳೆ ಜೆಡಿಎಸ್‌ ತಾಲೂಕು ಅಧ್ಯಕ್ಷ ರಾಜಶೇರ್ಖ, ಜಿಪಂ ಮಾಜಿ ಅಧ್ಯಕ್ಷ ಎಚ….ಸಿ.ರಾಜು, ಮುಖಂಡರಾದ ರಾಮಕೃಷ್ಣ, ಜಯರಾಮು, ಬಿ.ಟಿ.ಕೃಷ್ಣ, ಮಹದೇವು, ಶಿವರಾಮ, ಹನುಮಂತು, ಜಯಕುಮಾರ್‌ ,ಹರೀಸಂದ್ರ ಗ್ರಾಪಂ ಅಧ್ಯಕ್ಷೆ ಆಶಾ ಮಂಚೇಗೌಡ ಮತ್ತಿತರರು ಇದ್ದರು.
 

Latest Videos
Follow Us:
Download App:
  • android
  • ios