ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರೋದು ಖಚಿತ
- ಜೆಡಿಎಸ್ ಅಧಿಕಾರಕ್ಕೆ ಬರೋದು ಖಚಿತ
- ಜೆಡಿಎಸ್ ಉಪಾಧ್ಯಕ್ಷ ಬಿ.ಕಾಂತರಾಜ್ ಇಂಗಿತ
- ಉಪಾಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆ ಅಭಿನಂದನೆ ಸ್ವೀಕಾರ
ಚಿತ್ರದುರ್ಗ (ಅ.8) : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಅಧಿಕಾರಕ್ಕೆ ಬರುವುದು ಖಚಿತ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ಕಾಂತರಾಜ್ ಹೇಳಿದರು. ಜೆಡಿಎಸ್ ಉಪಾಧ್ಯಕ್ಷರಾಗಿ ನೇಮಕಗೊಂಡಿರುÊ ಹಿನ್ನಲೆ ಇಲ್ಲಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ ಪಕ್ಷದ ವರಿಷ್ಠರು ನನ್ನ ಮೇಲೆ ನಂಬಿಕೆಯಿಟ್ಟು ಜವಾಬ್ದಾರಿ ನೀಡಿದ್ದಾರೆ. ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸುವುದಾಗಿ ಹೇಳಿದರು.
ಅಯ್ಯೋ..! ಜಿಲ್ಲಾಧಿಕಾರಿ ಮನೆ ಮುಂಭಾಗದ ರಸ್ತೆನೂ ಹೀಗೆನಾ?
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನನ್ನನ್ನು ಉಪಾಧ್ಯಕ್ಷನಾಗಿ ನೇಮಿಸಿ ಅಪಾರ ನಿರೀಕ್ಷೆಯಿಟ್ಟಿದ್ದಾರೆ. ಕುಮಾರಣ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ನೀಡಿದ ಯೋಜನೆಗಳನ್ನು ಜನತೆಗೆ ತಲುಪಿಸಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಕೆಲಸ ಮಾಡೋಣ ಎಂದು ತಿಳಿಸಿದರು.
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ. ನಾಯಕ ಸಮುದಾಯಕ್ಕೆ ಜೆಡಿಎಸ್ ಪಕ್ಷ ಹಾಗೂ ವೈಯಕ್ತಿಕವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಎಚ್.ಡಿ.ಕುಮಾರಸ್ವಾಮಿ ಕೊಡುಗೆಯಿಂದ ವರಿಷ್ಠರು ನನ್ನ ಮೇಲಿಟ್ಟಿರುವ ನಿರೀಕ್ಷೆಗೆ ತಕ್ಕಂತೆ ಪಕ್ಷ ಸಂಘಟಿಸುತ್ತೇನೆಂಬ ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ ಮಾತನಾಡಿ, ಪಕ್ಷದ ವರಿಷ್ಠರು ನಮ್ಮ ಜಿಲ್ಲೆಗೆ ಸಮರ್ಥ ನಾಯಕತ್ವ ನೀಡುವ ಉದ್ದೇಶದಿಂದ ಬಿ.ಕಾಂತರಾಜ್‌ರನ್ನು ಜೆಡಿಎಸ್ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿದ್ದಾರೆ. ಈಗಿನಿಂದಲೇ ಪಕ್ಷದ ನಾಯಕತ್ವ ವಹಿಸಿ ಮುಂದಿನ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ತಕ್ಕಪಾಠ ಕಲಿಸಿ ಜಿಲ್ಲೆಯಲ್ಲಿ ಹೊಸ ಸಂಚಲನ ಸೃಷ್ಠಿಸುವಂತೆ ಸಲಹೆ ನೀಡಿದರು.
ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮಠದಹಟ್ಟಿವೀರಣ್ಣ, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಚಿತ್ರದುರ್ಗ ತಾಲೂಕು ಅಧ್ಯಕ್ಷ ತಿಮ್ಮಣ್ಣ, ಹಿರಿಯೂರು ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ, ಹೊಳಲ್ಕೆರೆ ತಾಲೂಕು ಅಧ್ಯಕ್ಷ ಪರಮೇಶ್ವರಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಗೀತಮ್ಮ, ನಗರಸಭೆ ಸದಸ್ಯ ನಸ್ರುಲ್ಲಾ, ಮಾಜಿ ಸದಸ್ಯ ತಿಪ್ಪೇಸ್ವಾಮಿ, ಚಂದ್ರಶೇಖರ್, ಮೆದೇಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯಕುಮಾರ್, ಜಾನುಕೊಂಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಿಜಲಿಂಗಪ್ಪ, ಗುರುಸಿದ್ದಪ್ಪ ಜೆ.ಎನ್.ಕೋಟೆ. ಕಾಟಿಹಳ್ಳಿ ಕರಿಯಪ್ಪ ಇನ್ನು ಮೊದಲಾದವರು ವೇದಿಕೆಯಲ್ಲಿದ್ದರು. ಮದಕರಿನಾಯಕ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಸಂದೀಪ್, ಸೂರಪ್ಪ, ನಗರಸಭೆ ಮಾಜಿ ಸದಸ್ಯ ಈ.ಮಂಜುನಾಥ್ ಬಿ.ಕಾಂತರಾಜ್‌ರವರನ್ನು ಅಭಿನಂದಿಸಿದರು.
ಸಚಿವ ಅಶ್ವತ್ಥ್‌ಗೆ ವಾಮಮಾರ್ಗದಲ್ಲಿ ಒಳ್ಳೆ ಅನುಭವ: ಕುಮಾರಸ್ವಾಮಿ
ನೀವು ಏಕೆ ಶಾಸಕರಾಗಬಾರದು
ರಾಜಕೀಯ ಮೀಸಲಾತಿ ಸಿಕ್ಕಿದ್ದಕ್ಕಾಗಿ ರಾಜ್ಯದಲ್ಲಿ ಹದಿನೈದರಿಂದ ಇಪ್ಪತ್ತು ನಾಯಕ ಜನಾಂಗದ ಶಾಸಕರಿದ್ದಾರೆ. ಇಲ್ಲದಿದ್ದರೆ ನಾಯಕ ಸಮಾಜವನ್ನು ಯಾರು ಕೇಳುತ್ತಿರಲಿಲ್ಲ. ಮೈಚಳಿ ಬಿಟ್ಟು ಹೊರಗೆ ಬನ್ನಿ ಸರ್ಕಾರಿ ನೌಕರಿಯಲ್ಲಿದ್ದ ಟಿ.ರಘುಮೂರ್ತಿ ಚಳ್ಳಕೆರೆ ವಿಧಾನಸಭೆಯಿಂದ ಸ್ಪರ್ಧಿಸಿ ಶಾಸಕರಾಗಿದ್ದಾರೆಂದರೆ ನೀವು ಏಕೆ ಶಾಸಕರಾಗಬಾರದು. ಚಳ್ಳಕೆರೆ, ಮೊಳಕಾಲ್ಮುರು ಕ್ಷೇತ್ರದಿಂದಲಾದರೂ ಸ್ಪರ್ಧಿಸಿ. ಚಿತ್ರದುರ್ಗದಿಂದ ಸ್ಪರ್ಧಿಸಲು ಯಾರದು ಅಡ್ಡಿಯಿಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ ಹೇಳಿದರು.